For Quick Alerts
ALLOW NOTIFICATIONS  
For Daily Alerts
 

CSK vs PBKS: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 53, CSK vs PBKS Preview, Pitch Report, Playing XIs, Live streaming

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಹೀಗೆ ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಂಕಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದು, ಆಡಿರುವ 13 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಜಯ ಸಾಧಿಸಿ 18 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ದ್ವಿತೀಯ ಸ್ಥಾನದಲ್ಲಿದೆ. ಅತ್ತ ಪಂಜಾಬ್ ಕಿಂಗ್ಸ್ ತಂಡ ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದ್ದು 13 ಪಂದ್ಯಗಳನ್ನಾಡಿ ಕೇವಲ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಈ ಎರಡೂ ತಂಡಗಳು ಅಕ್ಟೋಬರ್ 7ರ ಗುರುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 53ನೇ ಪಂದ್ಯದಲ್ಲಿ ಭಾಗವಹಿಸಲಿದ್ದು, ಆ ಪಂದ್ಯದ ಕುರಿತ ಮಾಹಿತಿ ಈ ಕೆಳಕಂಡಂತಿದೆ.

ಪಂದ್ಯದ ವಿವರ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಅಕ್ಟೋಬರ್ 7ರ ಗುರುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 53ನೇ ಪಂದ್ಯವಾಗಿದೆ ಮತ್ತು ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ಪಂದ್ಯದ ವಿವರ:

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಇಂದಿನ ಪಂದ್ಯ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 53ನೇ ಪಂದ್ಯವಾಗಿದ್ದು ದುಬೈ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಪ್ರಾರಂಭವಾಗಲಿದೆ.

ಪಿಚ್‌ ವರದಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.

ನೇರಪ್ರಸಾರದ ಮಾಹಿತಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಎಂಎಸ್ ಧೋನಿ (ವಿಕೆಟ್ ಕೀಪರ್ / ನಾಯಕ), ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಜೋಶ್ ಹೇಜಲ್‌ವುಡ್

ಪಂಜಾಬ್ ಕಿಂಗ್ಸ್: ಕೆಎಲ್ ರಾಹುಲ್ (ವಿಕೆಟ್ ಕೀಪರ್ / ನಾಯಕ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಾರುಖ್ ಖಾನ್, ಸರ್ಫರಾಜ್ ಖಾನ್, ಮೊಯಿಸ್ ಹೆನ್ರಿಕ್ಸ್, ಹರಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯಿ

Story first published: Thursday, October 7, 2021, 14:41 [IST]
Other articles published on Oct 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+