ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!

IPL 2021: Mumbai Indians Arjun Tendulkar ruled out in the middle of the tournament

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಕೊರೋನಾವೈರಸ್ ಕಾಣಿಸಿಕೊಂಡ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿತ್ತು.

ಐಪಿಎಲ್: ಅಂತೂ ಗೆಲುವಿನ ನಗೆ ಬೀರಿದ ಮುಂಬೈ; ಪ್ಲೇಆಫ್‌ ಪ್ರವೇಶಕ್ಕೆ ಇನ್ನೆಷ್ಟು ಪಂದ್ಯ ಗೆಲ್ಲಬೇಕು?ಐಪಿಎಲ್: ಅಂತೂ ಗೆಲುವಿನ ನಗೆ ಬೀರಿದ ಮುಂಬೈ; ಪ್ಲೇಆಫ್‌ ಪ್ರವೇಶಕ್ಕೆ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು ಕುತೂಹಲಕಾರಿ ಘಟ್ಟ ತಲುಪಿದೆ. ಹೌದು, ಟೂರ್ನಿಯಲ್ಲಿ ಈಗಾಗಲೇ ಅತ್ಯುತ್ತಮ ಪ್ರದರ್ಶನವನ್ನು ನೀಡಿರುವಂತಹ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಹಾದಿಯನ್ನು ಸುಗಮ ಮಾಡಿಕೊಂಡಿದ್ದು, ಉಳಿದ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವು ಸಾಧಿಸುವುದರ ಮೂಲಕ ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಪ್ರಯತ್ನದಲ್ಲಿವೆ.

ಐಪಿಎಲ್ 2021: ಮೊದಲ ವಾರದ ಅತ್ಯುತ್ತಮ ತಂಡ ಪ್ರಕಟ; ಅತ್ಯುತ್ತಮ ನಾಯಕ ಧೋನಿಯಲ್ಲ!ಐಪಿಎಲ್ 2021: ಮೊದಲ ವಾರದ ಅತ್ಯುತ್ತಮ ತಂಡ ಪ್ರಕಟ; ಅತ್ಯುತ್ತಮ ನಾಯಕ ಧೋನಿಯಲ್ಲ!

ಅದರಲ್ಲಿಯೂ ಕಳೆದ 2 ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಮುಂಬೈ ಇಂಡಿಯನ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲು ಸಾಲು ಪಂದ್ಯಗಳನ್ನು ಸೋಲುವುದರ ಮೂಲಕ ಈ ಬಾರಿ ಪ್ಲೇ ಆಫ್ ಹಂತವನ್ನು ಪ್ರವೇಶಿಸುವಲ್ಲಿ ವಿಫಲವಾಗುವ ಸಾಧ್ಯತೆಗಳೇ ಹೆಚ್ಚಿವೆ. ಯುಎಇಯಲ್ಲಿ ನಡೆಯುತ್ತಿರುವ ದ್ವಿತೀಯ ಭಾಗದಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡಿದ್ದ ಮುಂಬೈ ಇಂಡಿಯನ್ಸ್ ಸೆಪ್ಟೆಂಬರ್ 28ರ ಮಂಗಳವಾರದಂದು ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವನ್ನು ಸಾಧಿಸುವುದರ ಮೂಲಕ ಗೆಲುವಿನ ಹಾದಿಗೆ ಮರಳಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಗೆಲುವಿನ ನಂತರ ಮುಂಬೈ ಇಂಡಿಯನ್ಸ್ ಪಾಳಯದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದ್ದು ಈ ವರ್ಷದ ಐಪಿಎಲ್ ಮಿನಿ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ್ದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಟೂರ್ನಿ ಮಧ್ಯದಲ್ಲಿಯೇ ತಂಡದಿಂದ ಹೊರಬಿದ್ದಿದ್ದಾರೆ. ಇದರ ಕುರಿತಾದ ಮಾಹಿತಿ ಮುಂದೆ ಇದೆ ಓದಿ..

ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದಿಂದ ಅರ್ಜುನ್ ತೆಂಡೂಲ್ಕರ್ ಔಟ್

ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದಿಂದ ಅರ್ಜುನ್ ತೆಂಡೂಲ್ಕರ್ ಔಟ್

ಈ ಬಾರಿಯ ಮಿನಿ ಹರಾಜಿನಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದರು. 20 ಲಕ್ಷಕ್ಕೆ ಮುಂಬೈ ಇಂಡಿಯನ್ಸ್ ತಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಖರೀದಿಸಿತ್ತು. ಆದರೆ ಇದುವರೆಗೂ ನಡೆದಿರುವ ಯಾವುದೇ ಪಂದ್ಯದಲ್ಲಿಯೂ ಕೂಡ ಅರ್ಜುನ್ ತೆಂಡೂಲ್ಕರ್ ಅವರಿಗೆ ಕಣಕ್ಕಿಳಿಯುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗಲೇ ಅಭ್ಯಾಸದ ವೇಳೆ ಅರ್ಜುನ್ ತೆಂಡೂಲ್ಕರ್ ಗಾಯಕ್ಕೊಳಗಾಗಿದ್ದಾರೆ ಎಂಬ ಕಾರಣವನ್ನು ನೀಡಿ ಮುಂಬೈ ಇಂಡಿಯನ್ಸ್ ಆತನನ್ನು ತಂಡದಿಂದ ಕೈಬಿಟ್ಟಿದೆ. ಹೀಗಾಗಿ ಈ ವರ್ಷ ಐಪಿಎಲ್ ಪದಾರ್ಪಣೆ ಮಾಡಬೇಕೆಂಬ ಅರ್ಜುನ್ ತೆಂಡೂಲ್ಕರ್ ಕನಸು ಕನಸಾಗಿಯೇ ಉಳಿದಿದೆ.

ಅರ್ಜುನ್ ತೆಂಡೂಲ್ಕರ್ ಬದಲಿಗೆ ಬೇರೆ ಆಟಗಾರ

ಅರ್ಜುನ್ ತೆಂಡೂಲ್ಕರ್ ಬದಲಿಗೆ ಬೇರೆ ಆಟಗಾರ

ಹೀಗೆ ಗಾಯದ ಸಮಸ್ಯೆಯಿಂದ ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿರುವ ಅರ್ಜುನ್ ತೆಂಡೂಲ್ಕರ್ ಬದಲಾಗಿ ಡೆಲ್ಲಿ ರಣಜಿ ತಂಡದ ವೇಗಿ ಸಿಮರ್ಜೀತ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಆಯ್ಕೆ ಮಾಡಿಕೊಂಡಿದೆ. 2018ರಲ್ಲಿ ಹೈದರಾಬಾದ್ ವಿರುದ್ಧ ನಡೆದ ರಣಜಿ ಪಂದ್ಯದಲ್ಲಿ ಸಿಮರ್ಜಿತ್ ಸಿಂಗ್ ಪದಾರ್ಪಣೆ ಮಾಡಿದ್ದರು. ಇನ್ನು ಇದುವರೆಗೂ ಒಟ್ಟು 15 ಟಿ ಟ್ವೆಂಟಿ ಪಂದ್ಯಗಳಲ್ಲಿ ಆಟವಾಡಿರುವ ಸಿಮರ್ಜಿತ್ ಸಿಂಗ್ 18 ವಿಕೆಟ್‍ಗಳನ್ನು ಪಡೆದಿದ್ದಾರೆ.

ಪ್ಲೇ ಆಫ್ ಪ್ರವೇಶಿಸುತ್ತಾ ಮುಂಬೈ ಇಂಡಿಯನ್ಸ್?

ಪ್ಲೇ ಆಫ್ ಪ್ರವೇಶಿಸುತ್ತಾ ಮುಂಬೈ ಇಂಡಿಯನ್ಸ್?

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 5 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸುವುದರ ಮೂಲಕ 10 ಅಂಕಗಳನ್ನು ಪಡೆದು ಸದ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹಾಗೂ ಟೂರ್ನಿಯಲ್ಲಿ ಇನ್ನೂ 3 ಪಂದ್ಯಗಳನ್ನು ಆಡಲಿರುವ ಮುಂಬೈ ಇಂಡಿಯನ್ಸ್ ಎಲ್ಲಾ 3 ಪಂದ್ಯಗಳಲ್ಲಿಯೂ ಗೆಲುವನ್ನು ಸಾಧಿಸಿದರೆ ಮಾತ್ರ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಅರ್ಹತೆ ಪಡೆದುಕೊಳ್ಳಲಿದೆ.

Story first published: Thursday, September 30, 2021, 9:59 [IST]
Other articles published on Sep 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X