ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೆಕೆಆರ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಬಲಿಷ್ಠ ಆರ್‌ಸಿಬಿ ತಂಡ ಹೀಗಿದೆ

IPL 2021 Playoffs: RCB Best Playing 11 Against KKR For Eliminator Match

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಎಲ್ಲಾ 56 ಪಂದ್ಯಗಳು ಸಹ ಯಶಸ್ವಿಯಾಗಿ ಮುಗಿದಿದ್ದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್, ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಪ್ಲೇ ಆಫ್ ಸುತ್ತಿನಲ್ಲಿ ಭಾಗವಹಿಸಲಿವೆ.

ದೀಪಕ್ ಚಹರ್ ಪ್ರಪೋಸ್ ಮಾಡಿದ ಆ ಹುಡುಗಿ ಯಾರು? ಬಹಿರಂಗವಾಯ್ತು ಇದರ ಹಿಂದೆ ಇದ್ದ ಧೋನಿ ಪ್ಲಾನ್!ದೀಪಕ್ ಚಹರ್ ಪ್ರಪೋಸ್ ಮಾಡಿದ ಆ ಹುಡುಗಿ ಯಾರು? ಬಹಿರಂಗವಾಯ್ತು ಇದರ ಹಿಂದೆ ಇದ್ದ ಧೋನಿ ಪ್ಲಾನ್!

ಮೊದಲಿಗೆ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇ ಆಫ್ ಹಂತವನ್ನು ಅಧಿಕೃತವಾಗಿ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದವು. ಆದರೆ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆಯಲಿರುವ ನಾಲ್ಕನೇ ತಂಡ ಯಾವುದು ಎಂಬ ಕುತೂಹಲ ಲೀಗ್ ಹಂತದ ಕೊನೆಯಲ್ಲಿ ಹೆಚ್ಚಾಗಿತ್ತು. ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆಯುವ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ಅಧಿಕ ರನ್ ರೇಟ್ ಹೊಂದಿರುವ ಕಾರಣದಿಂದಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಪ್ಲೇ ಆಫ್ ಪ್ರವೇಶವನ್ನು ಪಡೆದುಕೊಂಡಿದೆ.

ಐಪಿಎಲ್ 2021 ಪ್ಲೇಆಫ್: ಎಲ್ಲಾ ಪಂದ್ಯಗಳ ವಿವರ, ಸ್ಥಳ, ದಿನಾಂಕ ಮತ್ತು ಸಮಯದ ಸಂಪೂರ್ಣ ಮಾಹಿತಿಐಪಿಎಲ್ 2021 ಪ್ಲೇಆಫ್: ಎಲ್ಲಾ ಪಂದ್ಯಗಳ ವಿವರ, ಸ್ಥಳ, ದಿನಾಂಕ ಮತ್ತು ಸಮಯದ ಸಂಪೂರ್ಣ ಮಾಹಿತಿ

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದಿರುವಷ್ಟೇ ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಾ ಗೆದ್ದಿದ್ದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೆಟ್ ರನ್ ರೇಟ್ ಅಧಿಕವಾಗಿರುವ ಕಾರಣದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೆಟ್ ರನ್ ರೇಟ್ ಕೊರತೆಯಿಂದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕಣಕ್ಕಿಳಿಯುವ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು ಎಲಿಮಿನೇಟರ್ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ. ಹೀಗೆ ತೃತೀಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡದ ಜೊತೆ ಎಲಿಮಿನೇಟರ್ ಪಂದ್ಯವನ್ನಾಡಲಿದ್ದು ಈ ಪಂದ್ಯದ ಕುರಿತಾದ ಮಾಹಿತಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭಾವ್ಯ ಬಳಗದ ವಿವರ ಮುಂದೆ ಇದೆ ಓದಿ.

ಎಲಿಮಿನೇಟರ್ ಪಂದ್ಯ ಯಾವಾಗ?

ಎಲಿಮಿನೇಟರ್ ಪಂದ್ಯ ಯಾವಾಗ?


ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಡಲಿವೆ. ಈ ಪಂದ್ಯ ಅಕ್ಟೋಬರ್ 11ರ ಸೋಮವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಕ್ವಾಲಿಫೈಯರ್ 2ಗೆ ಪ್ರವೇಶಿಸಲಿದ್ದು ಕ್ವಾಲಿಫೈಯರ್ 1 ಪಂದ್ಯದಲ್ಲಿ ಸೋತ ತಂಡದ ಜೊತೆ ಸೆಣಸಾಟ ನಡೆಸಲಿದೆ. ಹಾಗೂ ಈ ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರ ಬೀಳಲಿದೆ.

ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಪಟ್ಟಿ

ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಪಟ್ಟಿ

ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಶಹಬಾಜ್ ಅಹ್ಮದ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ

ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ

ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೋನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಸುನೀಲ್ ನರೈನ್, ಲಾಕಿ ಫರ್ಗ್ಯೂಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ.

Story first published: Saturday, October 9, 2021, 15:39 [IST]
Other articles published on Oct 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X