ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರಂಭಿಕ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಸ್ಟಾರ್ ಆಟಗಾರ ಅಲಭ್ಯ

IPL 2021: Mumbai Indians Vs RCB : Quinton de Kock wont be available for opening Match

ಚೆನ್ನೈನಲ್ಲಿ ಶುಕ್ರವಾರ ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದ್ದು ಬೆಂಗಳೂರು ಹಾಗೂ ಮುಂಬೈ ತಂಡಗಳು ಕಾದಾಟಕ್ಕೆ ಸಜ್ಜಾಗಿದೆ. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪ್ರಮುಖ ವಿದೇಶಿ ಆಟಗಾರನ ಆಟದಿಂದ ವಂಚಿತವಾಗಲಿದೆ. ಇದನ್ನು ಸ್ವತಃ ಮುಂಬೈ ಇಂಡಿಯನ್ಸ್ ಖಚಿತಪಡಿಸಿದೆ.

ಮುಂಬೈ ಇಂಡಿಯನ್ಸ್ ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದ ಡಿ ಕಾಕ್ ಏಳು ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರೈಸುತ್ತಿರುವುದು ಇದಕ್ಕೆ ಕಾರಣವಾಗಿದೆ.

ಐಪಿಎಲ್ : ಕಳೆದ ಬಾರಿ ಅತಿ ಹೆಚ್ಚು ಅರ್ಧ ಶತಕ ಬಾರಿಸಿದವರ ಪಟ್ಟಿಐಪಿಎಲ್ : ಕಳೆದ ಬಾರಿ ಅತಿ ಹೆಚ್ಚು ಅರ್ಧ ಶತಕ ಬಾರಿಸಿದವರ ಪಟ್ಟಿ

"ಕಳೆದ ಎರಡು ವರ್ಷಗಳಿಂದ ನಾಯಕ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಮುಂಬೈ ಇಂಡಿಯನ್ಸ್‌ನ ಆರಂಭಿಕ ಜೋಡಿಯಾಗಿದ್ದಾರೆ. ಆದರೆ ರಾಷ್ಟ್ರೀಯ ತಂಡದ ಸೇವೆಯ ಹಿನ್ನೆಲೆಯಲ್ಲಿ ತಂಡವನ್ನು ಅವರು ತಡವಾಗಿ ಸೇರಿಕೊಂಡ ಕಾರಣ ಏಳು ದಿನಗಳ ಕಡ್ಡಾಯ ಕ್ವಾರಂಟೈನ್‌ನಲ್ಲಿದ್ದಾರೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಹೊಸ ಜೋಡಿ ಇನ್ನಿಂಗ್ಸ್ ಆರಂಭಿಸಲಿದೆ" ಎಂದು ಮುಂಬೈ ಇಂಡಿಯನ್ಸ್ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ.

ಇನ್ನು ಇದೇ ಸಂದರ್ಭದಲ್ಲಿ ಕ್ರಿಸ್ ಲಿನ್ ಹೊಸ ಆರಂಭಿಕ ಜೋಡಿಯಾಗಿ ರೋಹಿತ್ ಶರ್ಮಾಗೆ ಸಾಥ್ ನೀಡುವ ಬಗ್ಗೆ ಸುಳಿವು ನೀಡಿದೆ ಮುಂಬೈ ಇಂಡಿಯನ್ಸ್. "ಬಿಗ್ ಬ್ಯಾಷ್ ಲೀಗ್ ನಲ್ಲಿ ತೋರಿಸಿದ ಅತ್ಯುತ್ತಮ ಫಾರ್ಮ್ ಇಲ್ಲೂ ಮುಂದುವರೆಸಬಹುದು ಎಂಬ ಅಭಿಪ್ರಾಯ ಅಥವಾ ನಂಬಿಕೆಯಿಂದ ಓಪನರ್ ಆಗಿ ಆಯ್ಕೆ ಮಾಡಬಹುದು" ಎಂದು ವೆಬ್‌ಸೈಟ್‌ನಲ್ಲಿ ಬರೆದುಕೊಳ್ಳಲಾಗಿದೆ.

ಐಪಿಎಲ್ ಆರಂಭಿಕ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದು ಬೀಗುತ್ತಾ ಬೆಂಗಳೂರು?ಐಪಿಎಲ್ ಆರಂಭಿಕ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದು ಬೀಗುತ್ತಾ ಬೆಂಗಳೂರು?

ಕಳೆದ ಬಾರಿಯ ಆವೃತ್ತಿಯಲ್ಲಿ ಕ್ರಿಸ್ ಲಿನ್ ಮುಂಬೈ ತಂಡದಲ್ಲಿ ಇದ್ದರೂ ಇಡೀ ಟೂರ್ನಿಯಲ್ಲಿ ಆಡುವ ಅವಕಾಶವನ್ನು ಪಡೆದುಕೊಳ್ಳದೆ ಬೆಂಚ್ ಕಾಯಬೇಕಾದ ಸಂದರ್ಭ ಉಂಟಾಗಿತ್ತು. ಆದರೆ ಈ ಬಾರಿ ಆರಂಭಿಕ ಪಂದ್ಯದಲ್ಲಿಯೇ ಲಿನ್ ಅವಕಾಶವನ್ನು ಗಿಟ್ಟಿಸಿಕೊಳ್ಳುವ ಸಾಧ್ಯತೆಯಿದ್ದು ಇದನ್ನು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.

Story first published: Friday, April 9, 2021, 15:41 [IST]
Other articles published on Apr 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X