For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯ ಅಂಕಿಅಂಶ

IPL 2021 Match 7: DC v RR - Head-to-head stats, highest scorer, highest wicket-takers

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗುತ್ತಿದೆ. ಮೊದಲ ಪಂದ್ಯದಲ್ಲಿ ರೋಚಕ ಹಣಾಹಣಿ ನಡೆಸಿಯೂ ರಾಜಸ್ಥಾನ್ ಕೊನೇ ಕ್ಷಣದಲ್ಲಿ ಮುಗ್ಗರಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಗೆಲ್ಲುವ ಕಾತುರದಲ್ಲಿದೆ. ಮತ್ತೊಂದೆಡೆ ಡೆಲ್ಲಿ ಮೊದಲ ಪಂದ್ಯವನ್ನು ಚೆನ್ನೈ ವಿರುದ್ಧ ಭರ್ಜರಿಯಾಗಿ ಗೆದ್ದುಕೊಂಡಿದೆ.

ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳು ಈವರೆಗೆ 22 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಸಮಬಲದ ಹೋರಾಟ ನಡೆದಿರುವುದು ಸ್ಪಷ್ಟವಾಗುತ್ತದೆ. 11 ಬಾರಿ ರಾಜಸ್ಥಾನ್ ರಾಯಲ್ಸ್ ಗೆದ್ದಿದ್ದರೆ 11 ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದೆ.

ಇನ್ನು ಇತ್ತೀಚಿನ ಫಲಿತಾಂಶವನ್ನು ನೋಡಿದಾಗ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣವಾಗಿ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗುತ್ತದೆ. ಕಳೆದ ಐದು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳಲ್ಲಿ ಕೂಡ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದೆ. ಕಳೆದ ಆವೃತ್ತಿಯ ಎರಡು ಪಂದ್ಯಗಳಲ್ಲಿಯೂ ರಾಜಸ್ಥಾನ್ ಡೆಲ್ಲಿಗೆ ಶರಣಾಗಿತ್ತು.

ಇನ್ನು ಈ ಎರಡು ತಂಡಗಳ ಮುಖಾಮುಖಿಯಲ್ಲಿ ರಾಜಸ್ತಾನ್ ರಾಯಲ್ಸ್ ತಂಡದ ಪರವಾಗಿ 2011-15 ಮತ್ತು 2018-19ರ ಅವಧಿಯಲ್ಲಿ ಆಡಿದ್ದ ಅಜಿಂಕ್ಯ ರಹಾನೆ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. ಡೆಲ್ಲಿ ವಿರುದ್ಧದ ಮುಖಾಮುಖಿಯ ವೇಳೆಯಲ್ಲಿ ರಹಾನೆ 601 ರನ್‌ಗಳಿಸಿದ್ದಾರೆ. ಈ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಎರಡನೇ ಸ್ಥಾನದಲ್ಲಿ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇದ್ದು 295 ರನ್‌ಗಳಿಸಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಅನುಭವಿ ಅಮಿತ್ ಮಿಶ್ರಾ ಯಶಸ್ಸು ಗಳಿಸಿದ್ದಾರೆ. ಡೆಲ್ಲಿ ತಂಡದ ಪರವಾಗಿ ರಾಜಸ್ಥಾನ್ ತಂಡದ ವಿರುದ್ಧ ಅವರು 20 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಪರ್ವೀಜ್ ಮಹರೂಫ್ ಇದ್ದಾರೆ.

Story first published: Thursday, April 15, 2021, 13:21 [IST]
Other articles published on Apr 15, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+