ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಾಯಕನಾಗಿ ಧೋನಿ ಕಳಪೆ ಸ್ಥಾನದಲ್ಲಿದ್ದಾರೆ ಎನ್ನುತ್ತಿವೆ ಈ ಅಂಕಿಅಂಶ!

IPL 2021 : MS Dhoni becomes the least run scoring captain in IPL 2021 so far

ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಇತಿಹಾಸ ಕಂಡ ಅತ್ಯುತ್ತಮ ನಾಯಕರಲ್ಲಿ ಒಬ್ಬರು. ಕೇವಲ ಐಪಿಎಲ್ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿಯೂ ಸಹ ಮಹೇಂದ್ರ ಸಿಂಗ್ ಧೋನಿ ಅವರು ಮಾಡಿರುವ ಹಲವಾರು ಸಾಧನೆ ಮತ್ತು ದಾಖಲೆಗಳ ಬಗ್ಗೆ ನಿಮಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ನಾಯಕ ಮಹೇಂದ್ರಸಿಂಗ್ ಧೋನಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಚೆನ್ನೈ ತಂಡದ ನಾಯಕನಾಗಿ ಧೋನಿ 3 ಐಪಿಎಲ್ ಟ್ರೋಫಿಗಳನ್ನು ಗೆದ್ದಿರುವ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಈ ಯುವ ಬೌಲರ್ ತೆಗೆದಿರುವ 6 ವಿಕೆಟ್‍ಗಳು ಸಾಮಾನ್ಯದ್ದಲ್ಲ!ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಈ ಯುವ ಬೌಲರ್ ತೆಗೆದಿರುವ 6 ವಿಕೆಟ್‍ಗಳು ಸಾಮಾನ್ಯದ್ದಲ್ಲ!

ಸದಾ ಯಶಸ್ಸಿನ ಉತ್ತುಂಗದಲ್ಲಿರುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ವರ್ಷ ನಡೆದ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮೊದಲ ಬಾರಿಗೆ ಪ್ಲೇಆಫ್ ಪ್ರವೇಶಿಸದೆ ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವುದರ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಕಳೆದ ಬಾರಿ ಕಳಪೆ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯ ಮೂಲಕ ಯಶಸ್ಸಿನ ಹಾದಿಗೆ ಮರಳಿದೆ. ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯವನ್ನು ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಂತರ ನಡೆದ 4 ಪಂದ್ಯಗಳಲ್ಲಿ ಸತತವಾಗಿ ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದರೂ ಸಹ ನಾಯಕ ಎಂಎಸ್ ಧೋನಿ ಮಾತ್ರ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮಂಕಾಗಿಬಿಟ್ಟಿದ್ದಾರೆ.

ಹೌದು ಪ್ರಸ್ತುತ ಟೂರ್ನಿಯಲ್ಲಿರುವ ಎಲ್ಲಾ 8 ತಂಡಗಳ ನಾಯಕರ ಪೈಕಿ ಮಹೇಂದ್ರ ಸಿಂಗ್ ಧೋನಿ ಅತೀ ಕಡಿಮೆ ರನ್ ಗಳಿಸಿರುವ ನಾಯಕ ಎನಿಸಿಕೊಂಡಿದ್ದಾರೆ. ಪ್ರಸ್ತುತ ಟೂರ್ನಿಯಲ್ಲಿ 4 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಮಹೇಂದ್ರ ಸಿಂಗ್ ಧೋನಿ ಗಳಿಸಿರುವುದು ಕೇವಲ 37 ರನ್‌ಗಳು. ಇಲ್ಲಿಯವರೆಗೂ 4 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದ್ದರೂ ಸಹ ಮಹೇಂದ್ರ ಸಿಂಗ್ ಧೋನಿ ಸ್ಫೋಟಕ ಆಟವನ್ನೇನೂ ಆಡಿಲ್ಲ. ರನ್ ಗಳಿಕೆಯಲ್ಲಿ ಹಿಂದೆ ಬಿದ್ದಿರುವ ಮಹೇಂದ್ರ ಸಿಂಗ್ ಧೋನಿ ಪ್ರಸ್ತುತ ಟೂರ್ನಿಯಲ್ಲಿ ಅತೀ ಕಡಿಮೆ ರನ್ ಗಳಿಸಿರುವ ನಾಯಕ ಎನಿಸಿಕೊಂಡಿದ್ದಾರೆ. ಧೋನಿಯನ್ನು ಹೊರತುಪಡಿಸಿ ಉಳಿದ ತಂಡಗಳ ನಾಯಕರಾದ ಇಯಾನ್ ಮಾರ್ಗನ್ 92 ರನ್‌ಗಳು, ಡೇವಿಡ್ ವಾರ್ನರ್ 136 ರನ್‌ಗಳು, ವಿರಾಟ್ ಕೊಹ್ಲಿ 163 ರನ್‌ಗಳು, ರಿಷಭ್ ಪಂತ್ 183 ರನ್‌ಗಳು, ಸಂಜು ಸ್ಯಾಮ್ಸನ್ 187 ರನ್‌ಗಳು, ರೋಹಿತ್ ಶರ್ಮಾ 201 ರನ್‌ಗಳು ಹಾಗೂ ಕೆಎಲ್ ರಾಹುಲ್ 240 ರನ್‌ಗಳನ್ನು ಬಾರಿಸಿದ್ದಾರೆ.

Story first published: Wednesday, April 28, 2021, 14:38 [IST]
Other articles published on Apr 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X