ಐಪಿಎಲ್ 2021: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಎಂಎಸ್ ಧೋನಿ ನೇತೃತ್ವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಅಂಕಪಟ್ಟಿಯಲ್ಲಿ ಧೊನಿ ಪಡೆ ಈಗ ಎರಡನೇ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಧೋನಿ ಪಡೆ ಎಲ್ಲಾ ತಂಡಗಳಿಗಿಂತ ಮುನ್ನಡೆಯನ್ನು ಸಾಧಿಸಿದೆ. ಹೀಗಾಗಿ ಎರಡನೇ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಕಳೆದ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ಭರವಸೆಯನ್ನು ಮೂಡಿಸಿದೆ. ತಂಡದ ಬಹುತೇಕ ಆಟಗಾರರು ಉತ್ತಮ ಲಯದಲ್ಲಿರುವುದು ಚೆನ್ನೈ ಪಾಲಿಗೆ ಸಕಾರಾತ್ಮಕ ಅಂಶವಾಗಿದೆ. ಆರಂಭಿಕ ಪಂದ್ಯದಲ್ಲಿ ಸೋಲು ಕಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಬಳಿಕ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿರುವುದು ತಂಡದ ಆತ್ಮವಿಶ್ವಾಸವನ್ನು ಸಹಜವಾಗಿಯೇ ಹೆಚ್ಚಿಸಿದೆ.
ಇನ್ನು ಇಂದಿನ ಪಂದ್ಯದ ನಂತರ ಆರೆಂಜ್ ಕ್ಯಾಪ್ ಪಟ್ಟಿ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಅಂತಾ ಬದಲಾವಣೆಗಳು ಆಗಿಲ್ಲ. ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೊಯೀನ್ ಅಲಿ ಟಾಪ್ 8ಕ್ಕೆ ಜಿಗಿದಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ರಾಜಸ್ಥಾನ್ ರಾಯಕ್ಸ್ ತಂಡದ ಚೇತನ್ ಸಕಾರಿಯಾ ಐದನೇ ಸ್ಥಾನಕ್ಕೆ ಏರಿದ್ದಾರೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications