For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಯ್ತು ಮುಂಬೈ ವಿರುದ್ಧದ ಕೆಕೆಆರ್ ಗೆಲುವು

 IPL 2021 Points Table, Orange and Purple Cap holders list after KKR vs MI Match

ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ರೋಚಕತೆ ನಿಧಾನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಕೊಲ್ಕತ್ತಾ ನೀಡಿದ ಅದ್ಭುತ ಪ್ರದರ್ಶನದಿಂದಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಭಾರೀ ಅಂತರದಿಂದ ಕೆಕೆಆರ್‌ಗೆ ಮಣಿದಿದೆ. ಈ ಅದ್ಭುತ ಗೆಲುವಿನಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ ಭಾರೀ ಏರಿಕೆ ಕಂಡಿದ್ದು 6ನೇ ಸ್ಥಾನದಿಂದ ಟಾಪ್ 4ಗೆ ಲಗ್ಗೆಯಿಟ್ಟಿದೆ. ಕೆಕೆಆರ್ ತಂಡದ ಈ ಗೆಲುವಿನಿಂದ ಅಂಕಪಟ್ಟಿಯಲ್ಲಿನ ರೋಚಕತೆ ಮತ್ತಷ್ಟು ಹೆಚ್ಚಾಗಿದೆ.

ಇನ್ನು ಈವರೆಗೆ ನಡೆದ ಐಪಿಎಲ್ ಪಂದ್ಯಗಳ ಪೈಕಿ ಟಾಪ್ 2 ಸ್ಥಾನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಮಡಗಳು ಪೈಪೋಟಿ ನಡೆಸುತ್ತಿವೆ. ಸದ್ಯ ಡೆಲ್ಲಿ ಆಡಿದ 9 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಸಾಧಿಸಿದ್ದು 14 ಅಂಕಗಳನ್ನು ಖಾತೆಯಲ್ಲಿಟ್ಟುಕೊಂಡಿದೆ. ಎರಡನೇ ಸ್ಥಾನದಲ್ಲಿರುವ ಸಿಎಸ್‌ಕೆ 8 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದ್ದು 12 ಅಂಕಹೊಂದಿದೆ. ಇನ್ನು ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿ ತಂಡ ಇದ್ದು 8 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿ 10 ಅಂಕಗಳನ್ನು ಹೊಂದಿದೆ. ನಾಲ್ಕನೇ ಸ್ಥಾನಕ್ಕೆ ಲಗ್ಗೆಯಿಟ್ಟಿರುವ ಕೆಕೆಆರ್ 9 ಪಂದ್ಯಗಳ ಪೈಕಿ 4ರಲ್ಲಿ ಗೆಲುವು ಸಾಧಿಸಿದ್ದು 8 ಅಂಕಗಳನ್ಉ ಹೊಂದಿದೆ. ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕೂಡ 8 ಅಂಕಗಳನ್ನು ಹೊಂದಿದೆ. ಆದರೆ ರನ್‌ರೇಟ್‌ನಲ್ಲಿ ಕೆಕೆಆರ್ ಮುಂದಿದೆ. ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕೊನೆಯ ಎರಡು ಸ್ಥಾನಗಳಲ್ಲಿದೆ.

ಆರೆಂಜ್ ಕ್ಯಾಪ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಆಟಗಾರ ಶಿಖರ್ ಧವನ್ ಅರಿ ಹೆಚ್ಚು ರನ್ ಬಾರಿಸಿದ ಆಟಗಾರರು ಪಡೆಯುವ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಶಿಖರ್ ಧವನ್ ಟೂರ್ನಿಯಲ್ಲಿ ಈವರೆಗೆ 9 ಪಂದ್ಯಗಳನ್ನು ಆಡಿದ್ದು 422 ರನ್‌ ಬಾರಿಸಿದ್ದಾರೆ. ಈ ಮೂಲಕ ಎರಡನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್‌ಗಿಂತ 42 ರನ್‌ಗಳಷ್ಟು ಮುಂದಿದ್ದಾರೆ ಧವನ್. ಮೂರನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮತ್ತೀರ್ವ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಇದ್ದು 327 ರನ್‌ಗಳನ್ನು ಗಳಸಿದ್ದಾರೆ.

ಪರ್ಪಲ್‌ ಕ್ಯಾಪ್: ಇನ್ನು ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರಿಗೆ ನೀಡುವ ಪರ್ಪಲ್ ಕ್ಯಾಪ್ ಪಟ್ಟಿಯ ಮೊದಲ ಎರಡು ಸ್ಥಾನದಲ್ಲಿ ಹರ್ಷಲ್ ಪಟೇಲ್ ಹಾಗೂ ಆವೇಶ್ ಖಾನ್ ಮುಂದುವರಿದಿದ್ದಾರೆ.ರಾಜಸ್ಥಾನ್ ರಾಯಲ್ಸ್ ತಂಡದ ಅನುಭವಿ ಬೌಲರ್ ಕ್ರಿಸ್ ಮೋರಿಸ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು 14 ವಿಕೆಟ್ ಸಂಪಾದಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದ ಅರ್ಷದೀಪ್ ಸಿಂಗ್ 12 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ರಶೀದ್ ಖಾನ್ ಇದ್ದು ಅವರು ಕೂಡ 12 ವಿಕೆಟ್ ಪಡೆದಿದ್ದಾರೆ.

Story first published: Friday, September 24, 2021, 9:58 [IST]
Other articles published on Sep 24, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+