ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಸಿಎಸ್‌ಕೆಗೆ ಸೋಲಿನ ರುಚಿ ತೋರಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಡೆಲ್ಲಿ

IPL 2021 Points Table, Orange and Purple Cap holders list after CSK vs DC Match

ಐಪಿಎಲ್ ಲೀಗ್ ಹಂತದ ಪಂದ್ಯಗಳು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆಯೇ ಸಾಕಷ್ಟು ರೋಚಕತೆಯನ್ನು ಪಡೆದುಕೊಳ್ಳುತ್ತಿದೆ. ಅಂಕಪಟ್ಟಿಯಲ್ಲಿ ಆಗುವ ಬದಲಾವಣೆಗಳು ಈ ಹಂತದಲ್ಲಿ ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆಯುತ್ತವೆ. ಒಂದೆಡೆ ಪ್ಲೇಆಫ್‌ಗೇರಲು ಕೆಲ ತಂಡಗಳು ಜಿದ್ದಿಗೆ ಬಿದ್ದು ಹೋರಾಡುತ್ತಿದ್ದರೆ ಮತ್ತೆ ಕೆಲ ತಂಡಗಳು ಅಗ್ರ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಈ ಸ್ಪರ್ಧೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯಶಸ್ಸು ದೊರೆತಿದ್ದು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಈ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸಮಾನ ಅಂಕವನ್ನು ಪಡೆದುಕೊಂಡಿತ್ತು. ಆದರೆ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದ್ದ ಕಾರಣ ಅಗ್ರಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಈಗ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ತಂಡಕ್ಕಿಂತ ಎರಡು ಅಂಕ ಹೆಚ್ಚು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಗಳಿಸಿಕೊಂಡಿದೆ.

ಐಪಿಎಲ್: ಆಡಿದ ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್‌ನ ಉಮ್ರಾನ್ ಮಲಿಕ್ಐಪಿಎಲ್: ಆಡಿದ ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್‌ನ ಉಮ್ರಾನ್ ಮಲಿಕ್

ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈಗ 20 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ 13 ಪಂದ್ಯಗಳನ್ನು ಆಡಿದ್ದು ಇದರಲ್ಲಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಮೂರು ಪಂದ್ಯದಲ್ಲಿ ಸೋತಿದೆ. ಈ ಮೂಲಕ 20 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದೆ. ಮತ್ತೊಂದೆಡೆ ಇಷ್ಟೇ ಪಂದ್ಯಗಳನ್ನು ಆಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ಗೆಲುವು ಹಾಗೂ ನಾಲ್ಕು ಸೋಲಿನೊಂದಿಗೆ 18 ಅಂಕಗಳನ್ನು ಗಳಿಸಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಅವರಿಬ್ಬರು ಪಂದ್ಯವನ್ನು ಪವರ್‌ಪ್ಲೇನಲ್ಲಿಯೇ ಮುಗಿಸಿದ್ದರು: ಸಂಜು ಸ್ಯಾಮ್ಸನ್ ಪ್ರತಿಕ್ರಿಯೆಅವರಿಬ್ಬರು ಪಂದ್ಯವನ್ನು ಪವರ್‌ಪ್ಲೇನಲ್ಲಿಯೇ ಮುಗಿಸಿದ್ದರು: ಸಂಜು ಸ್ಯಾಮ್ಸನ್ ಪ್ರತಿಕ್ರಿಯೆ

ಟಾಪ್ 2ರಲ್ಲಿ ಸ್ಥಾನ ಪಡೆಯುತ್ತಾ ಆರ್‌ಸಿಬಿ: ಪ್ಲೇಆಫ್ ಹಂತದಲ್ಲಿ ಅಗ್ರ ಎರಡು ತಂಡಗಳಲ್ಲಿ ಸ್ಥಾನ ಪಡೆದರೆ ಆ ತಂಡಗಳಿಗೆ ಕ್ವಾಲಿಫೈಯರ್ ಪಂದ್ಯದಲ್ಲಿ ಆಡುವ ಅವಕಾಶ ದೊರೆಯುತ್ತದೆ ಹಾಗೂ ಸೋತರೂ ಮತ್ತೊಂದು ಪಂದ್ಯದ ಅವಕಾಶವಿರುತ್ತದೆ. ಹೀಗಾಗಿ ಟಾಪ್ 2 ಮೇಲೆ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಕೂಡ ಕಣ್ಣಿಟ್ಟಿದೆ. 12 ಪಂದ್ಯಗಳನ್ನು ಆಡಿರುವ ಆರ್‌ಸಿಬಿಗೆ ಮುಂದಿನ ಎರಡು ಪಂದ್ಯದಲ್ಲಿಯೂ ಗೆದ್ದರೆ ಹಾಘೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂದಿನ ಪಂದ್ಯದಲ್ಲಿ ಸೋತರೆ ಎರಡನೇ ಸ್ಥಾನಕ್ಕೇರುವ ಅವಕಾಶವಿದೆ. ಆದರೆ ಲೀಗ್ ಹಂತದ ಅಂತ್ಯದಲ್ಲಿ ಆರ್‌ಸಿಬಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸಮಾನ ಅಂಕವನ್ನು ಗಳಿಸಿದರೆ ನೆಟ್‌ರನ್‌ರೇಟ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಂದಿರು ಕಾರಣ ಆರ್‌ಸಿಬಿ ಮೂರನೇ ತಂಡವಾಗಿಯೇ ಪ್ಲೇಆಫ್‌ಗೆ ಪ್ರವೇಶ ಪಡೆಯಲಿದೆ.

ಆರೆಂಜ್ ಕ್ಯಾಪ್: ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ತಮ್ಮಲ್ಲಿ ಉಳಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಸದ್ಯ 528 ರನ್‌ಗಳಿಸಿ ಟೂರ್ನಿಯ ಟಾಒ್ ಸ್ಕೋರರ್ ಎನಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಋತುರಾಜ್ ಗಾಯಕ್ವಾಡ್ ಇದ್ದು 508 ರನ್‌ಗಳಿಸಿದ್ದಾರೆ. 501 ರನ್‌ಗಳಿಸಿರುವ ಧವನ್ ಈ ಟೂರ್ನಿಯಲ್ಲಿ 500ಕ್ಕೂ ಅಧಿಕ ರನ್‌ಗಳಿಸಿದ ಮತ್ತೋರ್ವ ಆಟಗಾರನಾಗಿದ್ದಾರೆ.

'ಧೋನಿ ಸಿಎಸ್‌ಕೆ ಪರ ಏನೂ ಮಾಡಿಲ್ಲ, ಆದರೂ ತಂಡ ಪ್ಲೇಆಫ್ ತಲುಪಿದೆ' ಎಂದ ಮಾಜಿ ಕ್ರಿಕೆಟಿಗ'ಧೋನಿ ಸಿಎಸ್‌ಕೆ ಪರ ಏನೂ ಮಾಡಿಲ್ಲ, ಆದರೂ ತಂಡ ಪ್ಲೇಆಫ್ ತಲುಪಿದೆ' ಎಂದ ಮಾಜಿ ಕ್ರಿಕೆಟಿಗ

ಪಂಜಾಬ್ ಗೆ ಟಾಂಗ್ ಕೊಟ್ಟ RCB ಪಡೆ | Oneindia Kannada

ಪರ್ಪಲ್ ಕ್ಯಾಪ್: ಇನ್ನು ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರಿಗೆ ನೀಡುವ ಪರ್ಪಲ್ ಕ್ಯಾಪ್ ಆರ್‌ಸಿಬಿ ವೇಗಿ ಹರ್ಷಲ್ ಪಟೇಲ್ ಮುಡಿಗೇರಿದೆ. ಹರ್ಷಲ್ ಪಟೇಲ್ 26 ವಿಕೆಟ್ ಕಬಳಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಡೆಲ್ಲಿ ಯುವ ವೇಗಿ ಆವೇಶ್ ಖಾನ್ ಇದ್ದು 22 ವಿಕೆಟ್ ಸಂಪಾದಿಸಿದ್ದಾರೆ. 18 ವಿಕೆಟ್ ಪಡೆದಿರುವ ಮೊಹಮ್ಮದ್ ಶಮಿ ಮೂರು ಹಾಗೂ ಜಸ್ಪ್ರೀತ್ ಮೂಮ್ತಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅರ್ಚದೀಪ್ ಸಿಂಗ್ 16 ವಿಕೆಟ್ ಪಡೆದಿದ್ದು 5ನೇ ಸ್ಥಾನದಲ್ಲಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಟಾಪ್ ಐವರು ಬೌಲರ್‌ಗಳು ಕೂಡ ಭಾರತೀಯರೇ ಆಗಿದ್ದಾರೆ.

Story first published: Tuesday, October 5, 2021, 0:28 [IST]
Other articles published on Oct 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X