ಐಪಿಎಲ್ 2021: ಮುಂಬೈ vs ಕೊಲ್ಕತ್ತಾ, ಟಾಸ್ ರಿಸಲ್ಟ್, ಆಡುವ ಬಳಗ

ಅಬುದಾಬಿ: ಐಪಿಎಲ್ 14ನೇ ಆವೃತ್ತಿಯ 34ನೇ ಪಂದ್ಯ ಇಂದು ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ನಡೆಯುತ್ತಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಮುಂಬೈ ಇಂಡಿಯನ್ಸ್ ಪರವಾಗಿ ನಾಯಕನಾಗಿ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಿರುವುದು ಮುಂಬೈ ಪಾಲಿಗೆ ಸಕಾರಾತ್ಮಕ ಸಂಗತಿ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.

ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆಯನ್ನು ಮಾತ್ರ ಮಾಡಿಕೊಳ್ಳಲಾಗಿದೆ. ಅನ್ಮೋಲ್‌ಪ್ರೀತ್ ಸಿಂಗ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ನಾಯಕ ರೋಹಿತ್ ಶರ್ಮಾ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ ಗಾಯದ ಕಾರಣದಿಂದಾಗಿ ಕಳೆದ ಪಂದ್ಯದಲ್ಲಿಯೂ ಆಡಿರಲಿಲ್ಲ. ಈ ಪಂದ್ಯದಲ್ಲಿಯೂ ಹಾರ್ದಿಕ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿಲ್ಲ.

ಟಿ ನಟರಾಜನ್ ಕೋವಿಡ್‌ಗೆ ತುತ್ತಾಗಿದ್ದು ಆಟದ ಮೇಲೆ ಪರಿಣಾಮ ಬೀರಿಲ್ಲ'ಟಿ ನಟರಾಜನ್ ಕೋವಿಡ್‌ಗೆ ತುತ್ತಾಗಿದ್ದು ಆಟದ ಮೇಲೆ ಪರಿಣಾಮ ಬೀರಿಲ್ಲ'

ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಯುಎಇ ಚರಣದ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆರ್‌ಸಿಬಿ ವಿರುದ್ಧ ಅದ್ಭುತ ಪ್ರದರ್ಶನ ನೀಡಿತ್ತು. ಸರ್ವಾಂಗೀಣ ಪ್ರದರ್ಶನ ನೀಡಿದ ಕಾರಣದಿಂದಾಗಿ ಬೃಹತ್ ಅಂತರದಿಂದ ಕೆಕೆಆರ್ ಗೆದ್ದು ಬೀಗಿತ್ತು. ಹೀಗಾಗಿ ಆ ತಂಡವನ್ನು ಮುಂದುವರಿಸುತ್ತಿದೆ ಕೆಕೆಆರ್.

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೋನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಲೂಕಿ ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ

ಐಸಿಸಿ ಟಿ20 ವಿಶ್ವಕಪ್ ರೋಮಾಂಚನಕಾರಿ ಅಧಿಕೃತ ಗೀತೆ ಬಿಡುಗಡೆಐಸಿಸಿ ಟಿ20 ವಿಶ್ವಕಪ್ ರೋಮಾಂಚನಕಾರಿ ಅಧಿಕೃತ ಗೀತೆ ಬಿಡುಗಡೆ

ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಸೌರಭ್ ತಿವಾರಿ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಆಡಮ್ ಮಿಲ್ನೆ, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೋಲ್ಟ್

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 20 - October 27 2021, 03:30 PM
ಇಂಗ್ಲೆಂಡ್
ಬಾಂಗ್ಲಾದೇಶ್
Predict Now

For Quick Alerts
ALLOW NOTIFICATIONS
For Daily Alerts
Story first published: Thursday, September 23, 2021, 19:38 [IST]
Other articles published on Sep 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X