ಬಿಸಿಸಿಐನ ಈ ಬೇಜವಾಬ್ದಾರಿತನದಿಂದ ಕೊರೊನಾ ಹಬ್ಬಿತು ಎಂದ ಮುಂಬೈ ಫೀಲ್ಡಿಂಗ್ ಕೋಚ್

Mumbai Indians ತರಬೇತುದಾರ ಪ್ರಕಾರ ಇದು ಭಾರತದ ಬೇಜವಾಬ್ದಾರಿ | Oneindia Kannada

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಉಳಿದಿರುವ 31 ಪಂದ್ಯಗಳು ಸೆಪ್ಟೆಂಬರ್ ತಿಂಗಳಿನಲ್ಲಿ ಮುಂದುವರಿಯುವ ಸಾಧ್ಯತೆಗಳಿವೆ.

ಐಪಿಎಲ್ ಮುಂದೂಡಲ್ಪಟ್ಟ ನಂತರ ಮುಂಬೈ ಇಂಡಿಯನ್ಸ್ ತಂಡದ ಫೀಲ್ಡಿಂಗ್ ಕೋಚ್ ಜೇಮ್ಸ್ ಪಮೆಂಟ್ ಇದೀಗ ನ್ಯೂಜಿಲೆಂಡ್‌ನ್ನು ತಲುಪಿದ್ದು ಐಪಿಎಲ್ ಟೂರ್ನಿಗೂ ಮುನ್ನ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಕುರಿತು ಮಾತನಾಡಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಚೆನ್ನೈ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡದೆ ನಡೆಸಲಾಗಿತ್ತು ಮತ್ತು ಅದೇ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯಕ್ಕೆ ಶೇಕಡಾ ಅರ್ಧದಷ್ಟು ಜನರಿಗೆ ಪಂದ್ಯವನ್ನು ವೀಕ್ಷಿಸುವ ಅವಕಾಶವನ್ನು ನೀಡಲಾಗಿತ್ತು. ಇದೇ ರೀತಿ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಶೇಕಡಾ ಅರ್ಧದಷ್ಟು ಜನರಿಗೆ ಅವಕಾಶವನ್ನು ನೀಡಲಾಗಿತ್ತು.

ಈ ಕುರಿತು ಮಾತನಾಡಿದ ಜೇಮ್ಸ್ ಪಮೆಂಟ್ ' ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಆರಂಭಿಕ ಪಂದ್ಯಗಳನ್ನು ಕ್ರೀಡಾಂಗಣಕ್ಕೆ ವೀಕ್ಷಕರು ಬಾರದಂತೆ ಬಹಳ ಎಚ್ಚರಿಕೆಯಿಂದ ನಡೆಸಲಾಯಿತು ಆದರೆ ಅಹ್ಮದಾಬಾದ್​ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 70000 ಜನರಿಗೆ ಪಂದ್ಯವನ್ನು ಕ್ರೀಡಾಂಗಣದಲ್ಲಿ ವೀಕ್ಷಿಸುವ ಅವಕಾಶವನ್ನು ನೀಡಲಾಯಿತು. ಇದೀಗ ಅಹ್ಮದಾಬಾದ್​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದೊಡ್ಡ ಮಟ್ಟದಲ್ಲಿಯೇ ಇದ್ದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಲು ಅಂದು 70,000 ವೀಕ್ಷಕರಿಗೆ ಅವಕಾಶ ನೀಡಿದ್ದು ಕೂಡ ಇದಕ್ಕೆ ಕಾರಣವಿರಬಹುದು, ಅದೊಂದು ಬೇಜವಾಬ್ದಾರಿತನದ ಕೆಲಸವಾಗಿತ್ತು' ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

For Quick Alerts
ALLOW NOTIFICATIONS
For Daily Alerts
Story first published: Wednesday, May 12, 2021, 14:26 [IST]
Other articles published on May 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X