ಸಿಎಸ್‌ಕೆ ತಂಡದ ಗೇಮ್ ಚೇಂಜರ್‌ನ್ನು ಹೆಸರಿಸಿದ ಪಾರ್ಥಿವ್ ಪಟೇಲ್

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ರದ್ದಾಗಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದು ಮಾಡಿದೆ. ಉಳಿದಿರುವ 31 ಐಪಿಎಲ್ ಪಂದ್ಯಗಳನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಬಿಸಿಸಿಐ ಈಗಾಗಲೇ ಚಿಂತನೆಯನ್ನು ನಡೆಸಿದೆ.
ಐಪಿಎಲ್ ಮುಂದೂಡಲ್ಪಟ್ಟ ಮೇಲೆ ಇದುವರೆಗೂ ನಡೆದಿರುವ 29 ಪಂದ್ಯಗಳಲ್ಲಿ ಯಾವ ಯಾವ ತಂಡದ ಆಟಗಾರರು ಉತ್ತಮ ಪ್ರದರ್ಶನವನ್ನು ತೋರಿದರು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿತ್ತು. ಕಳೆದ ಬಾರಿ ಮಂಕಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಸಾಧಿಸಿ ಟೂರ್ನಿ ನಿಲುಗಡೆಗೊಳ್ಳುವ ವೇಳೆಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕುರಿತು ಸಂದರ್ಶನವೊಂದರಲ್ಲಿ ಮಾತನಾಡುವಾಗ ಪಾರ್ಥಿವ್ ಪಟೇಲ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಗೇಮ್ ಚೇಂಜರ್ ಆಗಿ ಕಾರ್ಯನಿರ್ವಹಿಸಿದ್ದು ಮೊಯಿನ್ ಅಲಿ ಎಂದು ತಿಳಿಸಿದ್ದಾರೆ. ಆರಂಭಿಕ ಆಟಗಾರನಾಗಿ ಮತ್ತು ಮೂರನೇ ಕ್ರಮಾಂಕದ ಆಟಗಾರನಾಗಿಯೂ ಉತ್ತಮ ಆಟವನ್ನು ಆಡುವ ಸಾಮರ್ಥ್ಯವಿರುವ ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್ ಮತ್ತು ಫಾಫ್ ಡು ಪ್ಲೆಸಿಸ್ ಕಟ್ಟಿಕೊಟ್ಟ ಇನ್ನಿಂಗ್ಸ್‌ನ್ನು ಅದ್ಭುತವಾಗಿ ಕೊಂಡೊಯ್ಯುತ್ತಿದ್ದರು ಎಂದು ಪ್ರಸ್ತುತ ಟೂರ್ನಿಯಲ್ಲಿ ಮೊಯಿನ್ ಅಲಿ ಅವರ ಉತ್ತಮ ಪ್ರದರ್ಶನವನ್ನು ಪಾರ್ಥಿವ್ ಪಟೇಲ್ ಪ್ರಶಂಸಿಸಿದರು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications