For Quick Alerts
ALLOW NOTIFICATIONS  
For Daily Alerts
 

MI vs SRH: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2021, Match 55: MIvs SRH Head-to-head record details

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಘಟ್ಟವನ್ನು ತಲುಪಿದೆ. ಟೂರ್ನಿಯ ಲೀಗ್ ಪಂದ್ಯಗಳ ಅಂತಿಮ ದಿನವಾದ ಇಂದು ( ಅಕ್ಟೋಬರ್ 8 ) ಐಪಿಎಲ್ ಇತಿಹಾಸದಲ್ಲಿಯೇ ನಡೆಯದ ರೀತಿ ಒಂದೇ ದಿನ ಎರಡೆರಡು ಲೀಗ್ ಪಂದ್ಯಗಳು ಏಕಕಾಲಕ್ಕೆ ನಡೆಯುತ್ತಿವೆ. ಹೌದು ಸಂಜೆ 7.30ಕ್ಕೆ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ ಮತ್ತು ಅದೇ ಸಮಯಕ್ಕೆ ದುಬೈ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸದ್ಯಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯವನ್ನು ಸೋತರೂ ಸಹ ಅಗ್ರಸ್ಥಾನದಲ್ಲಿಯೇ ಉಳಿಯಲಿದೆ, ಇನ್ನು ಈಗಾಗಲೇ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಆಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ದ್ವಿತೀಯ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತೃತೀಯ ಸ್ಥಾನದಲ್ಲಿದೆ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡ ಅಕ್ಟೋಬರ್ 7ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ಒಳ್ಳೆಯ ನೆಟ್ ರನ್ ರೇಟ್ ಪಡೆದುಕೊಂಡು ನಾಲ್ಕನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು ಪ್ಲೇ ಆಫ್ ಹಂತಕ್ಕೆ ಬಹುತೇಕ ಪ್ರವೇಶ ಪಡೆದುಕೊಂಡಿದೆ ಎನ್ನಬಹುದು.

ಹೀಗಾಗಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯದಲ್ಲಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ಮುಂಬೈ ಇಂಡಿಯನ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 171 ರನ್‌ಗಳಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಆದರೆ ಇಷ್ಟು ದೊಡ್ಡ ಮಟ್ಟದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದು ದೂರದ ಮಾತಾಗಿದ್ದು ಪ್ಲೇ ಆಫ್ ಪ್ರವೇಶಿಸುವ ಮುಂಬೈ ಇಂಡಿಯನ್ಸ್ ತಂಡದ ಕನಸು ಬಹುತೇಕ ನುಚ್ಚುನೂರಾಗಿದೆ.

ಇನ್ನು ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಸನ್ ರೈಸರ್ಸ್ ಹೈದರಾಬಾದ್ ತಂಡ 8 ಪಂದ್ಯಗಳಲ್ಲಿ ಗೆದ್ದಿದ್ದರೆ, ಮುಂಬೈ ಇಂಡಿಯನ್ಸ್ ತಂಡ 9 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದ ಒಟ್ಟಾರೆ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮುನ್ನಡೆ ಕಾಯ್ದುಕೊಂಡಿದೆ.

ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಹೆಚ್ಚು ಗೆದ್ದವರಾರು?

ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ 1 ಪಂದ್ಯದಲ್ಲಿ ಜಯಗಳಿಸಿದೆ. ಈ ಮೂಲಕ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲ ಪಂದ್ಯ ಗೆದ್ದವರು:

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದ ಪಂದ್ಯವೊಂದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವು ಸಾಧಿಸಿತ್ತು.

Story first published: Friday, October 8, 2021, 15:07 [IST]
Other articles published on Oct 8, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+