ಐಪಿಎಲ್ 2021: ಲೋ ಸ್ಕೋರಿಂಗ್ ಥ್ರಿಲ್ಲರ್‌ನಲ್ಲಿ ಸಿಎಸ್‌ಕೆಗೆ ಸೋಲುಣಿಸಿದ ಡೆಲ್ಲಿ ಹುಡುಗರು

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರೋಚಕ ಅಂತ್ಯಕಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 3 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ರಿಷಭ್ ಪಂತ್ ಪಡೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 136 ರನ್‌ಗಳ ಸಾಧಾರಣ ಗುರಿ ನೀಡಿತ್ತು. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಬ್ಯಾಟ್ಸ್‌ಮನ್‌ಗಳಿಗೆ ಅತ್ಯಂತ ಸವಾಲಿನದಾಗಿತ್ತು. ಇದನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಯ ಹಂತದಲ್ಲಿ ಒಂದರ ಹಿಂದೊಂದರಂತೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಾಗಿತ್ತು. ಆದರೆ ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಗೆದ್ದು ಬೀಗಿದೆ.

ಬ್ಯಾಟಿಂಗ್‌ನಲ್ಲಿ ಎಡವಿದ ಸಿಎಸ್‌ಕೆ
ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಸತತವಾಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದ ಆರಂಭಿಕ ಜೋಡಿ ಇಂದು ವೈಫಲ್ಯವನ್ನು ಅನುಭವಿಸಿದೆ. ತುವ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಹಾಗೂ ಫಾಪ್ ಡು ಪ್ಲೆಸಿಸ್ ಮೊದಲ ವಿಕೆಟ್‌ಗೆ 28 ರನ್‌ಗಳಿಸಲಷ್ಟೇ ಶಕ್ತರಾದರು. ಡು ಪ್ಲೆಸಿಸ್ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಅದಾದ ನಂತರ ಋತುರಾಜ್ ಗಾಯಕ್ವಾಡ್ ಕೂಡ 13 ರನ್‌ಗಳಿಗೆ ಆಟ ಮುಗಿಸಿದರು. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಇದೇ ಮೊದಲ ಬಾರಿಗೆ ಕಣಕ್ಕಿಳಿದ ರಾಬಿನ್ ಉತ್ತಪ್ಪ 19 ಎಸೆತಗಳನ್ನು ಎದುರಿಸಿ 19 ರನ್‌ಗಳಿಸಿ ವಿಕೆಟ್ ಕಲೆದುಕೊಂಡರು. ನಾಲ್ಕನೇ ಕ್ರಮಾಂಕದಲ್ಲಿಳಿದ ಮೊಯೀನ್ ಅಲಿ 5 ರನ್‌ಗಳಿಸಿ ಔಟಾದರು. 62 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಚೆನ್ನೈ ಸೂಪರ್ ಕಿಂಗ್ಸ್ ಸಂಕಷ್ಟದಲ್ಲಿದ್ದಾಗ ಅಂಬಾಟಿ ರಾಯುಡು ಹಾಗೂ ನಾಯಕ ಧೋನಿ ತಂಡಕ್ಕೆ ಆಸರೆಯಾದರು.
ಅನುಭವಿ ಅಂಬಾಟಿ ರಾಯುಡು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಉತ್ತಮ ಇನ್ನಿಂಗ್ಸ್ ಆಡಿದರು. 43 ಎಸೆತಗಳನ್ನು ಎದುರಿಸಿದ ರಾಯುಡು 55 ರನ್‌ಗಳಿಸಿ ಅಜೇಯವಾಗಿಳಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಕುಸಿಯದಂತೆ ನೋಡಿಕೊಂಡಿದ್ದಲ್ಲದೆ ತಂಡದ ಮೊತ್ತ ಹೆಚ್ಚಲು ಕಾರಣರಾದರು. ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲಿ 27 ಎಸೆತ ಎದುರಿಸಿ 18 ರನ್ ಬಾರಿಸಿದರು ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 136 ರನ್‌ಗಳಿಸಿತು.

ಡೆಲ್ಲಿಯದ್ದೂ ಅದೇ ಕಥೆ
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ 137 ರನ್‌ಗಳ ಗುರಿಯನ್ನು ಬೆನ್ನಟ್ಟುದ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಪರವಾಗಿ ಆರಂಭಿಕ ಆಟಗಾರ ಪೃಥ್ವಿ ಶಾ ಮತ್ತೊಂದು ವೈಫಲ್ಯ ಅನುಭವಿಸಿದರು. ನಂತರ ಶ್ರೇಯಸ್ ಐಯ್ಯರ್ ಕೂಡ 2 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ನಾಯಕ ರಿಷಭ್ ಪಂತ್ 15 ರನ್‌ಗಳ ಕೊಡುಗೆ ನಿಡಿ ಫೆವಿಲಿಯನ್ ಸೇರಿಕೊಂಡರು. ನಂತರ ರಿಪಾಲ್ ಪಟೇಲ್ 18 ರನ್‌ಗಳಿಸಿ ಔಟಾದರು. ಬಳಿಕ ಆರ್ ಅಶ್ವಿನ್ ಕೂಡ 2 ರನ್‌ಗಳಿಸಿ ಔಟಾದರು. ನಂತರ ಉತ್ತಮ ಪ್ರದರ್ಶನ ನೀಡುತ್ತಿದ್ದ ಆರಂಭಿಕ ಆಟಗಾರ ಶಿಖರ್ ಧವನ್ ಕೂಡ ಈ ಸಂದರ್ಭದಲ್ಲಿ ತಮ್ಮ ವಿಕೆಟ್ ಕಳೆದುಕೊಂಡರು.
ಈ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 99 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು. ಈ ಸಂದರ್ಭದಲ್ಲಿ ಶಿಮ್ರಾನ್ ಹೇಟ್ಮೇರ್ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಜವಾಬ್ಧಾರಿಯುತ ಆಟವನ್ನು ಪ್ರದರ್ಶಿಸಿದರು. ಆದರೆ ಅಂತಿಮ ಹಂತದಲ್ಲಿ ತಂಡದ ಗೆಲುವಿಗೆ 4 ಎಸೆತಗಳಲ್ಲಿ 2 ರನ್‌ಗಳ ಅಗತ್ಯವಿದ್ದಾಗ ಮತ್ತೊಂದು ತಿದಿಯಲ್ಲಿದ್ದ ಅಕ್ಷರ್ ಪಟೇಲ್ ಔಟಾಗುವ ಮೂಲಕ ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆತಂಕ ಹೆಚ್ಚಾಯಿತು. ಆದರೆ ಮುಂದಿನ ಎಸೆತದಲ್ಲಿ ಕಗಿಸೋ ರಬಡಾ ಬೌಂಡರಿ ಬಾರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವನ್ನು ಸಾರಿದರು.

ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್
ಇನ್ನು ಈ ರೋಚಕ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಈಗ ಅಗ್ರಸ್ಥಾನಕ್ಕೇರಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಟೂರ್ನಿಯ್ಲಲಿ ಅಗ್ರಸ್ಥಾನಿಯಾಗಿತ್ತು. ಈ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸಮಾನ ಅಂಕವನ್ನು ಹೊಂದಿತ್ತು. ಆದರೆ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದ್ದ ಕಾರಣ ಅಗ್ರಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಈಗ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ತಂಡಕ್ಕಿಂತ ಎರಡು ಅಂಕ ಹೆಚ್ಚು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಗಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈಗ 20 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರಿಪಾಲ್ ಪಟೇಲ್, ಅಕ್ಷರ್ ಪಟೇಲ್, ಶಿಮ್ರಾನ್ ಹೆಟ್ಮೇರ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ
ಬೆಂಚ್: ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೋಯಿನಿಸ್, ಉಮೇಶ್ ಯಾದವ್, ಲುಕ್ಮಾನ್ ಮೇರಿವಾಲಾ, ಟಾಮ್ ಕರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಸ್ಟೀವನ್ ಸ್ಮಿತ್
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇಯ್ನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಇಮ್ರಾನ್ ತಾಹಿರ್, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಹರಿಶಂಕರ್ ರೆಡ್ಡಿ, ಭಗತ್ ವರ್ಮ, ಸ್ಯಾಮ್ ಕರನ್, ಕೆಎಂ ಆಸಿಫ್, ಸುರೇಶ್ ರೈನಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications