ಡಿ ಕಾಕ್ ಅಬ್ಬರ ; ಗೆಲುವಿನ ಹಾದಿಗೆ ಮರಳಿದ ಮುಂಬೈ ಇಂಡಿಯನ್ಸ್

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ್ದ 5 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಸೋತು ಮಂಕಾಗಿದ್ದ ಮುಂಬೈ ಇಂಡಿಯನ್ಸ್ ತಂಡ ಭರ್ಜರಿಯಾಗಿ ಗೆಲುವಿನ ಹಾದಿಗೆ ಮರಳಿದೆ. ಗುರುವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 7 ವಿಕೆಟ್‍ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ತನ್ನ ಮೂರನೇ ಗೆಲುವನ್ನು ಮುಂಬೈ ಇಂಡಿಯನ್ಸ್ ತಂಡ ಪಡೆದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್, ಜೈಸ್ವಾಲ್ ಹಾಗೂ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 171 ರನ್ ದಾಖಲಿಸಿತು. 172 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡದ ಪರ ಕ್ವಿಂಟನ್ ಡಿಕಾಕ್ 50 ಎಸೆತಗಳಲ್ಲಿ ಅಜೇಯ 70 ರನ್ ಬಾರಿಸಿ ಅಬ್ಬರದ ಬ್ಯಾಟಿಂಗ್ ಮಾಡಿದರು. ಮುಂಬೈ ತಂಡದ ಮತ್ತೊಬ್ಬ ಆಟಗಾರ ಕೃನಾಲ್ ಪಾಂಡ್ಯ ಕೂಡ 26 ಎಸೆತಗಳಲ್ಲಿ 39 ರನ್ ಬಾರಿಸಿ ಮಿಂಚಿದರು.
ಕೊನೆಯಲ್ಲಿ ಬಂದ ಕೀರನ್ ಪೊಲಾರ್ಡ್ 8 ಎಸೆತಗಳಲ್ಲಿ ಅಜೇಯ 16 ಬಾರಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 18.3 ಓವರ್‌ಗಳಲ್ಲಿ 172 ರನ್‌ಗಳ ಗುರಿ ಮುಟ್ಟುವ ಮೂಲಕ ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‍ಗಳ ಜಯ ಸಾಧಿಸಿತು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ಮೂರನೇ ಗೆಲುವನ್ನು ಸಾಧಿಸುವುದರ ಮೂಲಕ ಗೆಲುವಿನ ಹಾದಿಗೆ ಮರಳಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications