For Quick Alerts
ALLOW NOTIFICATIONS  
For Daily Alerts
 

KKR vs RR: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

 IPL 2021, Match 54, KKR vs RR Preview, Pitch Report, Playing XIs, Live streaming

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತರೆ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ತದನಂತರ ಯುವ ನಾಯಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ತೃತೀಯ ತಂಡ ಎನಿಸಿಕೊಂಡಿತು.

ಹೀಗೆ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ ನಂತರ ನಾಲ್ಕನೇ ತಂಡವಾಗಿ ಯಾವ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಇದೀಗ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಪಂದ್ಯಗಳು ಕೊನೆಯ ಹಂತಕ್ಕೆ ಬಂದು ತಲುಪಿದ್ದು ಅಂತಿಮವಾಗಿ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪ್ಲೇಆಫ್ ಪ್ರವೇಶಿಸಲಿರುವ ನಾಲ್ಕನೇ ತಂಡದ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ.

ಎರಡೂ ತಂಡಗಳಿಗೂ ತಲಾ ಒಂದೊಂದು ಪಂದ್ಯ ಬಾಕಿ ಉಳಿದಿದ್ದು ಎರಡೂ ತಂಡಗಳು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಉಂಟಾಗಿದ್ದು ಯಾವ ತಂಡ ಹೆಚ್ಚು ರನ್ ರೇಟ್ ಪಡೆಯಲಿದೆಯೋ ಆ ತಂಡ ನಾಲ್ಕನೇ ಸ್ಥಾನವನ್ನು ಪಡೆದುಕೊಂಡು ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ.

ಹೀಗೆ ಪ್ಲೇ ಆಫ್ ಕನಸನ್ನು ಕಾಣುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಇಂದು ( ಅಕ್ಟೋಬರ್ 7 ) ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೆಣಸಾಡಲಿದ್ದು ಈ ಪಂದ್ಯದಲ್ಲಿ ಉತ್ತಮ ಅಂತರದೊಂದಿಗೆ ಗೆಲುವು ಸಾಧಿಸುವುದರ ಮೂಲಕ ಪ್ಲೇ ಆಫ್ ಸುತ್ತಿನ ಪ್ರವೇಶವನ್ನು ಭದ್ರಪಡಿಸಿಕೊಳ್ಳುವ ಯೋಜನೆಯಲ್ಲಿದೆ. ಈ ಪಂದ್ಯದ ಕುರಿತಾದ ಮಾಹಿತಿ ಮುಂದೆ ಇದೆ ಓದಿ.

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 54ನೇ ಪಂದ್ಯ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಅಕ್ಟೋಬರ್ 7ರ ಗುರುವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ:

ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಿಚ್‌ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಬೌಂಡರಿ ಲೈನ್ ಕೂಡ ಹತ್ತಿರದಲ್ಲಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಬೌಂಡರಿ, ಸಿಕ್ಸ್ ಮತ್ತು ರನ್ ಸಿಡಿಸಲು ಸಹಕಾರಿಯಾಗಲಿದೆ. ಇನ್ನು ಈ ಪಿಚ್‌ನಲ್ಲಿ ಬೌಲರ್‌ಗಳು ತುಸು ಹೆಚ್ಚಿನ ಶ್ರಮವಹಿಸಿ ಬೌಲಿಂಗ್ ಮಾಡಬೇಕಾದ ಅಗತ್ಯತೆಯಿದೆ, ಬೌಲರ್‌ಗಳಿಗೆ ವಿಕೆಟ್ ಬೀಳುವುದು ಕಷ್ಟಕರವಾಗಿರಲಿದೆ, ಅದರಲ್ಲೂ ವೇಗಿಗಳಿಗೆ ಈ ಪಿಚ್ ಹೆಚ್ಚಾಗಿ ಕಾಡಲಿದೆ.

ನೇರಪ್ರಸಾರದ ಮಾಹಿತಿ:

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು

ಕೋಲ್ಕತ್ತಾ ನೈಟ್ ರೈಡರ್ಸ್: ಶುಭ್ಮನ್ ಗಿಲ್, ವೆಂಕಟೇಶ್ ಐಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ಶಕೀಬ್ ಅಲ್ ಹಸನ್ / ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಟಿಮ್ ಸೌಥಿ, ಶಿವಂ ಮಾವಿ, ವರುಣ್ ಚಕ್ರವರ್ತಿ ಮತ್ತು ಸುನೀಲ್ ನರೇನ್

ರಾಜಸ್ಥಾನ್ ರಾಯಲ್ಸ್: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ನಾಯಕ), ಶಿವಂ ದುಬೆ, ಗ್ಲೆನ್ ಫಿಲಿಪ್ಸ್, ಲಿಯಾಮ್ ಲಿವಿಂಗ್ಸ್ಟೋನ್, ರಾಹುಲ್ ತೇವಾಟಿಯಾ, ಶ್ರೇಯಸ್ ಗೋಪಾಲ್, ಕುಲದೀಪ್ ಯಾದವ್, ಮುಸ್ತಫಿಜುರ್ ರಹಮಾನ್, ಚೇತನ್ ಸಕಾರಿಯಾ.

Story first published: Thursday, October 7, 2021, 17:27 [IST]
Other articles published on Oct 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+