ಪಂಜಾಬ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಡೆಲ್ಲಿ

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮೇ 2) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 29ನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಸುಲಭ ಜಯ ಗಳಿಸಿದೆ. ಪಂಜಾಬ್ ನಾಯಕ ಮಯಾಂಕ್ ಅಗರ್ವಾಲ್ ಮಾಡಿದ ಹೋರಾಟ ವ್ಯರ್ಥವಾಗಿದೆ. ಪಂದ್ಯದಲ್ಲಿ ಮಯಾಂಕ್ 58 ಎಸೆತಗಳಲ್ಲಿ 99 ರನ್ ಬಾರಿಸಿದ್ದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಗೆಲುವಿನೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನಕ್ಕೆರಿದೆ. ಆಡಿರುವ 8 ಪಂದ್ಯಗಳಲ್ಲಿ ಡೆಲ್ಲಿ, 6 ಪಂದ್ಯ ಗೆದ್ದಿರುವ ಡೆಲ್ಲಿ 12 ಪಾಯಿಂಟ್ಸ್‌ನೊಂದಿಗೆ +0.547 ನೆಟ್ ರನ್‌ರೇಟ್ ಗಳಿಸಿದೆ. 8ರಲ್ಲಿ 3 ಪಂದ್ಯ ಗೆದ್ದಿರುವ ಪಂಜಾಬ್ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ತೃತೀಯ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, 4ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್, 5ನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್, 7ನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, 8ನೇ ಸ್ಥಾನದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಗಳಿವೆ.
ಪಂಜಾಬ್ ಕಿಂಗ್ಸ್‌ಗೆ ಮುಂದೆ ಮೇ 6ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಪಂಜಾಬ್ ಗೆಲ್ಲಲೇಬೇಕಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೇ 8ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications