ಐಪಿಎಲ್ 2021: 4 ಪಂದ್ಯ 3 ಶೂನ್ಯ, ಐಪಿಎಲ್‌ನಲ್ಲಿ ಪೂರನ್ ಅತಿ ಕೆಟ್ಟ ದಾಖಲೆ

ನಿಕೋಲಸ್ ಪೂರನ್ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾವಂತ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಅದಕ್ಕೆ ಪೂರಕವಾದ ಪ್ರದರ್ಶನವನ್ನು ಕೂಡ ಪೂರನ್ ನೀಡಿದ್ದಾರೆ. ಸಾಕಷ್ಟು ಲೀಗ್ ಟೂರ್ನಿಗಳಲ್ಲಿ ಆಡುವ ಪೂರನ್ ಅನೇಕ ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡುತ್ತಿರುವ ಪೂರನ್ ಸತತವಾಗಿ ಕಳಪೆ ಪ್ರದರ್ಶನವನ್ನು ನೀಡಿ ಅತಿ ಕೆಟ್ಟ ದಾಖಲೆಯನ್ನು ಬರೆದುಕೊಂಡಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಕೋಲಸ್ ಪೂರನ್ ಒಂದೂ ಎಸೆತವನ್ನು ಎದುರಿಸದೆ ರನ್‌ಔಟ್ ಆಗುವ ಮೂಲಕ ವಿಕೆಟ್ ಕಳೆದುಕೊಂಡರು. ಈ ಮೂಲಕ ಈ ಬಾರಿ ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಎಸೆತಕ್ಕೆ ಶೂನ್ಯ ಸುತ್ತಿ ವಿಕೆಟ್ ಕಳೆದುಕೊಂಡಿದ್ದ ಪೂರನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡು ಎಸೆತವನ್ನು ಎದುರಿಸಿ ಶೂನ್ಯ ಸುತ್ತಿದ್ದರು. ಈಗ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅವರು ಒಂದೂ ಎಸೆತ ಎದುರಿಸದೆ ವಿಕೆಟ್ ಕಳೆದುಕೊಂಡಿದ್ದಾರೆ. ಐಪಿಎಲ್‌ನ ಒಂದೇ ಆವೃತ್ತಿಯಲ್ಲಿ ಹೀಗೆ ಔಟಾದ ಮೊದಲ ಆಟಗಾರ ಎನಿಸಿದ್ದಾರೆ ಮೊಕೋಲಸ್ ಪೂರನ್.
ಈ ಬಾರಿಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರವಾಗಿ ನಿಕೋಲಸ್ ಪೂರನ್ ಅತ್ಯಂತ ಕೆಟ್ಟ ಪ್ರದರ್ಶನದ ಮೂಲಕ ಆಘಾತ ನೀಡಿದ್ದಾರೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಪೂರನ್ ಕೇವಲ 9 ರನ್ ಮಾತ್ರವೇ ಗಳಿಸಿದ್ದಾರೆ. ಇದು ಪಂಜಾಬ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತಾದರೂ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವೈಫಲ್ಯವನ್ನು ಕಂಡಿತು. ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಗೆ ಪಂಜಾಬ್ ದಾಂಡಿಗರು ನಿರುತ್ತರರಾದರು. ಹೈದರಾಬಾದ್‌ಗೆ 121 ರನ್‌ಗಳ ಸುಲಭ ಸವಾಲನ್ನು ನೀಡಿದೆ ಪಂಜಾಬ್ ಕಿಂಗ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications