RCB vs SRH: ಐಪಿಎಲ್ ಮುಖಾಮುಖಿ ಪಂದ್ಯಗಳಲ್ಲಿ ಯಾರು ಬಲಿಷ್ಠರು?

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.
ಹೀಗೆ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಲವು ವರ್ಷಗಳ ನಂತರ ಇತರೆ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗದೆರ ನೇರವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಲ್ಲಾ ತಂಡಗಳಿಗಿಂತ ಅತಿ ಕಳಪೆ ತಂಡ ಎನಿಸಿಕೊಂಡಿರುವುದೆಂದರೆ ಅದು ಸನ್ ರೈಸರ್ಸ್ ಹೈದರಾಬಾದ್ ತಂಡ. ಹೌದು, ತಂಡದ ನಾಯಕತ್ವದಲ್ಲಿನ ಗೊಂದಲದ ಜೊತೆ ಟೂರ್ನಿಯ ಮಧ್ಯದಲ್ಲಿ ನಾಯಕನ ಬದಲಾವಣೆಯನ್ನು ಮಾಡಿದರೂ ಸಹ ಸಾಲು ಸಾಲು ಸೋಲುಗಳನ್ನು ಕಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇದುವರೆಗೂ 12 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಜಯಗಳಿಸಿ, 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸದ್ಯ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಕಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಇದುವರೆಗೂ ಒಟ್ಟು 12 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆದ್ದು, ಬರೋಬ್ಬರಿ 10 ಪಂದ್ಯಗಳಲ್ಲಿ ಸೋಲುವುದರ ಮೂಲಕ 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಸೀಮಿತವಾಗಿದೆ.
ಹೀಗೆ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಕಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ( ಅಕ್ಟೋಬರ್ 6) ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣಸಾಟ ನಡೆಸಲಿದ್ದು, ಇತ್ತಂಡಗಳು ಐಪಿಎಲ್ ಇತಿಹಾಸದಲ್ಲಿ ಮುಖಾಮುಖಿಯಾಗಿರುವ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಹೆಚ್ಚು ಗೆದ್ದವರಾರು?
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 19 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಪಂದ್ಯಗಳಲ್ಲಿ ಗೆದ್ದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು 1 ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಐಪಿಎಲ್ ಇತಿಹಾಸದ ಒಟ್ಟಾರೆ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲುಗೈ ಸಾಧಿಸಿದೆ.
ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಹೆಚ್ಚು ಗೆದ್ದವರಾರು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 2 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಹೀಗೆ ಇತ್ತಂಡಗಳ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇಲುಗೈ ಸಾಧಿಸಿದೆ.
ಶೈಖ್ ಜಾಯದ್ ಕ್ರೀಡಾಂಗಣದ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಅಬುಧಾಬಿಯ ಶೈಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವನ್ನು ಸಾಧಿಸಿದೆ.
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲ ಪಂದ್ಯದ ಫಲಿತಾಂಶ:
ಸದ್ಯ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳ ನಡುವಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವನ್ನು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications