ಐಪಿಎಲ್ 2021: ಡೆಲ್ಲಿ vs ಹೈದರಾಬಾದ್ ಪಂದ್ಯದ ಬಳಿಕ ಅಂಕಪಟ್ಟಿ ಹೇಗಿದೆ!

ಐಪಿಎಲ್‌ನ 14ನೇ ಆವೃತ್ತಿಯಲ್ಲಿ 33ನೇ ಪಂದ್ಯ ಅಂತ್ಯವಾಗಿದೆ. ಈ ಪಂದ್ಯದಲ್ಲಿ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಏಕಮುಖವಾಗಿ ಸಾಗಿದ ಈ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ತಂಡ 7ನೇ ಗೆಲುವನ್ನು ಕಂಡಿದೆ. ಇದು ಡೆಲ್ಲಿ ತಂಡದ 9ನೇ ಪಂದ್ಯವಾಗಿತ್ತು.
ಈ ಗೆಲುವಿನಿಂದಾಗಿ ಡೆಲ್ಲಿ ಕ್ಯಾಪಟಿಲ್ಸ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2ನೇ ಸ್ಥಾನಕ್ಕೆ ಕುಸಿದಿದೆ. ಡೆಲ್ಲಿ ಕ್ಯಾಪಿಟಲ್ಸ್ ಖಾತೆಯಲ್ಲೀಗ 14 ಅಂಕಗಳಿದ್ದು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಖಾತೆಯಲ್ಲಿ 12 ಅಂಕಗಳಿವೆ. ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿ 3ನೇ ಸ್ಥಾನದಲ್ಲಿದ್ದು 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಇನ್ನು ಅಗ್ರ ನಾಲ್ಕನೇ ಸ್ಥಾನದಲ್ಲಿರುವ ಮತ್ತೊಂದು ತಂಡ ಮುಂಬೈ ಇಂಡಿಯನ್ಸ್. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಈ ಬಾರಿ ಆಡಿದ 8 ಪಂದ್ಯಗಳಲ್ಲಿ ನಾಲ್ಕು ಗೆಲುವು ನಾಲ್ಕು ಸೋಲು ಕಂಡಿದ್ದು 8 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ.
ಇನ್ನು ಉಳಿದಂತೆ ರಾಜಸ್ಥಾನ್ ರಾಯಲ್ಸ್ ತಂಡ ಐದನೇ ಸ್ಥಾನದಲ್ಲಿದ್ದು ಇದು ಕೂಡ ನಾಲ್ಕು ಗೆಲುವು ಹಾಗೂ ನಾಲ್ಕು ಸೋಲು ಕಂಡಿದೆ. ಖಾತೆಯಲ್ಲಿ 8 ಅಂಕಗಳನ್ನು ಹೊಂದಿದೆ. ಕೊಲ್ಕತ್ತಾನೈಟ್ ರೈಡರ್ಸ್ 6ನೇ ಸ್ಥಾನದಲ್ಲಿದ್ದು ಆಡಿದ 8 ಪಂದ್ಯಗಳ ಪೈಕಿ 3 ಗೆಲುವು ಹಾಗೂ 5 ಸೋಲು ಕಂಡಿದೆ. ಈ ಮೂಲಕ 6 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ.
ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. 9 ಪಂದ್ಯಗಳನ್ನು ಆಡಿರುವ ಪಂಜಾಬ್ 3 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದ್ದು 6 ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ 8 ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 1 ಪಂದ್ಯವನ್ನು ಮಾತ್ರವೇ ಗೆದ್ದುಕೊಂಡಿದೆ. ಈ ಮೂಲಕ ಕೇವಲ 2 ಅಂಕಗಳನ್ನು ಮಾತ್ರವೇ ಖಳಾತೆಯಲ್ಲಿ ಹೊಂದಿ ಹೀನಾಯ ಸ್ಥಿತಿಯಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications