For Quick Alerts
ALLOW NOTIFICATIONS  
For Daily Alerts
 

MI vs RR: ರಾಜಸ್ಥಾನ್ ವಿರುದ್ಧ ಗೆದ್ದು ಪ್ಲೇಆಫ್ ಆಸೆ ಉಳಿಸಿಕೊಳ್ಳುತ್ತಾ ಮುಂಬೈ? ಬಲಿಷ್ಠ ತಂಡ ಯಾವುದು?

 IPL 2021, Match 51: MI vs RR Head-to-head record details

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಹೀಗೆ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ್ದು ಇನ್ನುಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ತಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪ್ಲೇ ಆಫ್ ಅಂತಿಮ ಪ್ರವೇಶಕ್ಕೆ ಪೈಪೋಟಿ ಏರ್ಪಟ್ಟಿದೆ.

ಕೋಲ್ಕತಾ ನೈಟ್ ರೈಡರ್ಸ್ ತಂಡ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿಗಿಂತ ಉನ್ನತ ಮಟ್ಟದಲ್ಲಿದ್ದು ಇಂದು ರಾಜಸ್ತಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳಲಿದ್ದು ಸೋಲುವ ತಂಡ ಪ್ಲೇ ಆಫ್ ಆಸೆಯನ್ನು ಕೈಬಿಡಬೇಕಾಗುತ್ತದೆ. ಹೀಗಾಗಿ ಇಂದು ಮುಂಬೈ ಇಂಡಿಯನ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದ್ದು ಈ ಎರಡೂ ತಂಡಗಳ ನಡುವಿನ ಹಣಾಹಣಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದವರು ಯಾರು ಎಂಬ ಮಾಹಿತಿ ಮುಂದೆ ಇದೆ ಓದಿ.

ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು 1 ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮುನ್ನಡೆಯನ್ನು ಕಾಯ್ದುಕೊಂಡಿದೆ.

'ಧೋನಿ ಸಿಎಸ್‌ಕೆ ಪರ ಏನೂ ಮಾಡಿಲ್ಲ, ಆದರೂ ತಂಡ ಪ್ಲೇಆಫ್ ತಲುಪಿದೆ' ಎಂದ ಮಾಜಿ ಕ್ರಿಕೆಟಿಗ

ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಯಾರು ಹೆಚ್ಚು ಗೆದ್ದವರು?

ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ 2 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗೆ ಇತ್ತಂಡಗಳ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮುನ್ನಡೆ ಕಾಯ್ದುಕೊಂಡಿದೆ.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಗೆದ್ದವರಾರು?

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಮೊದಲನೇ ಸೆಣಸಾಟದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಗೆಲುವನ್ನು ಸಾಧಿಸಿತ್ತು.

Story first published: Tuesday, October 5, 2021, 13:29 [IST]
Other articles published on Oct 5, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+