Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸೀಸ್‌ ಜೊತೆ ಮಾಲ್ಡೀವ್ಸ್‌ನಲ್ಲಿ ಎಂಐ ಕೋಚ್ ಜಯವರ್ದನೆ ಕ್ವಾರಂಟೈನ್

IPL 2021: Mumbai Indians head coach Mahela Jayawardene to quarantine in Maldives

ಮುಂಬೈ: ಮುಂಬೈ ಇಂಡಿಯನ್ಸ್ ಹೆಡ್‌ಕೋಚ್ ಮಹೇಲ ಜಯವರ್ದನೆ ಮಾಲ್ಡೀವ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೇಳಿದೆ. ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಮಾಲ್ಡೀವ್ಸ್‌ಗೆ ತೆರಳಲಿರುವ ಆಸೀಸ್ ತಂಡ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕೋಚ್ ಜಯವರ್ದನೆ ಅವರು ಮಾಲ್ಡೀವ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಿ ಅಲ್ಲಿಂದ ಶ್ರೀಲಂಕಾಕ್ಕೆ ತೆರಳಲಿದ್ದಾರೆ.

14ನೇ ಆವೃತ್ತಿಯ ಐಪಿಎಲ್‌ನಲ್ಲಿ ಪಾಲ್ಗೊಂಡಿದ್ದ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್ ಆಟಗಾರರು ಮತ್ತು ಸಿಬ್ಬಂದಿಗಳು ಆಕ್ಲೆಂಡ್, ಜೋಹಾನ್ಸ್‌ಬರ್ಗ್ ಮತ್ತು ಟ್ರಿನಿಡಾಡ್ ಹೀಗೆ ಅವರವರ ದೇಶಗಳಿಗೆ ತೆರಳಲಿದ್ದಾರೆ. ಅವರಿಗೆ ಮುಂಬೈ ಇಂಡಿಯನ್ಸ್‌ನಿಂದ ಚಾರ್ಟರ್ಡ್ ಫ್ಲೈಟ್ ವ್ಯವಸ್ಥೆಯಾಗಿದ ಎಂದು ಎಂಐ ಮಾಹಿತಿ ನೀಡಿದೆ.

'ಆಸ್ಟ್ರೇಲಿಯನ್ ಆಟಗಾರರು ಮತ್ತು ಬೆಂಬಲ ಸಿಬ್ಬಂದಿ ವಿಶೇಷ ಚಾರ್ಟರ್ಡ್ ಫ್ಲೈಟ್‌ನಲ್ಲಿ ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಮಾಲ್ಡಿವ್ಸ್‌ನಿಂದ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲು ವ್ಯವಸ್ಥೆಯಾಗಿದೆ,' ಎಂದು ಎಂಐ ಹೇಳಿದೆ.

Story first published: Friday, May 7, 2021, 8:20 [IST]
Other articles published on May 7, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+