ಐಪಿಎಲ್ 2021: ಅಂಕಪಟ್ಟಿಯಲ್ಲಿ ಏರಿಕೆ ಕಂಡ ಪಂಜಾಬ್ ಕಿಂಗ್ಸ್

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಕೆಎಲ್ ರಾಹುಲ್ ಪಡೆ ಗಮನಾರ್ಹ ಸಾಧನೆ ಮಾಡಿದೆ. ಅಂಕಪಟ್ಟಿಯಲ್ಲಿ ತಳ ಭಾಗಕ್ಕೆ ಸೇರಿಕೊಂಡಿದ್ದ ರಾಹುಲ್ ಪಡೆ ಈಗ ಐದನೇ ಸ್ಥಾನಕ್ಕೆ ಬಂದು ತಲುಪಿದೆ.
ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರವೇ ಸಾಧಿಸಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಅತಿ ಅಗತ್ಯವಾದ ಗೆಲುವು ಸಾಧಿಸಿದೆ. ಅದರಲ್ಲೂ ಈ ಗೆಲುವು ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಸಾಧಿಸಿರುವುದು ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ಇದು ಮುಂದಿನ ಪಂದ್ಯಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ.
ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆರ್‌ಸಿಬಿ ಇದ್ದರೆ ಎರಡನೇ ಸ್ಥಾನದಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮೂರನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಇದೆ. ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಸಮಾನವಾಗಿದ್ದರೂ ರನ್‌ರೇಟ್‌ನಲ್ಲಿ ಮುಂಬೈ ಮೇಲುಗೈ ಸಾಧಿಸಿದ್ದು ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ಆತಿ ಹೆಚ್ಚಿನ ರನ್‌ಗಳಿಸುವ ಆಟಗಾರರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನಕ್ಕೇರಿದರೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಿಖರ್ ಧವನ್ ಮುಂದುವರಿದಿದ್ದಾರೆ. ಆರ್‌ಸಿಬಿ ಮ್ಯಾಕ್ಸ್‌ವೆಲ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಅತಿ ಹೆಚ್ಚಿ ವಿಕೆಟ್ ಪಡೆದವರ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಆರ್‌ಸಿಬಿಯ ಹರ್ಷಲ್ ಪಟೇಲ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದರೆ ರಾಹುಲ್ ಚಾಹರ್ ಎರಡನೇ ಸ್ಥಾನ ಹಾಗೂ ದೀಪಕ್ ಚಾಹರ್ ಮೂರನೇ ಸ್ಥಾನದಲ್ಲಿ ಇದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications