ಡೆಲ್ಲಿ ವಿರುದ್ಧದ ಸಿಎಸ್‌ಕೆ ಸೋಲಿಗೆ ಕಾರಣ ಯಾರು ಎಂಬುದನ್ನು ಬಿಚ್ಚಿಟ್ಟ ಎಂಎಸ್ ಧೋನಿ

ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲು ಸಾಲು ಪಂದ್ಯಗಳಲ್ಲಿ ಸೋಲುವುದರ ಮೂಲಕ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲುಸಾಲು ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ ಪ್ಲೇ ಆಫ್ ಹಂತವನ್ನು ಕೂಡಾ ತಲುಪಿದೆ.
ಹೌದು ಕಳೆದ ಬಾರಿ ಲೀಗ್ ಹಂತದಲ್ಲಿಯೇ ಹೊರಬಿದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ ಹಂತವನ್ನು ಅಧಿಕೃತವಾಗಿ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಬಾರಿ ಲೀಗ್ ಹಂತದಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯಿಂದ ಹೊರಬಿದ್ದಾಗ ಮುಂದಿನ ವರ್ಷ ಪುಟಿದೇಳುವ ಮೂಲಕ ನಮ್ಮನ್ನು ನಾವು ಸಾಬೀತು ಪಡಿಸಿಕೊಳ್ಳುತ್ತೇವೆ ಎಂದು ಎಂಎಸ್ ಧೋನಿ ಹೇಳಿಕೆ ನೀಡಿದ್ದರು. ಆ ಹೇಳಿಕೆಯ ರೀತಿಯೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪುಟಿದೆದ್ದಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡವೇನೋ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ, ಓರ್ವ ನಾಯಕನಾಗಿ ತಂಡವನ್ನು ಮುನ್ನಡೆಸುವಲ್ಲಿ ಎಂಎಸ್ ಧೋನಿ ಕೂಡ ಯಶಸ್ವಿಯಾಗಿದ್ದಾರೆ. ಆದರೆ ಓರ್ವ ಬ್ಯಾಟ್ಸ್‌ಮನ್ ಆಗಿ ಎಂಎಸ್ ಧೋನಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ವಿಫಲರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಇನ್ನು ಸೋಮವಾರ ( ಅಕ್ಟೋಬರ್ 4 ) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿಯೂ ಎಂ ಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಮಾಡುವ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದಾರೆ.
ಹೌದು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೋಮವಾರ ( ಅಕ್ಟೋಬರ್ 4 ) ದುಬೈ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಿದವು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸಿತು. ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುವುದರ ಮೂಲಕ ಅಗ್ರಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು ಪಂದ್ಯ ಮುಗಿದ ನಂತರ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಈ ಕೆಳಕಂಡಂತೆ ಸೋಲಿಗೆ ಕಾರಣಗಳನ್ನು ನೀಡಿದ್ದಾರೆ.

ಕೊನೆಯ 5 ಓವರ್‌ನಲ್ಲಿ ನಿಧಾನಗತಿಯ ಬ್ಯಾಟಿಂಗ್
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಸೋಲಿಗೆ ಕಾರಣವನ್ನು ತಿಳಿಸಿದ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ವೇಳೆ ಕೊನೆಯ 5 ಓವರ್‌ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದೇ ಸೋಲಿಗೆ ಕಾರಣ ಎಂದಿದ್ದಾರೆ. 'ಮೊದಲು ಬ್ಯಾಟಿಂಗ್ ಮಾಡಿದ ನಮ್ಮ ತಂಡ 150 ರನ್‌ಗಳ ಗುರಿಯನ್ನು ಇಟ್ಟುಕೊಂಡಿತ್ತು, ಆದರೆ ಅಂತಿಮ 5 ಓವರ್‌ಗಳಲ್ಲಿ ನಾವು ನಿಧಾನಗತಿಯ ಬ್ಯಾಟಿಂಗ್ ಮಾಡಿದ ಕಾರಣ ನಾವು ಅಂದುಕೊಂಡ ಗುರಿಯನ್ನು ತಲುಪಲಾಗಲಿಲ್ಲ' ಎಂದು ಎಂ ಎಸ್ ಧೋನಿ ಹೇಳಿಕೆ ನೀಡಿದ್ದಾರೆ.

ಪಿಚ್ ರನ್ ಗಳಿಸಲು ಸಹಕಾರಿಯಾಗಿರಲಿಲ್ಲ
ಇನ್ನು ದುಬೈ ಕ್ರೀಡಾಂಗಣದ ಪಿಚ್ ಕುರಿತು ಮಾತನಾಡಿದ ಎಂ ಎಸ್ ಧೋನಿ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ಮತ್ತು ವೇಗದ ರನ್ ಗಳಿಸಲು ಸಹಕಾರಿಯಾಗಿರಲಿಲ್ಲ ಎಂದಿದ್ದಾರೆ. 'ಪಿಚ್ ತುಂಬಾ ಕಠಿಣವಾಗಿದ್ದ ಕಾರಣ ಬ್ಯಾಟ್ಸ್‌ಮನ್ ತಾನು ಇಚ್ಛಿಸಿದ ರೀತಿ ಬ್ಯಾಟ್ ಬೀಸಲು ಆಗುತ್ತಿರಲಿಲ್ಲ, ನಮ್ಮ ತಂಡದ ಬ್ಯಾಟ್ಸ್‌ಮನ್‌ಗಳ ರೀತಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್‌ಗಳು ಕೂಡ ಈ ಪಿಚ್‌ನಲ್ಲಿ ರನ್ ಗಳಿಸಲು ಪರದಾಡಿದರು' ಎಂದು ಎಂಎಸ್ ಧೋನಿ ಹೇಳಿಕೆ ನೀಡಿದ್ದಾರೆ.

ಎರಡನೇ ಸ್ಥಾನಕ್ಕೆ ಕುಸಿದ ಚೆನ್ನೈ ಸೂಪರ್ ಕಿಂಗ್ಸ್
ಇನ್ನೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯ ಆರಂಭವಾಗುವ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರ ಸ್ಥಾನದಲ್ಲಿತ್ತು. ಆದರೆ ಈ ಪಂದ್ಯದಲ್ಲಿ ಸೋಲುವುದರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಥಮ ಸ್ಥಾನದಿಂದ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು ದ್ವಿತೀಯ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಗ್ರ ಸ್ಥಾನಕ್ಕೇರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications