Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RR: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 51, MI vs RR Preview, Pitch Report, Playing XIs, Live streaming

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಹೀಗೆ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಟ್ಟಿದ್ದು, ಉಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ತಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪ್ಲೇ ಆಫ್ ಸುತ್ತಿನ ಅರ್ಹತೆಯ ಅಂತಿಮ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ.

ಇಂದು ರಾಜಸ್ತಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳಲಿದ್ದು ಸೋಲುವ ತಂಡ ಪ್ಲೇ ಆಫ್ ಆಸೆಯನ್ನು ಕೈಬಿಡಬೇಕಾಗುತ್ತದೆ. ಹೀಗಾಗಿ ಇಂದು ಮುಂಬೈ ಇಂಡಿಯನ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದ್ದು ಈ ಪಂದ್ಯದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಪಂದ್ಯದ ವಿವರ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 51ನೇ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಕ್ಟೋಬರ್ 5ರ ಮಂಗಳವಾರರಂದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿದ್ದು, ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ:

ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಿಚ್‌ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಬೌಂಡರಿ ಲೈನ್ ಕೂಡ ಹತ್ತಿರದಲ್ಲಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಬೌಂಡರಿ, ಸಿಕ್ಸ್ ಮತ್ತು ರನ್ ಸಿಡಿಸಲು ಸಹಕಾರಿಯಾಗಲಿದೆ. ಇನ್ನು ಈ ಪಿಚ್‌ನಲ್ಲಿ ಬೌಲರ್‌ಗಳು ತುಸು ಹೆಚ್ಚಿನ ಶ್ರಮವಹಿಸಿ ಬೌಲಿಂಗ್ ಮಾಡಬೇಕಾದ ಅಗತ್ಯತೆಯಿದೆ, ಬೌಲರ್‌ಗಳಿಗೆ ವಿಕೆಟ್ ಬೀಳುವುದು ಕಷ್ಟಕರವಾಗಿರಲಿದೆ, ಅದರಲ್ಲೂ ವೇಗಿಗಳಿಗೆ ಈ ಪಿಚ್ ಹೆಚ್ಚಾಗಿ ಕಾಡಲಿದೆ.

ನೇರಪ್ರಸಾರದ ಮಾಹಿತಿ:

ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿವಂ ದುಬೆ, ಗ್ಲೆನ್ ಫಿಲಿಪ್ಸ್, ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯಾ, ಆಕಾಶ್ ಸಿಂಗ್, ಮಯಾಂಕ್ ಮಾರ್ಕಂಡೆ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

Story first published: Tuesday, October 5, 2021, 13:28 [IST]
Other articles published on Oct 5, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+