ಐಪಿಎಲ್: ಮುಂಬೈ vs ಹೈದರಾಬಾದ್, ಪ್ಲೇಯಿಂಗ್ XI, ಅಪ್‌ಡೇಟ್ಸ್

ಚೆನ್ನೈ: ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು (ಏಪ್ರಿಲ್ 17) ಇಂಡಿಯನ್ ಪ್ರೀಮಿಯರ್ ಲೀಗ್ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ. ಟಾಸ್ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ದುಕೊಂಡಿದೆ. ಗೆಲುವು ಅನಿವಾರ್ಯವಾಗಿರುವುದರಿಂದ ಇಂದಿನ ಪಂದ್ಯದಲ್ಲಿ ಹೈದರಾಬಾದ್ ಜಿದ್ದಾಜಿದ್ದಿ ಹೋರಾಟ ನೀಡುವ ಸಾಧ್ಯತೆಯಿದೆ.
ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು ಮುಂಬೈ ಇಂಡಿಯನ್ಸ್ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಹೈದರಾಬಾದ್ ತಂಡ ಎರಡೂ ಪಂದ್ಯಗಳನ್ನೂ ಸೋತು ಇಂದು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹಿಂದಿನ ಮುಖಾಮುಖಿ ಗಮನಿಸಿದರೆ ಎರಡೂ ತಂಡಗಳೂ ತಲಾ 8 ಪಂದ್ಯ ಗೆಲುವಿನ ದಾಖಲೆ ಹೊಂದಿವೆ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ರಾಹುಲ್ ಚಹರ್, ಆಡಮ್ ಮಿಲ್ನೆ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್
ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ವಿರಾಟ್ ಸಿಂಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಮುಜೀಬ್ ಉರ್ ರಹಮಾನ್, ಖಲೀಲ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications