For Quick Alerts
ALLOW NOTIFICATIONS  
For Daily Alerts
 

CSK vs DC: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 50, CSK vs DC Preview, Pitch Report, Playing XIs, Live streaming

ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಪ್ಲೇ ಆಫ್ ಹಂತದ ಸನಿಹಕ್ಕೆ ಬಂದಿದ್ದು, ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಸುತ್ತಿನ ಪ್ರವೇಶವನ್ನು ಖಚಿತಪಡಿಸಿಕೊಂಡಿವೆ. ಇನ್ನುಳಿದಂತೆ ಕೋಲ್ಕತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಾಲ್ಕನೇ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ.

ಇನ್ನು ಈ ಬಾರಿಯ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿತು. ಇದರ ಬೆನ್ನಲ್ಲೇ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ತಲುಪುವುದರ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಸಹ ತಲಾ 12 ಪಂದ್ಯಗಳಲ್ಲಿ ಸೆಣಸಾಡಿದ್ದು, ತಲಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ ಮತ್ತು ತಲಾ 3 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 18 ಅಂಕಗಳನ್ನು ಪಡೆದುಕೊಂಡಿವೆ. ಎರಡೂ ತಂಡಗಳು ಸಹ ಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೆಟ್ ರನ್ ರೇಟ್ ಅಧಿಕವಾಗಿರುವ ಕಾರಣದಿಂದಾಗಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಹೀಗೆ ಟೂರ್ನಿಯಲ್ಲಿ ಸಮಬಲವನ್ನು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ( ಅಕ್ಟೋಬರ್ 4 ) ನಡೆಯಲಿರುವ ಪಂದ್ಯದಲ್ಲಿ ಸೆಣಸಾಡಲಿದ್ದು ಪಂದ್ಯ ಗೆದ್ದ ತಂಡ ಅಗ್ರ ಸ್ಥಾನವನ್ನು ಪಡೆದುಕೊಳ್ಳಲಿದೆ. ಇನ್ನು ಈ ಪಂದ್ಯದ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಪಂದ್ಯದ ವಿವರ:

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಇಂದಿನ ಪಂದ್ಯ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯವಾಗಿದ್ದು ದುಬೈ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತದ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಪ್ರಾರಂಭವಾಗಲಿದೆ.

ಪಿಚ್‌ ವರದಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.

ನೇರಪ್ರಸಾರದ ಮಾಹಿತಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ಶ್ರೇಯನ್ಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್ / ನಾಯಕ), ಶಿಮ್ರಾನ್ ಹೆಟ್ಮೇಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ / ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಕೆಎಂ ಆಸಿಫ್, ಲುಂಗಿ ಎನ್ಗಿಡಿ

Story first published: Monday, October 4, 2021, 13:51 [IST]
Other articles published on Oct 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+