Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs SRH : ಐಪಿಎಲ್ 2021: ಮುಂಬೈ vs ಹೈದರಾಬಾದ್: ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, MI vs SRH: Preview, probable XI, match prediction weather forecast pitch report

ಐಪಿಎಲ್ 14ನೇ ಆವೃತ್ತಿಯಲ್ಲಿ ಎರಡು ಪಂದ್ಯಗಳನ್ನಾಡಿ ಒಂದು ಪಂದ್ಯದಲ್ಲಿ ಜಯ ಗಳಿಸಿರುವ ಮುಂಬೈ ಇಂಡಿಯನ್ಸ್ ತಂಡ ಶನಿವಾರ ( ಏಪ್ರಿಲ್ 17 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಲಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿರುವ ಸನ್ ರೈಸರ್ಸ್ ಹೈದರಾಬಾದ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಖಾತೆ ತೆರೆಯುತ್ತಾ ಅಥವಾ ಮತ್ತೊಮ್ಮೆ ಸೋತು ಹ್ಯಾಟ್ರಿಕ್ ಸೋಲಿಗೆ ಶರಣಾಗುತ್ತಾ ಕಾದು ನೋಡಬೇಕು.

ಪಂದ್ಯದ ಆರಂಭ : ಪಂದ್ಯ ಸಂಜೆ 7.30ಕ್ಕೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ಪಂದ್ಯದ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ಹವಾಮಾನ ವರದಿಯ ಪ್ರಕಾರ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪಂದ್ಯಕ್ಕೆ ಮಳೆಯ ಅಡ್ಡಿ ಇರುವುದಿಲ್ಲ. ತಾಪಮಾನವು 30° ಸೆಲ್ಸಿಯಸ್ ಇರಲಿದೆ. ಎರಡನೇ ಇನಿಂಗ್ಸ್ ವೇಳೆಯಲ್ಲಿ ಇಬ್ಬನಿ ಬೀಳುವ ಸಾಧ್ಯತೆಯಿದೆ.

ಪಿಚ್ ರಿಪೋರ್ಟ್

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನ ಪಿಚ್ ಬ್ಯಾಟ್ಸ್‌ಮನ್‌ಗಳಿಗಿಂತ ಬೌಲರ್‌ಗಳಿಗೆ ಹೆಚ್ಚು ಅನುಕೂಲಕರವಾಗಿರಲಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಆಡುವ ತಂಡಕ್ಕೆ ಇಬ್ಬನಿಯ ಕಿರಿಕಿರಿ ಉಂಟಾಗಲಿದ್ದು ಊಹಿಸಿದಂತೆ ರನ್ ಹೊಳೆ ಹರಿಸುವುದು ಅಸಾಧ್ಯ. ಹೀಗಾಗಿ ಟಾಸ್ ಗೆದ್ದವರು ಮೊದಲು ಬ್ಯಾಟಿಂಗ್ ತೆಗೆದುಕೊಂಡು ಆದಷ್ಟು ಹೆಚ್ಚಿನ ರನ್ ಕಲೆ ಹಾಕುವುದು ಉತ್ತಮ.

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ :

ಕ್ವಿಂಟನ್ ಡಿಕಾಕ್ (ವಿ.ಕೀ), ರೋಹಿತ್ ಶರ್ಮಾ ನಾಯಕ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕಿರಾನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಕೃಣಾಲ್ ಪಾಂಡ್ಯ , ಮಾರ್ಕೊ ಜನ್ಸಸ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ

ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ :

ವೃದ್ದಿಮಾನ್ ಸಹಾ (ವಿ.ಕೀ), ಡೇವಿಡ್ ವಾರ್ನರ್ (ನಾಯಕ), ಮನೀಷ್ ಪಾಂಡೆ, ಜಾನಿ ಬೈರ್ ಸ್ಟೊವ್/ ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಕೇದಾರ್ ಜಾಧವ್ /ವಿಜಯ್ ಶಂಕರ್, ಮೊಹಮ್ಮದ್ ನಬಿ, ಭುವನೇಶ್ವರ್ ಕುಮಾರ್, ರಶೀದ್ ಖಾನ್, ಶಹಬಾಜ್ ನದೀಮ್ ಹಾಗೂ ಟಿ ನಟರಾಜನ್

Story first published: Saturday, April 17, 2021, 12:26 [IST]
Other articles published on Apr 17, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+