Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಎಂಐ vs ಆರ್‌ಆರ್, ಟಾಸ್ ವರದಿ, ಪ್ಲೇಯಿಂಗ್ XI, Live ಸ್ಕೋರ್

IPL 2021, MI vs RR, match 51, Toss report, Playing XI details

ಐಪಿಎಲ್‌ನಲ್ಲಿ ಇಂದು ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಹಂತಕ್ಕೇರುವ ಸ್ಪರ್ಧೆಯಲ್ಲಿ ಮುಂದುವರಿಯಲು ತನ್ನ ಕೊನೆಯ ಪ್ರಯತ್ನವನ್ನು ನಡೆಸಲಿದೆ. ಮುಂಬೈ ಇಂಡಿಯನ್ಸ್‌ಗೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿದ್ದು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕಳೆದ ಬಾರಿಯ ಆವೃತ್ತಿಯ ಚಾಂಪಿಯನ್ ತಂಡವಾಗಿರುವ ಮುಂಬೈ ಇಂಡಿಯನ್ಸ್ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡಿಕೊಂಡು ಬಂದಿದೆ. ಹೀಗಾಗಿ ಈ ಬಾರಿಯ ಆವೃತ್ತಿಯಲ್ಲಿ ಪ್ಲೇಆಫ್‌ಗೆ ಸ್ಥಾನ ಪಡೆಯದೆ ಹೊರಬೀಳುವ ಹಂತದಲ್ಲಿದೆ ಮುಂಬೈ ಇಂಡಿಯನ್ಸ್. ಆದರೆ ಇಂದಿನ ಪಂದ್ಯದಲ್ಲಿ ಸೋತರೆ ಪ್ಲೇಆಪ್ ಕನಸು ಇಲ್ಲಿಗೇ ಅಂತ್ಯವಾಗಲಿದೆ.

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿಕಾಕ್ ಹಾಗೂ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಈ ಪಂದ್ಯದಿಂದ ಹೊರಗುಳಿದಿದ್ದು ಇವರ ಸ್ಥಾನದಲ್ಲಿ ಇಶಾನ್ ಕಿಶನ್ ಹಾಗೂ ಜಿಮ್ಮಿ ನೀಶಮ್ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಎರಡು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಮಯಾಂಕ್ ಮಾರ್ಕಂಡೆ ಹಾಗೂ ಆಕಾಶ್ ಸಿಂಗ್ ಈ ಪಂದ್ಉದಿಂದ ಹೊರಗುಳಿದಿದ್ದು ಈ ಸ್ಥಾನದಲ್ಲಿ ಶ್ರೇಯಸ್ ಗೋಪಾಲ್ ಹಾಗೂ ಕುಲ್ದಿಪ್ ಯಾದವ್ ಕಣಕ್ಕಿಳಿಯಲಿದ್ದಾರೆ.

1
50856

ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ ಒಟ್ಟು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 12 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. 1 ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯ ಕಂಡಿದೆ. ಹೀಗೆ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಲ್ಪ ಮುನ್ನಡೆ ಸಾಧಿಸಿದ್ದು ಈ ಪಂದ್ಯದ ಫಲಿತಾಂಶ ಮತ್ತಷ್ಟು ಕುತೂಹಲ ಮೂಡಿಸಿದೆ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಇವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿವಂ ದುಬೆ, ಗ್ಲೆನ್ ಫಿಲಿಪ್ಸ್, ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯಾ, ಶ್ರೇಯಸ್ ಗೋಪಾಲ್, ಕುಲ್ದಿಪ್ ಯಾದವ್, ಮುಸ್ತಫಿಜುರ್ ರಹಮಾನ್, ಚೇತನ್ ಸಕಾರಿಯಾ
ಬೆಂಚ್: ಜೈದೇವ್ ಉನಾದ್ಕಟ್, ಕ್ರಿಸ್ ಮೋರಿಸ್, ಮನನ್ ವೊಹ್ರಾ, ಲಿಯಾಮ್ ಲಿವಿಂಗ್ಸ್ಟನ್, ತಬ್ರೇಜ್ ಶಮ್ಸಿ, ಕೆಸಿ ಕರಿಯಪ್ಪ, ಮಹಿಪಾಲ್ ಲೊಮರ್, ಓಶಾನೆ ಥಾಮಸ್, ರಿಯಾನ್ ಪರಾಗ್, ಅನುಜ್ ರಾವತ್, ಕಾರ್ತಿಕ್ ತ್ಯಾಗಿ, ಜೆರಾಲ್ಡ್ ಕೊಯಿಟ್ಜಿ, ಮಯಾಂಕ್ ಮಾರ್ಕಂಡೆ, ಆಕಾಶ್ ಸಿಂಗ್

1
50856

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕಿರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್
ಬೆಂಚ್: ಅನುಕುಲ್ ರಾಯ್, ಕ್ರಿಸ್ ಲಿನ್, ಆಡಮ್ ಮಿಲ್ನೆ, ಆದಿತ್ಯ ತಾರೆ, ಪಿಯೂಷ್ ಚಾವ್ಲಾ, ಧವಳ್ ಕುಲಕರ್ಣಿ, ರೂಶ್ ಕಲರಿಯಾ, ಅನ್ಮೋಲ್ಪ್ರೀತ್ ಸಿಂಗ್, ರಾಹುಲ್ ಚಾಹರ್, ಮಾರ್ಕೊ ಜಾನ್ಸೆನ್, ಯುಧ್ವೀರ್ ಸಿಂಗ್, ಕೃನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್

1
4-2021

Story first published: Tuesday, October 5, 2021, 19:48 [IST]
Other articles published on Oct 5, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+