ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs SRH: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 52, RCB vs SRH Preview, Pitch Report, Playing XIs, Live streaming

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಅತ್ತ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಲ್ಲಾ ತಂಡಗಳಿಗಿಂತ ಅತಿ ಕಳಪೆ ತಂಡ ಎನಿಸಿಕೊಂಡಿರುವುದೆಂದರೆ ಅದು ಸನ್ ರೈಸರ್ಸ್ ಹೈದರಾಬಾದ್ ತಂಡ. ಹೌದು, ತಂಡದ ನಾಯಕತ್ವದಲ್ಲಿನ ಗೊಂದಲದ ಜೊತೆ ಟೂರ್ನಿಯ ಮಧ್ಯದಲ್ಲಿ ನಾಯಕನ ಬದಲಾವಣೆಯನ್ನು ಮಾಡಿದರೂ ಸಹ ಸಾಲು ಸಾಲು ಸೋಲುಗಳನ್ನು ಕಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದೆ.

ಧೋನಿ ಐಪಿಎಲ್ ನಿವೃತ್ತಿ ಸುದ್ದಿಗೆ ತಿರುವು; ತಾವು ಆಡಲಿರುವ ಕೊನೆಯ ಪಂದ್ಯದ ಕುರಿತು ಬಾಯ್ಬಿಟ್ಟ ಧೋನಿ!ಧೋನಿ ಐಪಿಎಲ್ ನಿವೃತ್ತಿ ಸುದ್ದಿಗೆ ತಿರುವು; ತಾವು ಆಡಲಿರುವ ಕೊನೆಯ ಪಂದ್ಯದ ಕುರಿತು ಬಾಯ್ಬಿಟ್ಟ ಧೋನಿ!

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದರೆ, ಕೇವಲ 4 ಅಂಕಗಳನ್ನು ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಸೀಮಿತವಾಗಿದೆ. ಹೀಗೆ ಟೂರ್ನಿಯಲ್ಲಿ ಸತತವಾಗಿ ಸೋತು ಕಂಗೆಟ್ಟಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ( ಅಕ್ಟೋಬರ್ 6 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಈ ಪಂದ್ಯದ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ.

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 52ನೇ ಪಂದ್ಯ ಅಕ್ಟೋಬರ್ 6ರ ಬುಧವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30ಕ್ಕೆ ಆರಂಭಗೊಳ್ಳಲಿದೆ.

ಪಿಚ್ ವರದಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಉಪಕಾರಿಯಾಗಿರಲಿದೆ ಮತ್ತು ಸ್ಪಿನ್ ಬೌಲರ್‌ಗಳಿಗಿಂತ ವೇಗಿಗಳಿಗೆ ಈ ಪಿಚ್ ಹೆಚ್ಚು ಸಹಕಾರಿಯಾಗಿರಲಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡದ ಸರಾಸರಿ ಮೊತ್ತ 182 ರನ್ ಇದೆ.

ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆದ್ದರೆ, ಮುಂಬೈ ಪ್ಲೇಆಫ್ ಪ್ರವೇಶಿಸಲು ಈ ಅಂತರದಲ್ಲಿ ಗೆಲ್ಲಲೇಬೇಕು!ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆದ್ದರೆ, ಮುಂಬೈ ಪ್ಲೇಆಫ್ ಪ್ರವೇಶಿಸಲು ಈ ಅಂತರದಲ್ಲಿ ಗೆಲ್ಲಲೇಬೇಕು!

ನೇರಪ್ರಸಾರದ ಮಾಹಿತಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹ್ಮದ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

RCB ನಿನ್ನೆ ಸೋಲಲು Padikkal ಮುಖ್ಯ ಕಾರಣವೇ | Oneindia Kannada

ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಮ್ ಗಾರ್ಗ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಸಿದ್ದಾರ್ಥ್ ಕೌಲ್

Story first published: Wednesday, October 6, 2021, 12:40 [IST]
Other articles published on Oct 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X