For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಅಂಕಪಟ್ಟಿಯಲ್ಲಿ ಚೆನ್ನೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಡೆಲ್ಲಿ

IPL 2021 Points Table After Delhi capitals vs mumbai indians DC on 2nd place

ಐಪಿಎಲ್‌ನ 13ನೇ ಪಂದ್ಯ ಅಂತ್ಯವಾಗುತ್ತಿದ್ದಂತೆಯೇ ಮತ್ತೆ ಅಂಕ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಗಳಿಸಿಕೊಂಡಿದೆ.

ಆಡಿದ ಮೂರು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ಪಂದ್ಯಗಳನ್ನು ಆಡಿ ಮೂರು ಗೆಲುವು ಸಾಧಿಸಿದ್ದು ನೆಟ್‌ರನ್‌ರೇಟ್‌ನಲ್ಲಿ ಆರ್‌ಸಿಬಿಗಿಂತ ಹಿಂದುಳಿದಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಈ ಬಾರಿಯ ಟೂರ್ನಿಯನ್ನು ಭರ್ಜರಿಯಾಗಿ ಆರಂಭಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಕಂಡಿತ್ತು. ಆದರೆ ನಂತರದ ಎರಡು ಪಂದ್ಯಗಳಲ್ಲಿಯೂ ಡೆಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ ಜಯದ ಹಾದಿಗೆ ಮರಳಿದೆ.

Rohit Sharmaಗೆ ಸೋತ ನಂತರ‌ಮತ್ತೋಂದು ಶಾಕ್ | Oneindia Kannada

ಇನ್ನು ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಿಗೆ ನೀಡುವ ಆರೆಂಜ್ ಕ್ಯಾಪ್‌ ಪಟ್ಟಿಯಲ್ಲಿ ಶಿಖರ್ ಧವನ್ ಅಗ್ರಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ನಾಲ್ಕು ಪಂದ್ಯಗಳಲ್ಲಿ ಎರಡು ಅರ್ಧ ಶತಕಗಳ ಸಹಿತ ಧವನ್ 57.74ರ ಸರಾಸರಿಯಲ್ಲಿ 231 ರನ್‌ ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಗ್ಲೆನ್ ಮ್ಯಾಕ್ಸವೆಲ್ ಮುಂದುವರಿದಿದ್ದಾರೆ.

ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಆರ್‌ಸಿಬಿಯ ಹರ್ಷಲ್ ಪಟೇಲ್ ಮೊದಲ ಸ್ಥಾನದಲ್ಲಿ ಮುಂದಿವರಿದಿದ್ದರೆ ಎರಡನೇ ಸ್ಥಾನದಲ್ಲಿ ಆವೇಶ್ ಖಾನ್ ಹಾಗೂ ರಾಹುಲ್ ಚಾಹರ್ ಮೂರನೇ ಸ್ಥಾನದಲ್ಲಿದ್ದಾರೆ.

Story first published: Wednesday, April 21, 2021, 23:36 [IST]
Other articles published on Apr 21, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+