For Quick Alerts
ALLOW NOTIFICATIONS  
For Daily Alerts
 

KKR vs RR: ರಾಜಸ್ಥಾನ್ ವಿರುದ್ಧ ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಳ್ಳುತ್ತಾ ಕೋಲ್ಕತ್ತಾ?

 IPL 2021, Match 54 : KKR vs RR Head-to-head record details

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದು ತಲುಪಿದ್ದು ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯಲಿರುವ ನಾಲ್ಕನೇ ತಂಡ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ.

ಇನ್ನು ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ ನಂತರ ನಾಲ್ಕನೇ ತಂಡವಾಗಿ ಯಾವ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಇದೀಗ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಪಂದ್ಯಗಳು ಕೊನೆಯ ಹಂತಕ್ಕೆ ಬಂದು ತಲುಪಿದ್ದು ಅಂತಿಮವಾಗಿ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪ್ಲೇಆಫ್ ಪ್ರವೇಶಿಸಲಿರುವ ನಾಲ್ಕನೇ ತಂಡದ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ.

ಹೀಗೆ ಪ್ಲೇ ಆಫ್ ಪ್ರವೇಶಿಸುವ ತಂಡಗಳ ರೇಸ್‌ನಲ್ಲಿರುವ ತಂಡಗಳಲ್ಲೊಂದಾದ ಕೋಲ್ಕತಾ ನೈಟ್ ರೈಡರ್ಸ್ ರಾಜಸ್ತಾನ ರಾಯಲ್ಸ್ ವಿರುದ್ಧದ ಇಂದಿನ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಪ್ಲೇ ಆಫ್ ಹಂತವನ್ನು ಯಶಸ್ವಿಯಾಗಿ ಪ್ರವೇಶಿಸಬೇಕೆಂದರೆ ಈ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆಲುವನ್ನು ಸಾಧಿಸಲೇಬೇಕಾಗಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಪಂದ್ಯವನ್ನು ಗೆಲ್ಲುವುದರ ಮೂಲಕ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುತ್ತಾ ಅಥವಾ ಪಂದ್ಯದಲ್ಲಿ ಸೋಲುವುದರ ಮೂಲಕ ಪ್ಲೇ ಆಫ್ ಆಸೆಯನ್ನು ಕೈ ಬಿಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ.

ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದವರು:

ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯ ಅಂಕಿ ಅಂಶ ಈ ಕೆಳಕಂಡಂತಿದೆ.

ಒಟ್ಟು ಪಂದ್ಯ - 24 ಪಂದ್ಯಗಳು

ಕೋಲ್ಕತಾ ನೈಟ್ ರೈಡರ್ಸ್ ಗೆಲುವು - 12 ಪಂದ್ಯಗಳು

ರಾಜಸ್ಥಾನ್ ರಾಯಲ್ಸ್ ಗೆಲುವು - 11 ಪಂದ್ಯಗಳು

ಫಲಿತಾಂಶ ಸಿಗದ ಪಂದ್ಯಗಳು - 1 ಪಂದ್ಯ

ಕಳೆದ 5 ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದವರಾರು?

ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ರಾಜಸ್ಥಾನ್ ರಾಯಲ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಹೀಗೆ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮುನ್ನಡೆ ಸಾಧಿಸಿದೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಡೆದ ಮುಖಾಮುಖಿ ಪಂದ್ಯದಲ್ಲಿ ಗೆದ್ದವರಾರು?

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಆ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಗಳಿಸಿತ್ತು.

Story first published: Thursday, October 7, 2021, 17:28 [IST]
Other articles published on Oct 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+