RCB vs DC: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಘಟ್ಟವನ್ನು ತಲುಪಿದೆ. ಟೂರ್ನಿಯ ಲೀಗ್ ಪಂದ್ಯಗಳ ಅಂತಿಮ ದಿನವಾದ ಇಂದು ( ಅಕ್ಟೋಬರ್ 8 ) ಐಪಿಎಲ್ ಇತಿಹಾಸದಲ್ಲಿಯೇ ನಡೆಯದ ರೀತಿ ಒಂದೇ ದಿನ ಎರಡೆರಡು ಲೀಗ್ ಪಂದ್ಯಗಳು ಏಕಕಾಲಕ್ಕೆ ನಡೆಯುತ್ತಿವೆ. ಹೌದು ಸಂಜೆ 7.30ಕ್ಕೆ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ ಮತ್ತು ಅದೇ ಸಮಯಕ್ಕೆ ದುಬೈ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಟೂರ್ನಿಯಲ್ಲಿ ಇದುವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲುಂಡಿದ್ದು, 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ 13 ಪಂದ್ಯಗಳನ್ನಾಡಿದ್ದು 10 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಮಾತ್ರ ಸೋತು, 20 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ ನಂತರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ತಂಡಗಳು ಕೂಡ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡವು.
ಟೂರ್ನಿಯಲ್ಲಿ ಈಗಾಗಲೇ ಪ್ಲೇ ಆಫ್ ಹಂತವನ್ನು ಪ್ರವೇಶಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ದುಬೈ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 56ನೇ ಹಾಗೂ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಸೆಣಸಾಡಲಿದ್ದು, ಎರಡೂ ತಂಡಗಳು ಸಹ ಈ ಪಂದ್ಯದಲ್ಲಿ ಗೆದ್ದರೂ ಅಥವಾ ಸೋತರೂ ತಾವು ಪ್ರಸ್ತುತ ಅಂಕಪಟ್ಟಿಯಲ್ಲಿ ಪಡೆದುಕೊಂಡಿರುವ ಸ್ಥಾನಗಳಲ್ಲಿಯೇ ಉಳಿದುಕೊಳ್ಳಲಿವೆ. ಅಕ್ಟೋಬರ್ 8ರ ಶುಕ್ರವಾರದಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ದುಬೈ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದು ಕುತೂಹಲವನ್ನು ಮೂಡಿಸಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠ ತಂಡ ಎನಿಸಿಕೊಂಡಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16 ಪಂದ್ಯಗಳಲ್ಲಿ ಗೆದ್ದಿದೆ ಮತ್ತು 1 ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಒಟ್ಟಾರೆ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದವರಾರು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 1 ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೇಲುಗೈ ಸಾಧಿಸಿದೆ.
ದುಬೈ ಕ್ರೀಡಾಂಗಣದಲ್ಲಿ ಪಂದ್ಯ ಗೆದ್ದವರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ದುಬೈ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯಗಳಿಸಿತ್ತು.
ಈ ಬಾರಿಯ ಟೂರ್ನಿಯಲ್ಲಿ ಮೊದಲ ಪಂದ್ಯ ಗೆದ್ದವರು:
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯಗಳಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications