Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ರಾಜಸ್ಥಾನ್ ವಿರುದ್ಧ ಗೆದ್ದು ಮುಂಬೈ ಹಿಂದಿಕ್ಕಿದ ಪಂಜಾಬ್ ಕಿಂಗ್ಸ್

IPL 2021, PBKS vs RR: Punjab Kings overtook Mumbai Indians in most 200 Plus runs in IPL

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ( ಏಪ್ರಿಲ್ 12 ) ನಡೆದ 14ನೇ ಐಪಿಎಲ್ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಿದವು. ಮೊದಲು ಬ್ಯಾಟ್ ಮಾಡಿದ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು. 222 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೇಳಿಕೊಳ್ಳುವಂತಹ ಆರಂಭವೇನೂ ಸಿಗಲಿಲ್ಲ. ಪಂದ್ಯದ ಕೊನೆಯ ಎಸೆತದವರೆಗೂ ಏಕಾಂಗಿ ಹೋರಾಟ ನಡೆಸಿದ ಸಂಜು ಸ್ಯಾಮ್ಸನ್ ಆಟ ವ್ಯರ್ಥವಾಯಿತು, ಪಂಜಾಬ್ ಕಿಂಗ್ಸ್ ತಂಡ 4 ರನ್‌ಗಳ ರೋಚಕ ಗೆಲುವು ಸಾಧಿಸಿತು.

ಈ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲನ್ನು ತಲುಪಿದೆ. ಹೌದು ಅತಿ ಹೆಚ್ಚು ಬಾರಿ 200ಕ್ಕಿಂತ ಹೆಚ್ಚು ರನ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಮೂರನೇ ಸ್ಥಾನಕ್ಕೆ ಜಿಗಿಯುವುದರ ಮೂಲಕ ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವನ್ನು ನಾಲ್ಕನೇ ಸ್ಥಾನಕ್ಕೆ ತಳ್ಳಿದೆ. ಪಂಜಾಬ್ ಕಿಂಗ್ಸ್ ತಂಡ ಇದುವರೆಗೂ 15 ಪಂದ್ಯಗಳಲ್ಲಿ 200ಕ್ಕಿಂತ ಹೆಚ್ಚು ರನ್ ಬಾರಿಸಿದ್ದು ಅತಿ ಹೆಚ್ಚು ಬಾರಿ 200ಕ್ಕಿಂತ ಹೆಚ್ಚು ರನ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

200ಕ್ಕಿಂತ ಹೆಚ್ಚು ರನ್ ಗಳಿಸಿರುವ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19 ಪಂದ್ಯಗಳಲ್ಲಿ 200ಕ್ಕಿಂತ ಹೆಚ್ಚು ರನ್ ಗಳಿಸಿ ಅಗ್ರಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಿಟ್ಟರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ 17 ಬಾರಿ 200ಕ್ಕಿಂತ ಹೆಚ್ಚಿನ ರನ್ ಬಾರಿಸಿ ಎರಡನೇ ಸ್ಥಾನ ಪಡೆದುಕೊಂಡಿದೆ. 15 ಪಂದ್ಯಗಳಲ್ಲಿ 200ಕ್ಕಿಂತ ಹೆಚ್ಚಿನ ರನ್ ಬಾರಿಸುವುದರ ಮೂಲಕ ಮೂರನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ಇದ್ದು, 14 ಪಂದ್ಯಗಳಲ್ಲಿ 200ಕ್ಕಿಂತ ಹೆಚ್ಚಿನ ರನ್ ಬಾರಿಸುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಮತ್ತು 12 ಪಂದ್ಯಗಳಲ್ಲಿ 200ಕ್ಕಿಂತ ಅತಿ ಹೆಚ್ಚು ರನ್ ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನದಲ್ಲಿದೆ.

Story first published: Tuesday, April 13, 2021, 9:40 [IST]
Other articles published on Apr 13, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+