For Quick Alerts
ALLOW NOTIFICATIONS  
For Daily Alerts
 

MI vs DC: ಡೆಲ್ಲಿ ಬೌಲರ್‌ಗಳ ಎದುರು ಮಂಕಾದ ರೋಹಿತ್ ಪಡೆ; ಪ್ಲೇಆಫ್ ರೇಸ್‌ನಿಂದ ಆಚೆ ಬೀಳಲಿದೆಯಾ ಮುಂಬೈ?

IPL 2021: Mumbai Indians have given the target of 130 runs to Delhi Capitals

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡುತ್ತಿವೆ. ಈಗಾಗಲೇ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿದೆ.

ಇನ್ನು ಟೂರ್ನಿಯಲ್ಲಿ ಇದುವರೆಗೂ ಒಟ್ಟು 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲುವುದರ ಮೂಲಕ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ತನ್ನ ಉಳಿದ ಎಲ್ಲಾ 3 ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದರೆ ಮಾತ್ರ ಯಶಸ್ವಿಯಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯ ಮುಂಬೈ ಇಂಡಿಯನ್ಸ್ ತಂಡಕ್ಕೆ ಅತಿಮುಖ್ಯವಾದ ಪಂದ್ಯವಾಗಿದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸುವುದರ ಮೂಲಕ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುವ ಯೋಜನೆಯಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದರು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 130 ರನ್‌ಗಳ ಅಲ್ಪ ಮೊತ್ತದ ಗುರಿಯನ್ನು ನೀಡಿದೆ.

ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ ತಂಡದ ಪರ ನಾಯಕ ರೋಹಿತ್ ಶರ್ಮಾ ಮತ್ತು ಕ್ವಿಂಟನ್ ಡಿಕಾಕ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಆರಂಭಿಕರಾಗಿ ಕಣಕ್ಕಿಳಿದ ಈ ಜೋಡಿ ಹೇಳಿಕೊಳ್ಳುವಂತಹ ಆರಂಭವನ್ನೇನೋ ನೀಡಲಿಲ್ಲ, ರೋಹಿತ್ ಶರ್ಮಾ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಕ್ವಿಂಟನ್ ಡಿ ಕಾಕ್ 19 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಯುಎಇ ಚರಣದಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ 33 ರನ್ ಕಲೆ ಹಾಕುವುದರ ಮೂಲಕ ಲಯ ಕಂಡುಕೊಂಡಿದ್ದಾರೆ. ಉಳಿದಂತೆ ಸೌರಭ್ ತಿವಾರಿ 15, ಕೀರನ್ ಪೊಲಾರ್ಡ್ 6, ಹಾರ್ದಿಕ್ ಪಾಂಡ್ಯ 17, ನಾಥನ್ ಕೌಲ್ಟರ್ ನೈಲ್ 1, ಜಯಂತ್ ಯಾದವ್ 11, ಕ್ರುನಾಲ್ ಪಾಂಡ್ಯ ಅಜೇಯ 13 ಮತ್ತು ಜಸ್ಪ್ರೀತ್ ಬೂಮ್ರಾ ಅಜೇಯ 1 ರನ್ ಕಲೆ ಹಾಕುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 129 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 130 ರನ್‌ಗಳ ಗುರಿಯನ್ನು ನೀಡಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅವೇಶ್ ಖಾನ್ ಮತ್ತು ಅಕ್ಷರ್ ಪಟೇಲ್ ತಲಾ 3 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್‌ಗಳ ಮೇಲೆ ಹಿಡಿತವನ್ನು ಸಾಧಿಸಿದರು. ಉಳಿದಂತೆ ರವಿಚಂದ್ರನ್ ಅಶ್ವಿನ್ ಮತ್ತು ಆನ್ರಿಚ್ ನಾರ್ಕಿಯಾ ತಲಾ ಒಂದೊಂದು ವಿಕೆಟ್ ಪಡೆದರು.

MI vs DC live score:

{cricket_4-2021_50851}

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ಶ್ರೇಯಸ್ ಐಯ್ಯರ್, ರಿಷಭ್ ಪಂತ್ ( ನಾಯಕ / ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೇಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡಾ, ಅವೇಶ್ ಖಾನ್ ಮತ್ತು ಅನ್ರಿಕ್ ನಾರ್ಕಿಯಾ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

Story first published: Saturday, October 2, 2021, 17:33 [IST]
Other articles published on Oct 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+