Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ಸ್ಥಗಿತಗೊಳಿಸುವಂತೆ ಕೋರ್ಟ್‌ಗೆ ಅರ್ಜಿ

IPL 2021: Plea in HC to stop matches in Delhi, use stadium for COVID relief

ದೆಹಲಿಯಲ್ಲಿ ನಡೆಯುವ ಐಪಿಎಲ್ ಪಂದ್ಯಗಳನ್ನು ಸ್ಥಗಿತಗೊಳಿಸುವಂತೆ ಬಿಸಿಸಿಐ ಹಾಗೂ ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೊಸಿಯೇಶನ್‌ಗೆ ನಿರ್ದೇಶನ ನೀಡುವಂತೆ ದೆಹಲಿ ಹೈಕೋರ್ಟ್‌ಗೆ ಸೋಮವಾರ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೆಹಲಿಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳನ್ನು ತಕ್ಷಣವೇ ರದ್ದುಗೊಳಸಬೇಕೆಮದು ಈ ಮನವಿಯಲ್ಲಿ ಕೇಳಿಕೊಳ್ಳಲಾಗಿದೆ.

ಕರಣ್ ಎಸ್ ಠಾಕೂರ್ ಎಂಬ ವಕೀಲರೊಬ್ಬರು ಈ ಅರ್ಜಿಯನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. "ದೆಹಲಿಯ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಅಗತ್ಯ ಔಷಧಿಗಳ ಕೊರತೆಯಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಜನರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡು ದಹನಕ್ರೀಯೆಯಲ್ಲಿ ಭಾಗಿಯಾಗುವಂತಾ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಇಂತಾ ಸಂದರ್ಭದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸುವುದು ಅಸಮಂಜಸ ಮತ್ತು ನ್ಯಾಯಯುತವಾದ ಸಂಗತಿಯಲ್ಲ" ಎಂದು ಈ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಇನ್ನು ಇದೇ ಅರ್ಜಿಯಲ್ಲಿ ಮತ್ತೊಂದು ಮನವಿಯನ್ನು ಕೂಡ ಮಾಡಲಾಗಿದೆ. ದೆಹಲಿಯ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಎಲ್ಲಾ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿ. ಇಂತಾ ಸಂದರ್ಭದಲ್ಲಿ ಕ್ರೀಡಾಂಗಣವನ್ನು ಕೋವಿಡ್ ಸೆಂಟರ್ ಆಗಿ ಬಳಸಿಕೊಳ್ಳುವ ಮೂಲಕ ಜನರಿಗೆ ಸಹಕಾರಿಯಾಗುವಂತೆ ಬಳಸಿಕೊಳ್ಳಲು ಮನವಿ ಮಾಡಲಾಗಿದೆ.

ಸದ್ಯ ಐಪಿಎಲ್‌ಗೂ ಕೊರೊನಾ ವೈರಸ್‌ನ ಆತಂಕ ಹೆಚ್ಚಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈರಸ್‌ಗೆ ತುತ್ತಾಗಿರುವುದು ದೃಢಪಟ್ಟಿದೆ. ಹೀಗಾಗಿ ಸೋಮವಾರ ನಡೆಯಬೇಕಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನು ಮುಂದೂಡಲಾಗಿದೆ.

Story first published: Tuesday, May 4, 2021, 9:36 [IST]
Other articles published on May 4, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+