ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಧೋನಿಗೆ ಉತ್ತರಾಧಿಕಾರಿಯನ್ನು ಹೆಸರಿಸಿದ ಮೈಕಲ್ ವಾನ್

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯವನ್ನು ಸೋತರು ಬಳಿಕ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್‌ವಾನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿಗೆ ಉತ್ತರಾಧಿಕಾರಿಯನ್ನು ಕಂಡುಕೊಳ್ಳಬೇಕಿದೆ ಎಂಬ ಮಾತನ್ನು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮೈಕಲ್ ವಾನ್ ಓರ್ವ ಆಟಗಾರನನ್ನು ಎಂಎಸ್ ಧೋನಿಯ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಚೆನ್ನೈ ತಂಡ ಆತನ ಸುತ್ತಲೂ ಕಟ್ಟಿಕೊಂಡು ಸಾಗಬೇಕಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮೈಕಲ್ ವಾನ್ ಹೇಳಿದ ಆಟಗಾರ ಯಾರು!
ಮೈಕಲ್ ವಾನ್ ಹೀಗೆ ಹೆಸರಿಸಿದ ಆಟಗಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ. ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್‌ಮೆಂಟ್ ಈಗಿನಿಂದಲೇ ರವೀಂದ್ರ ಜಡೇಜಾ ಅವರ ಸುತ್ತಲೂ ತಂಡವನ್ನು ಕಟ್ಟಿಕೊಂಡು ಸಾಗಲು ಆರಂಭಿಸಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರವೀಂದ್ರ ಜಡೇಜಾ ನನ್ನ ಆಯ್ಕೆ
"ಧೋನಿ ಇನ್ನು ಎರಡು ಮೂರು ವರ್ಷಗಳ ಕಾಲ ಆಡುತ್ತಾರೆ ಎಂದು ನೀವು ಹೇಳಬಹುದು. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಅದಕ್ಕಿಂತ ಹೆಚ್ಚು ಆತ ಆಡಲಾರ. ಹಾಗಾಗಿ ಮುಂದೆ ಯಾರೊಂದಿಗೆ ತಂಡ ಮುನ್ನಡೆಯಬೇಕು ಎಂಬುದಕ್ಕೆ ನೀವು ಸಿದ್ಧತೆಗಳನ್ನು ನಡೆಸಬೇಕು. ಇದಕ್ಕೆ ಉತ್ತರ ನನ್ನನ್ನು ಕೇಳಿದರೆ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡುತ್ತೇನೆ. ಆತ ಬೌಲಿಂಗ್, ಫಿಲ್ಡಿಂಗ್, ಬ್ಯಾಟಿಂಗ್ ಹಾಗೂ ಮನೋಸ್ಥಿತಿಯಲ್ಲಿ ಅತ್ಯುತ್ತಮವಾಗಿದ್ದಾರೆ" ಎಂದು ಮೈಕಲ್ ಕ್ರಿಕ್ ಬಜ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಉತ್ತಮ ಪ್ರದರ್ಶನದ ಮೂಲಕ ಮಿಂಚು
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರು. ನಾಲ್ಕು ಕ್ಯಾಚ್ ಪಡೆದ ಜಡೇಜಾ ಎರಡು ಪ್ರಮುಖ ವಿಕೆಟ್ ಕಿತ್ತು ತಂಡಕ್ಕೆ ಮುನ್ನಡೆ ಒದಗಿಸಿದರು. ಜಡೇಜಾ ಅವರ ಈ ಪ್ರದರ್ಶನದ ಕಾರಣದಿಂದಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸಿಎಸ್‌ಕೆ 45 ರನ್‌ಗಳ ಭರ್ಜರಿ ಗೆಲುವು ದಾಖಲಿಸಲು ಸಾಧ್ಯವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications