ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಂಜಾಬ್ ಸೋಲಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ ಡೆಲ್ಲಿ

IPL 2021: Points Table after Delhi Capitals vs Punjab Kings, 11th Match

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಭರ್ಜರಿ ಜಯ ಗಳಿಸಿದೆ. ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್‌ ನೆರವಿನೊಂದಿಗೆ ಡೆಲ್ಲಿ ತಂಡ ಟೂರ್ನಿಯ ಎರಡನೇ ಜಯ ದಾಖಲಿಸಿದೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಪಂಜಾಬ್ ಕಿಂಗ್ಸ್‌ ವಿರುದ್ಧದ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 2021ರ ಪಾಯಿಂಟ್ಸ್‌ ಟೇಬಲ್‌ನಲ್ಲಿ ದ್ವಿತೀಯ ಸ್ಥಾನಕ್ಕೇರಿದೆ. ಈ ಪಂದ್ಯದಕ್ಕೂ ಮುನ್ನ 4ನೇ ಸ್ಥಾನದಲ್ಲಿದ್ದ ಡೆಲ್ಲಿ ದ್ವಿತೀಯ ಸ್ಥಾನಕ್ಕೆರಿದ್ದರೆ, 7ನೇ ಸ್ಥಾನದಲ್ಲಿದ್ದ ಪಂಜಾಬ್ 7ನೇ ಸ್ಥಾನದಲ್ಲೇ ಇದೆಯಾದರೂ ನೆಟ್ ರನ್‌ ರೇಟ್‌ ವಿಚಾರದಲ್ಲಿ ತಳ ಸ್ಥಾನಕ್ಕೆ ಕುಸಿದಿದೆ.

ಐಪಿಎಲ್ ಇತಿಹಾಸದಲ್ಲೇ ಬಲು ಅಪರೂಪದ ದಾಖಲೆಗಳ ಬರೆದ ಆರ್‌ಸಿಬಿ!ಐಪಿಎಲ್ ಇತಿಹಾಸದಲ್ಲೇ ಬಲು ಅಪರೂಪದ ದಾಖಲೆಗಳ ಬರೆದ ಆರ್‌ಸಿಬಿ!

ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಗೆಲುವು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ಪಾಯಿಂಟ್ಸ್‌, +0.750 ನೆಟ್‌ ರನ್‌ರೇಟ್‌ನೊಂದಿಗೆ ಸದ್ಯ ಅಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿದೆ. 3ರಲ್ಲಿ 2 ಗೆಲುವು ಕಂಡಿರುವ ಡೆಲ್ಲಿ 4 ಪಾಯಿಂಟ್ಸ್‌, +0.453 ನೆಟ್‌ ರನ್‌ರೇಟ್‌ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

3ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್, 4ನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 5ನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್, 6ನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿವೆ. ಅತ್ಯಧಿಕ ರನ್‌ಗಾಗಿ ಕೊಡಲಾಗುವ ಆರೆಂಜ್ ಕ್ಯಾಪ್‌ ಕೂಡ ಡೆಲ್ಲಿ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಕೈಯಲ್ಲಿದೆ.

Story first published: Monday, April 19, 2021, 9:03 [IST]
Other articles published on Apr 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X