Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮುಂಬೈ vs ರಾಜಸ್ಥಾನ್, ಪ್ಲೇಯಿಂಗ್ XI, ಅಪ್‌ಡೇಟ್ಸ್‌

IPL 2021: Mumbai Indians vs Rajasthan royals, 24th Match, Playing XI, Updates

ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈ ಬಾರಿಯ ಆವೃತ್ತಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಸಮಾನವಾಗಿದೆ. ಐದು ಪಂದ್ಯಗಳನ್ನು ಆಡಿರುವ ಮುಂಬೈ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ತಲಾ ಎರಡು ಗೆಲುವು ಸಾಧಿಸಿದ್ದರೆ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಮುನ್ನಡೆ ಸಾಧಿಸುವ ಇರಾದೆಯಲ್ಲಿ ಎರಡು ತಂಡಗಳು ಇವೆ.

ಇಂದಿನ ಪಂದ್ಯದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಯುವ ಆಟಗಾರ ಇಶಾನ್ ಕಿಶನ್‌ ಬದಲಿಗೆ ನಥನ್ ಕೌಲ್ಟರ್-ನೈಲ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದ ತಂಡವನ್ನೇ ಉಳಿಸಿಕೊಳ್ಳಲಾಗಿದೆ

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ /ವಿಕೆಟ್ ಕೀಪರ್), ಶಿವಮ್ ದುಬೆ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕತ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್

ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ನಾಯಕ), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕಿರಾನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೋಲ್ಟ್

Story first published: Thursday, April 29, 2021, 15:22 [IST]
Other articles published on Apr 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+