
ಐಪಿಎಲ್ ಅಂಗಳದಲ್ಲಿ ಇಂದು 50ನೇ ಮುಖಾಮುಖಿ ಈ ಬಾರಿಯ ಟೂರ್ನಿಯ ಎರಡು ಬಲಿಷ್ಠ ತಂಡಗಳ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸಾಧಾರಣ ಗುರಿ ನೀಡಿದೆ. ನಿಗದಿತ 20 ಓವರ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 136 ರನ್‌ಗಳಿಸಲಷ್ಟೇ ಶಕ್ತವಾಯಿತು.
ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಸತತವಾಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದ ಆರಂಭಿಕ ಜೋಡಿ ಇಂದು ವೈಫಲ್ಯವನ್ನು ಅನುಭವಿಸಿದೆ. ತುವ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಹಾಗೂ ಫಾಪ್ ಡು ಪ್ಲೆಸಿಸ್ ಮೊದಲ ವಿಕೆಟ್‌ಗೆ 28 ರನ್‌ಗಳಿಸಲಷ್ಟೇ ಶಕ್ತರಾದರು. ಡು ಪ್ಲೆಸಿಸ್ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಅದಾದ ನಂತರ ಋತುರಾಜ್ ಗಾಯಕ್ವಾಡ್ ಕೂಡ 13 ರನ್‌ಗಳಿಗೆ ಆಟ ಮುಗಿಸಿದರು.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಇದೇ ಮೊದಲ ಬಾರಿಗೆ ಕಣಕ್ಕಿಳಿದ ರಾಬಿನ್ ಉತ್ತಪ್ಪ 19 ಎಸೆತಗಳನ್ನು ಎದುರಿಸಿ 19 ರನ್‌ಗಳಿಸಿ ವಿಕೆಟ್ ಕಲೆದುಕೊಂಡರು. ನಾಲ್ಕನೇ ಕ್ರಮಾಂಕದಲ್ಲಿಳಿದ ಮೊಯೀನ್ ಅಲಿ 5 ರನ್‌ಗಳಿಸಿ ಔಟಾದರು. 62 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಚೆನ್ನೈ ಸೂಪರ್ ಕಿಂಗ್ಸ್ ಸಂಕಷ್ಟದಲ್ಲಿದ್ದಾಗ ಅಂಬಾಟಿ ರಾಯುಡು ಹಾಗೂ ನಾಯಕ ಧೋನಿ ತಂಡಕ್ಕೆ ಆಸರೆಯಾದರು.
ಅನುಭವಿ ಅಂಬಾಟಿ ರಾಯುಡು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಉತ್ತಮ ಇನ್ನಿಂಗ್ಸ್ ಆಡಿದರು. 43 ಎಸೆತಗಳನ್ನು ಎದುರಿಸಿದ ರಾಯುಡು 55 ರನ್‌ಗಳಿಸಿ ಅಜೇಯವಾಗಿಳಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಕುಸಿಯದಂತೆ ನೋಡಿಕೊಂಡಿದ್ದಲ್ಲದೆ ತಂಡದ ಮೊತ್ತ ಹೆಚ್ಚಲು ಕಾರಣರಾದರು. ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲಿ 27 ಎಸೆತ ಎದುರಿಸಿ 18 ರನ್ ಬಾರಿಸಿದರು ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 136 ರನ್‌ಗಳಿಸಿತು.
ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ದು ಅಕ್ಷರ್ ಪಟೇಲ್. ನಾಲ್ಕು ಓವರ್‌ಗಳಲ್ಲಿ ಅಕ್ಷರ್ ಕೇವಲ 18 ರನ್ ನೀಡಿ ಎರಡು ವಿಕೆಟ್ ಕಬಳಿಸಿದರು. ಅನ್ರಿಚ್ ನಾರ್ಕಿಯಾ, ಆವೇಶ್ ಖಾನ್ ಹಾಗೂ ಆರ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI:ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರಿಪಾಲ್ ಪಟೇಲ್, ಅಕ್ಷರ್ ಪಟೇಲ್, ಶಿಮ್ರಾನ್ ಹೆಟ್ಮೇರ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ
ಬೆಂಚ್: ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೋಯಿನಿಸ್, ಉಮೇಶ್ ಯಾದವ್, ಲುಕ್ಮಾನ್ ಮೇರಿವಾಲಾ, ಟಾಮ್ ಕರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಇಶಾಂತ್ ಶರ್ಮಾ,ಅಮಿತ್ ಮಿಶ್ರಾ, ಅಜಿಂಕ್ಯ ರಹಾನೆ, ಸ್ಟೀವನ್ ಸ್ಮಿತ್
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇಯ್ನ್ ಬ್ರಾವೋ,ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಇಮ್ರಾನ್ ತಾಹಿರ್, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಹರಿಶಂಕರ್ ರೆಡ್ಡಿ,ಸ್ಯಾಮ್ ಕರನ್, ಭಗತ್ ವರ್ಮ, ಕೆಎಂ ಆಸಿಫ್, ಸುರೇಶ್ ರೈನಾ