ಐಪಿಎಲ್ 2021 : ಮುಂಬೈ vs ಹೈದರಾಬಾದ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಐಪಿಎಲ್ 14ನೇ ಆವೃತ್ತಿಯ 9ನೇ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶನಿವಾರ ( ಏಪ್ರಿಲ್ 17 ) ನಡೆಯಲಿದ್ದು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳು ಸಹ ತಲಾ 2 ಪಂದ್ಯಗಳನ್ನು ಆಡಿದ್ದು ಮುಂಬೈ ತಂಡ ಒಂದು ಪಂದ್ಯದಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿರುವ ಎರಡೂ ಪಂದ್ಯಗಳನ್ನು ಸೋತಿದೆ.
ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮತ್ತು 16 ಬಾರಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಕೂಡ 8 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಐಪಿಎಲ್ ಮುಖಾಮುಖಿಯಲ್ಲಿ ಎರಡೂ ತಂಡಗಳು ಸಹ ಸಮ ಬಲವನ್ನು ಹೊಂದಿವೆ.
ಮುಂಬೈ ಮತ್ತು ಹೈದರಾಬಾದ್ ಮುಖಾಮುಖಿಯ ಕೊನೆಯ ಐದು ಪಂದ್ಯಗಳು :
ಐಪಿಎಲ್ ಇತಿಹಾಸದಲ್ಲಿ ಎರಡೂ ತಂಡಗಳು ಮುಖಾಮುಖಿಯಲ್ಲಿ ಸಮಬಲವನ್ನು ಸಾಧಿಸಿದ್ದರೆ, ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೇಲುಗೈ ಸಾಧಿಸಿದೆ. ಈ ಎರಡೂ ತಂಡಗಳು ಮುಖಾಮುಖಿಯಾಗಿರುವ ಕೊನೆಯ 5 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ 3 ಪಂದ್ಯಗಳನ್ನು ಗೆದ್ದಿದ್ದು ಸನ್ ರೈಸರ್ಸ್ ಹೈದರಾಬಾದ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ
2020ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದ ಮೊದಲ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತ್ತು. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ಈ ತಂಡಗಳು ಮುಖಾಮುಖಿಯಾದಾಗ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿತ್ತು.

ಟಾಪ್ ಸ್ಕೋರರ್ಸ್ :
ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಮುಖಾಮುಖಿ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಡೇವಿಡ್ ವಾರ್ನರ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ವಾರ್ನರ್ 488 ರನ್ ಗಳಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡದ ಮತ್ತೊಬ್ಬ ಆಟಗಾರ ಶಿಖರ್ ಧವನ್ 436 ರನ್ ಗಳಿಸಿದ್ದಾರೆ. ಮುಂಬೈ ತಂಡದ ಪರ ಕಿರಾನ್ ಪೊಲಾರ್ಡ್ 383 ರನ್ ಗಳಿಸಿದ್ದಾರೆ.

ಹೆಚ್ಚು ವಿಕೆಟ್ ಪಡೆದವರು
ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಸನ್ ರೈಸರ್ ಹೈದರಾಬಾದ್ ತಂಡದ ಭುವನೇಶ್ವರ್ ಕುಮಾರ್. ಎರಡು ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಭುವನೇಶ್ವರ್ ಕುಮಾರ್ 16 ವಿಕೆಟ್‍ಗಳನ್ನು ಪಡೆದಿದ್ದಾರೆ, ಲಸಿತ್ ಮಾಲಿಂಗ 13 ವಿಕೆಟ್‍ಗಳನ್ನು ಪಡೆದಿದ್ದಾರೆ ಹಾಗೂ ಸಿದ್ಧಾರ್ಥ್ ಕೌಲ್ 12 ವಿಕೆಟ್‍ಗಳನ್ನು ಪಡೆದಿದ್ದಾರೆ.

ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಎರಡು ತಂಡಗಳ ಆಟಗಾರರ ಪಟ್ಟಿ
ಅತಿ ಹೆಚ್ಚು ರನ್ ಗಳಿಸಿದವರು :
1. ಡೇವಿಡ್ ವಾರ್ನರ್ : 548
2. ಇಶಾನ್ ಕಿಶನ್ : 516
3. ಕ್ವಿಂಟನ್ ಡಿ ಕಾಕ್ : 503

ಅತಿ ಹೆಚ್ಚು ವಿಕೆಟ್ ಪಡೆದವರು
1. ಜಸ್ಪ್ರೀತ್ ಬುಮ್ರಾ - 27
2. ಟ್ರೆಂಟ್ ಬೌಲ್ಟ್ - 25
3. ರಶೀದ್ ಖಾನ್ - 20
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications