For Quick Alerts
ALLOW NOTIFICATIONS  
For Daily Alerts
 

CSK vs PBKS: ಐಪಿಎಲ್ ಮುಖಾಮುಖಿ ಪಂದ್ಯಗಳಲ್ಲಿ ಯಾರು ಬಲಿಷ್ಠರು?

IPL 2021, Match 53: CSK vs PBKS Head-to-head record details

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದು ತಲುಪಿದ್ದು ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯಲಿರುವ ನಾಲ್ಕನೇ ತಂಡ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ.

ಇನ್ನು ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಹೀಗೆ ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಂಕಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದು, ಆಡಿರುವ 13 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಜಯ ಸಾಧಿಸಿ 18 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ದ್ವಿತೀಯ ಸ್ಥಾನದಲ್ಲಿದೆ. ಅತ್ತ ಪಂಜಾಬ್ ಕಿಂಗ್ಸ್ ತಂಡ ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದ್ದು 13 ಪಂದ್ಯಗಳನ್ನಾಡಿ ಕೇವಲ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಈ ಎರಡೂ ತಂಡಗಳು ಅಕ್ಟೋಬರ್ 7ರ ಗುರುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 53ನೇ ಪಂದ್ಯದಲ್ಲಿ ಭಾಗವಹಿಸಲಿದ್ದು, ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಯೋಜನೆಯಲ್ಲಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ.

ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದವರಾರು?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 25 ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡ 16 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 9 ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ಕೇವಲ 1 ಪಂದ್ಯದಲ್ಲಿ ಜಯಗಳಿಸಿದೆ. ಈ ಮೂಲಕ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ದೊಡ್ಡ ಮಟ್ಟದ ಮೇಲುಗೈ ಸಾಧಿಸಿದೆ.

ದುಬೈ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆದ್ದವರಾರು?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳೆರಡೂ ದುಬೈ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಪಡೆದುಕೊಂಡಿತ್ತು.

ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದವರಾರು?

ಇನ್ನು ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದ ಪಂದ್ಯವೊಂದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಸಾಧಿಸಿತ್ತು.

Story first published: Thursday, October 7, 2021, 14:41 [IST]
Other articles published on Oct 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+