CSK vs DC ಪಂದ್ಯದ ಬಳಿಕ ಅಂಕಪಟ್ಟಿ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಆಟಗಾರರ ಪಟ್ಟಿ ಹೀಗಿದೆ

ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಪ್ಲೇ ಆಫ್ ಸುತ್ತು ನಡೆಯಲಿದೆ.
ಮುಂಬರಲಿರುವ ಈ ಪ್ಲೇ ಆಫ್ ಸುತ್ತಿಗೆ ಈಗಾಗಲೇ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡಿವೆ. ಹೌದು ಅಂಕಪಟ್ಟಿಯಲ್ಲಿ ಟಾಪ್ 3 ಸ್ಥಾನಗಳನ್ನು ಪಡೆದುಕೊಂಡಿರುವ ಈ ಮೂರೂ ತಂಡಗಳು ಪ್ಲೇ ಆಫ್ ಸುತ್ತಿಗೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡಿವೆ. ಮೊದಲಿಗೆ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡ ಚೊಚ್ಚಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು, ನಂತರ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ತದನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕೂಡ ಪ್ಲೇ ಆಫ್ ಹಂತಕ್ಕೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡವು.
ಹೀಗೆ ಈ ಮೂರೂ ತಂಡಗಳು ಪ್ಲೇ ಆಫ್ ಹಂತಕ್ಕೆ ಯಶಸ್ವಿಯಾಗಿ ಪ್ರವೇಶಿಸಿದ್ದು, ಇನ್ನುಳಿದ ತಂಡಗಳಾದ ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆಯಬಹುದಾದ ಕೊನೆಯ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಇನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಗಳನ್ನು ಟೂರ್ನಿ ಆರಂಭವಾದಾಗಿನಿಂದಲೂ ಆಕ್ರಮಿಸಿಕೊಳ್ಳುತ್ತಾ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಅಕ್ಟೋಬರ್ 4ರ ಸೋಮವಾರದಂದು ದುಬೈ ಕ್ರೀಡಾಂಗಣದಲ್ಲಿ ನಡೆದ ಪಂದ್ಯವೊಂದರಲ್ಲಿ ಸೆಣಸಾಡಿದವು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 3 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದ್ವಿತೀಯ ಸ್ಥಾನಕ್ಕೆ ತಳ್ಳಿತು.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಡುವಿನ ಈ ಪಂದ್ಯ ಮುಗಿದ ನಂತರ ಟೂರ್ನಿಯ ಅಂಕಪಟ್ಟಿ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಆಟಗಾರರ ಪಟ್ಟಿ ಹೇಗಿವೆ ಎಂಬುದರ ಮಾಹಿತಿ ಮುಂದೆ ಇದೆ ಓದಿ.

ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ನಂತರ ಅಂಕಪಟ್ಟಿ
1. ಡೆಲ್ಲಿ ಕ್ಯಾಪಿಟಲ್ಸ್ - 20 ಅಂಕಗಳು
2. ಚೆನ್ನೈ ಸೂಪರ್ ಕಿಂಗ್ಸ್ - 18 ಅಂಕಗಳು
3. ರಾಯಲ್ ಚಾಲೆಂಜರ್ಸ್ ಬೆಂಗಳೂರು - 16 ಅಂಕಗಳು
4. ಕೋಲ್ಕತ್ತಾ ನೈಟ್ ರೈಡರ್ಸ್ - 12 ಅಂಕಗಳು
5. ಪಂಜಾಬ್ ಕಿಂಗ್ಸ್ - 10 ಅಂಕಗಳು
6. ರಾಜಸ್ಥಾನ್ ರಾಯಲ್ಸ್ - 10 ಅಂಕಗಳು
7. ಮುಂಬೈ ಇಂಡಿಯನ್ಸ್ - 10 ಅಂಕಗಳು
8. ಸನ್ ರೈಸರ್ಸ್ ಹೈದರಾಬಾದ್ - 4 ಅಂಕಗಳು

ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಬಳಿಕ ಆರೆಂಜ್ ಕ್ಯಾಪ್ ಪಟ್ಟಿ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಡುವಿನ ಪಂದ್ಯ ಮುಗಿದ ನಂತರ ಆರೆಂಜ್ ಕ್ಯಾಪ್ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.
1. ಕೆಎಲ್ ರಾಹುಲ್ - 528 ರನ್‌ಗಳು
2. ರುತುರಾಜ್ ಗಾಯಕ್ವಾಡ್ - 521 ರನ್‌ಗಳು
3. ಶಿಖರ್ ಧವನ್ - 501 ರನ್‌ಗಳು
4. ಸಂಜು ಸ್ಯಾಮ್ಸನ್ - 480 ರನ್‌ಗಳು
5. ಫಾಫ್ ಡು ಪ್ಲೆಸಿಸ್ - 470 ರನ್‌ಗಳು

ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಬಳಿಕ ಪರ್ಪಲ್ ಕ್ಯಾಪ್ ಪಟ್ಟಿ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಡುವಿನ ಪಂದ್ಯ ಮುಗಿದ ನಂತರ ಪರ್ಪಲ್ ಕ್ಯಾಪ್ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.
1. ಹರ್ಷಲ್ ಪಟೇಲ್ - 26 ವಿಕೆಟ್‍ಗಳು
2. ಆವೇಶ್ ಖಾನ್ - 22 ವಿಕೆಟ್‍ಗಳು
3. ಮೊಹಮ್ಮದ್ ಶಮಿ - 18 ವಿಕೆಟ್‍ಗಳು
4. ಜಸ್ಪ್ರೀತ್ ಬುಮ್ರಾ - 17 ವಿಕೆಟ್‍ಗಳು
5. ಅರ್ಷದೀಪ್ ಸಿಂಗ್ - 16 ವಿಕೆಟ್‍ಗಳು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications