ಐಪಿಎಲ್ 2021: ಮುಂಬೈ vs ಡೆಲ್ಲಿ, ಮಹತ್ವದ ಮೈಲಿಗಲ್ಲುಗಳತ್ತ ಧವನ್, ಪಂತ್, ಕೃನಾಲ್ ಚಿತ್ತ

ಐಪಿಎಲ್ 14ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಸೆಣೆಸಾಟಕ್ಕೆ ಇಳಿದಿದೆ. ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರನ್ನರ್‌ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈ ಹಣಾಹಣಿಯಲ್ಲಿ ಸವಾಲೆಸೆಯುತ್ತಿದೆ. ಸಾಕಷ್ಟು ಅತ್ಯುತ್ತಮ ಆಟಗಾರರನ್ನು ಹೊಂದಿರುವ ಎರಡು ತಂಡಗಳು ಕೂಡ ಗೆಲುವಿಗಾಗಿ ತೀಪ್ರ ಪೈಪೋಟಿಯನ್ನು ನಡೆಸಲಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ಈ ಕಾದಾಟದಲ್ಲಿ ಎರಡೂ ತಂಡಗಳ ಕೆಲ ಆಟಗಾರರು ಪ್ರಮುಖ ಮೈಲಿಗಲ್ಲುಗಳನ್ನು ನೆಡಲು ಸಜ್ಜಾಗಿದ್ದಾರೆ. ಅಂತಾ ಕೆಲ ಮಹತ್ವದ ಮೈಲಿಗಲ್ಲುಗಳ ಮಾಹಿತಿ ಇಲ್ಲಿದೆ.

'ನಾನು ಅನ್‌ಫಿಟ್‌ ಎಂದು ಯಾರಾದರು ಹೇಳುವುದನ್ನು ಬಯಸುವುದಿಲ್ಲ'

ಪೃಥ್ವಿ ಶಾ: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಪೃಥ್ವಿ ಶಾ ಈವರೆಗೆ 41 ಇನ್ನಿಂಗ್ಸ್‌ಗಳನ್ನು ಆಡಿದ್ದು 932 ರನ್‌ಗಳಿಸಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಪೃಥ್ವಿ ಶಾ 68 ರನ್‌ಗಳಿಸಿದರೆ 1000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ.

ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ನಾಯಕ ರಿಷಭ್ ಪಂತ್ 71 ಐಪಿಎಲ್ ಇನ್ನಿಂಗ್ಸ್‌ಗಳಲ್ಲಿ 2160 ರನ್‌ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ 41 ರನ್‌ಗಳಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲಿದ್ದಾರೆ. 2200 ರನ್‌ಗಳಿಸಿದ ಐಯ್ಯರ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಕೃನಾಲ್ ಪಾಂಡ್ಯ: ಮುಂಬೈ ಇಂಡಿಯನ್ಸ್ ತಂಡದ ಆಲ್‌ ರೌಂಡರ್ ಕೃನಾಲ್ ಪಾಂಡ್ಯ 74 ಐಪಿಎಲ್ ಪಂದ್ಯಗಳಲ್ಲಿ 49 ವಿಕೆಟ್ ಕಬಳಿಸಿದ್ದಾರೆ. ಇನ್ನಿ ಒಂದು ವಿಕೆಟ್ ಪಡೆದರೆ ಟೂರ್ನಿಯಲ್ಲಿ 50 ವಿಕೆಟ್ ಪಡೆದ ಸಾಧನೆಯನ್ನು ಮಾಡಲಿದ್ದಾರೆ.

ಶಿಖರ್ ಧವನ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಆಟಗಾರ ಶಿಖರ್ ಧವನ್ ಈ ಬಾರಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್‌ನಲ್ಲಿ ಒಟ್ಟಾರೆಯಾಗಿ ಧವನ್ 5383 ರನ್‌ಗಳಿಸಿದ್ದು ಸುರೇಶ್ ರೈನಾ ಅವರಿಗಿಂತ 47 ರನ್‌ಗಳಿಂದಷ್ಟೇ ಹಿಂದುಳಿದಿದ್ದಾರೆ. ಈ ಸಾಧನೆಯನ್ನು ಮಾಡಿದರೆ ಧವನ್ ಐಪಿಎಲ್‌ನಲ್ಲಿ ಪ್ರಥಮ ಬಾರಿಗೆ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, April 20, 2021, 15:52 [IST]
Other articles published on Apr 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X