ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

KKR vs SRH ಪಂದ್ಯದ ಬಳಿಕ ಅಂಕಪಟ್ಟಿ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಆಟಗಾರರ ಪಟ್ಟಿ ಹೀಗಿದೆ

 IPL 2021 Points Table, Orange and Purple Cap holders list after KKR vs SRH Match

ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಪ್ಲೇ ಆಫ್ ಸುತ್ತು ನಡೆಯಲಿದೆ.

ಸಿಎಸ್‌ಕೆ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಜಸ್ಥಾನ್; ಪ್ಲೇಆಫ್ ಆಸೆಯಲ್ಲಿದ್ದ ಮುಂಬೈಗೆ ಸಂಕಷ್ಟ!ಸಿಎಸ್‌ಕೆ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಜಸ್ಥಾನ್; ಪ್ಲೇಆಫ್ ಆಸೆಯಲ್ಲಿದ್ದ ಮುಂಬೈಗೆ ಸಂಕಷ್ಟ!

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೆನ್ನಲ್ಲೇ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಟ್ಟಿತು. ಇನ್ನು ಭಾನುವಾರ ( ಅಕ್ಟೋಬರ್ 3 ) ನಡೆದ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್‌ಗಳ ರೋಚಕ ಜಯವನ್ನು ಸಾಧಿಸುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿತು. ಹೀಗೆ ಈ ಮೂರೂ ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ್ದು ಉಳಿದ ತಂಡಗಳಾದ ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ತಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಲು ಪೈಪೋಟಿ ನಡೆಸುತ್ತಿವೆ.

ಮುಂಬೈ ಗೆಲುವಿನಾಸೆಗೆ ಮುಳುವಾದ ಅಶ್ವಿನ್, ಶ್ರೇಯಸ್; ಮುಂಬೈ ಇಂಡಿಯನ್ಸ್‌‌ ಪ್ಲೇಆಫ್ ಕಥೆಯೇನು?ಮುಂಬೈ ಗೆಲುವಿನಾಸೆಗೆ ಮುಳುವಾದ ಅಶ್ವಿನ್, ಶ್ರೇಯಸ್; ಮುಂಬೈ ಇಂಡಿಯನ್ಸ್‌‌ ಪ್ಲೇಆಫ್ ಕಥೆಯೇನು?

ಇನ್ನು ಭಾನುವಾರ ( ಅಕ್ಟೋಬರ್ 3 ) ನಡೆದ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಿದವು. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 6 ವಿಕೆಟ್‍ಗಳ ಜಯವನ್ನು ಸಾಧಿಸುವುದರ ಮೂಲಕ ತನ್ನ ಪ್ಲೇ ಆಫ್ ಸುತ್ತಿನ ಕನಸನ್ನು ಮತ್ತಷ್ಟು ಭದ್ರಪಡಿಸಿಕೊಂಡಿತು. ಅತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯಲ್ಲಿ ತನ್ನ ಹತ್ತನೇ ಸೋಲನ್ನು ಕಂಡಿತು. ಇನ್ನು ಈ ಪಂದ್ಯ ಮುಗಿದ ನಂತರ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಅಂಕಪಟ್ಟಿ, ಆರೆಂಜ್ ಕ್ಯಾಪ್ ಆಟಗಾರರ ಪಟ್ಟಿ ಮತ್ತು ಪರ್ಪಲ್ ಕ್ಯಾಪ್ ಆಟಗಾರರ ಪಟ್ಟಿ ಹೇಗಿದೆ ಎಂಬುದರ ಮಾಹಿತಿ ಮುಂದೆ ಓದಿ.

ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ನಂತರ ಅಂಕ ಪಟ್ಟಿ ಹೀಗಿದೆ

ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ನಂತರ ಅಂಕ ಪಟ್ಟಿ ಹೀಗಿದೆ

1. ಚೆನ್ನೈ ಸೂಪರ್ ಕಿಂಗ್ಸ್ - 18 ಅಂಕಗಳು
2. ಡೆಲ್ಲಿ ಕ್ಯಾಪಿಟಲ್ಸ್ - 18 ಅಂಕಗಳು
3. ರಾಯಲ್ ಚಾಲೆಂಜರ್ಸ್ ಬೆಂಗಳೂರು - 16 ಅಂಕಗಳು
4. ಕೋಲ್ಕತ್ತಾ ನೈಟ್ ರೈಡರ್ಸ್ - 12 ಅಂಕಗಳು
5. ಪಂಜಾಬ್ ಕಿಂಗ್ಸ್‌ - 10 ಅಂಕಗಳು
6. ರಾಜಸ್ಥಾನ್ ರಾಯಲ್ಸ್ - 10 ಅಂಕಗಳು
7. ಮುಂಬೈ ಇಂಡಿಯನ್ಸ್ - 10 ಅಂಕಗಳು
8. ಸನ್ ರೈಸರ್ಸ ಹೈದರಾಬಾದ್ - 4 ಅಂಕಗಳು

ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದ ನಂತರ ಆರೆಂಜ್ ಕ್ಯಾಪ್ ಪಟ್ಟಿ ಹೀಗಿದೆ

ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದ ನಂತರ ಆರೆಂಜ್ ಕ್ಯಾಪ್ ಪಟ್ಟಿ ಹೀಗಿದೆ

ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಮುಗಿದ ನಂತರ ಆರೆಂಜ್ ಕ್ಯಾಪ್ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ

1. ಕೆಎಲ್ ರಾಹುಲ್ - 528 ರನ್‌ಗಳು
2. ರುತುರಾಜ್ ಗಾಯಕ್ವಾಡ್ - 508 ರನ್‌ಗಳು
3. ಸಂಜು ಸ್ಯಾಮ್ಸನ್ - 480 ರನ್‌ಗಳು
4. ಶಿಖರ್ ಧವನ್ - 462 ರನ್‌ಗಳು
5. ಫಾಫ್ ಡು ಪ್ಲೆಸಿಸ್ - 460 ರನ್‌ಗಳು

ಮಯಾಂಕ್ ಅರ್ಧ ಶತಕ ಬಾರಿಸಿದರೆ ತಂಡ ಸೋಲೋದು ಗ್ಯಾರಂಟಿಯ ಅಂತೆ!! | Oneindia Kannada
ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದ ನಂತರ ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ

ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದ ನಂತರ ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ

ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಮುಗಿದ ನಂತರ ಪರ್ಪಲ್ ಕ್ಯಾಪ್ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ

1. ಹರ್ಷಲ್ ಪಟೇಲ್‌ - 26 ವಿಕೆಟ್‍ಗಳು
2. ಅವೇಶ್ ಖಾನ್ - 21 ವಿಕೆಟ್‍ಗಳು
3. ಮೊಹಮ್ಮದ್ ಶಮಿ - 18 ವಿಕೆಟ್‍ಗಳು
4. ಜಸ್ಪ್ರೀತ್ ಬುಮ್ರಾ - 17 ವಿಕೆಟ್‍ಗಳು
5. ಅರ್ಷದೀಪ್ ಸಿಂಗ್ - 16 ವಿಕೆಟ್‍ಗಳು

Story first published: Monday, October 4, 2021, 13:31 [IST]
Other articles published on Oct 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X