ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭರ್ಜರಿ ಸಿಕ್ಸರ್‌ಗಳ ಮೂಲಕ ಎಚ್ಚರಿಕೆ ಕೊಟ್ಟ ಎಂಎಸ್ ಧೋನಿ: ವಿಡಿಯೋ

IPL 2021: MS Dhoni sounds warning bells, seen smashing sixes in practice

ಅಬುಧಾಬಿ: ಭಾರತದಲ್ಲಿ ಆರಂಭಗೊಂಡು ಕೋವಿಡ್-19 ಭೀತಿಯಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2021ರ ಸೀಸನ್‌ನ ಮುಂದುವರೆದ ಭಾಗ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೆಪ್ಟೆಂಬರ್‌ 19ರ ಭಾನುವಾರದಿಂದ ಶುರುವಾಗಲಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ನಾಯಕ ಎಂಎಸ್ ಧೋನಿ ಸ್ಫೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಐಪಿಎಲ್ 2021: ಚೆನ್ನೈ vs ಮುಂಬೈ ಮುಖಾಮುಖಿಯಲ್ಲಿ ಯಾವುದು ಬಲಿಷ್ಠ ತಂಡ, ಯಾರಿಗೆ ಹೆಚ್ಚು ಸೋಲು?ಐಪಿಎಲ್ 2021: ಚೆನ್ನೈ vs ಮುಂಬೈ ಮುಖಾಮುಖಿಯಲ್ಲಿ ಯಾವುದು ಬಲಿಷ್ಠ ತಂಡ, ಯಾರಿಗೆ ಹೆಚ್ಚು ಸೋಲು?

ಐಪಿಎಲ್ ದ್ವಿತೀಯ ಹಂತದ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರಂಭಿಕ ಪಂದ್ಯಕ್ಕೂ ಮುನ್ನ ನಡೆದ ಸಿಎಸ್‌ಕೆ ಆಂತರಿಕ ಅಭ್ಯಾಸ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಸ್ಫೋಟಕ ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಸಿಎಸ್‌ಕೆ ವಿಡಿಯೋ ವೈರಲ್

ಸಿಎಸ್‌ಕೆ ವಿಡಿಯೋ ವೈರಲ್

ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಒಂದು ಕಾಲದಲ್ಲಿ ಅಪಾಯಕಾರಿ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿದ್ದವರು. ಧೋನಿ ಬ್ಯಾಟ್ ಬೀಸುತ್ತ ಮೈದಾನಕ್ಕೆ ಎಂಟ್ರಿ ಕೊಟ್ಟರೆಂದರೆ ಮುಗೀತು ಕತೆ; ಸೋಲಿನಂಚಿನಲ್ಲಿದ್ದ ಪಂದ್ಯವನ್ನು ಇನ್ನೆತ್ತಲೋ ತಿರುಗಿಸುತ್ತಿದ್ದರು. ಆದರೆ ಈಚಿನ ದಿನಗಳಲ್ಲಿ ಧೋನಿಯ ಬ್ಯಾಟಿಂಗ್ ಸಾಮರ್ಥ್ಯ ಕುಂದಿದಂತಿತ್ತು. ಧೋನಿ ಕೈಲಿ ಇನ್ನಾಗಲ್ಲ ಎನ್ನುವ ಮಾತಿಗೆ ವಿರುದ್ಧ ಎಂಬಂತೆ ಧೋನಿ ಮತ್ತೆ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದಾರೆ. ಸಿಎಸ್‌ಕೆ ಮಧ್ಯೆ ನಡೆದ ಅಭ್ಯಾಸ ಪಂದ್ಯದಲ್ಲಿ ಧೋನಿ ಮೈದಾನದ ಮೂಲೆ ಮೂಲೆಗೂ ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಸೆಪ್ಟೆಂಬರ್‌ 18ರಂದು ಸಿಎಸ್‌ಕೆ ಒಂದು ವಿಡಿಯೋವನ್ನು ಟ್ವಿಟರ್‌ನಲ್ಲಿ ಹಾಕಿಕೊಂಡಿದೆ. ಇದರಲ್ಲಿ ಧೋನಿ ಸ್ಫೋಟಕ ಸಿಕ್ಸರ್‌ಗಳನ್ನು ಬಾರಿಸುತ್ತಿರುವ ಚಿತ್ರಣವಿದೆ. ಟ್ವೀಟ್‌ ಜೊತೆಗೆ ಆಲ್ ಏರಿಯಾಲುಮ್ ಥಲಾ (ಎಲ್ಲಾ ಏರಿಯಾದಲ್ಲೂ ಥಲಾ ಇದ್ದಾರೆ) ಎಂದು ಬರೆದುಕೊಳ್ಳಲಾಗಿದೆ. ಇದರರ್ಥ ಐಪಿಎಲ್ ದ್ವಿತೀಯ ಹಂತದಲ್ಲಿ ಹಳೆ ಧೋನಿ ಕಾಣ ಸಿಗುತ್ತಾರೆ ಎನ್ನುವ ಮುನ್ಸೂಚನೆಯೂ ಇರಬಹುದು.

ಆರಂಭಿಕ ಪಂದ್ಯದ ಮಾಹಿತಿ

ಐಪಿಎಲ್ 2021ರ ದ್ವಿತೀಯ ಹಂತದ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಈ ಪಂದ್ಯ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ 7.30 PMಗೆ ಆರಂಭಗೊಳ್ಳಲಿದೆ. ಕಳೆದ ಸೀಸನ್‌ನಲ್ಲಿ ಕಳಪೆ ಪ್ರದರ್ಶನದಿಂದಾಗಿ ಪ್ಲೇ ಆಫ್ಸ್‌ಗೂ ಮುನ್ನವೇ ಹೊರಬಿದ್ದು ಕೆಟ್ಟ ದಾಖಲೆ ನಿರ್ಮಿಸಿದ್ದ ಸಿಎಸ್‌ಕೆ ಈ ಬಾರಿ ಆರಂಭಿಕ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಆಡಿರುವ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಎರಡರಲ್ಲಿ ಸೋತಿರುವ ಸಿಎಸ್‌ಕೆ ಅಂಕಪಟ್ಟಿಯಲ್ಲಿ 10 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ತೃತೀಯ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳಿವೆ. ಡೆಲ್ಲಿ ತಂಡ ಆಡಿರುವ 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಅಗ್ರಸ್ಥಾನಕ್ಕೇರಿದೆ.

ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು

ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು

ಏಪ್ರಿಲ್ 9ರಂದು ಶುರುವಾಗಿದ್ದ ಆರಂಭಿಕ ಹಂತದ ಐಪಿಎಲ್ ಟೂರ್ನಿ ಮೇ 4ರಂದು ನಿಲ್ಲಿಸಲ್ಪಟ್ಟಿತ್ತು. ಐಪಿಎಲ್ ಬಯೋ ಬಬಲ್ ಒಳಗೆ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿದ್ದರಿಂದ ನಗದು ಶ್ರೀಮಂತ ಟೂರ್ನಿಯನ್ನು ಅರ್ಧಕ್ಕೆ ನಿಲ್ಲಿಸಲ್ಪಾಗಿತ್ತು. ನಿಲ್ಲಿಸಲ್ಪಟ್ಟ ಆ ಪಂದ್ಯಗಳೆಲ್ಲ ಯುಎಇಯಲ್ಲಿ ನಡೆಯಲಿವೆ. ನಡೆಯಲಿರುವ 31 ಪಂದ್ಯಗಳಲ್ಲಿ 13 ಪಂದ್ಯಗಳು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳು ಇದೇ ಸ್ಟೇಡಿಯಂನಲ್ಲಿ ನಡೆಯಲಿವೆ. ಶಾರ್ಜಾ ಸ್ಟೇಡಿಯಂನಲ್ಲಿ 10 ಪಂದ್ಯಗಳು ನಡೆಯಲಿವೆ. ಇದರಲ್ಲಿ ದ್ವಿತೀಯ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಸೇರಿದೆ. ಐಪಿಎಲ್ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳ ವೇಳೆ ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಸುಮಾರು 27 ದಿನಗಳ ಕಾಲ ದ್ವಿತೀಯ ಹಂತದ ಐಪಿಎಲ್ ನಡೆಯಲಿದೆ.

Story first published: Sunday, September 19, 2021, 8:36 [IST]
Other articles published on Sep 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X