ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಮುಂಬೈ ಇಂಡಿಯನ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಪಂಜಾಬ್ ಕಿಂಗ್ಸ್

IPL 2021: Punjab Kings have given the target of 136 to Mumbai Indians

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಸೆಪ್ಟೆಂಬರ್ 28 ) ಎರಡು ಪಂದ್ಯಗಳನ್ನು ಆಯೋಜಿಸಲಾಗಿದ್ದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ. ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 42ನೇ ಪಂದ್ಯವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದರು. ಹೀಗೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿತು. ತಂಡ 36 ರನ್ ಗಳಿಸಿದ್ದಾಗ ಆರಂಭಿಕ ಆಟಗಾರನಾದ ಮನ್ ದೀಪ್ ಸಿಂಗ್ 15 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ಸ್ಫೋಟಕ ಆಟಗಾರ ಕ್ರಿಸ್ ಗೇಲ್ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು ಹಾಗೂ ಕೆಎಲ್ ರಾಹುಲ್ 21 ರನ್ ಗಳಿಸಿ ಔಟ್ ಆದರು. ಹೀಗೆ ಪಂಜಾಬ್ ಕಿಂಗ್ಸ್ ತಂಡ ತನ್ನ ಪ್ರಮುಖ 3 ವಿಕೆಟ್‍ಗಳನ್ನು 41 ರನ್‌ಗಳಿಗೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಸರೆಯಾದ ಏಡನ್ ಮಾರ್ಕ್ರಮ್ 29 ಎಸೆತಗಳಿಗೆ 42 ರನ್ ಚಚ್ಚಿದರು. ಪಂಜಾಬ್ ಕಿಂಗ್ಸ್ ತಂಡದ ಮತ್ತೋರ್ವ ಆಟಗಾರ ನಿಕೋಲಸ್ ಪೂರನ್ 2 ರನ್ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು ಮತ್ತು ದೀಪಕ್ ಹೂಡಾ 26 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು.

ಉಳಿದಂತೆ ಪಂಜಾಬ್ ಕಿಂಗ್ಸ್ ತಂಡದ ಹರ್ ಪ್ರೀತ್ ಬ್ರಾರ್ ಅಜೇಯ 14 ಮತ್ತು ನಾಥನ್ ಎಲ್ಲಿಸ್ ಅಜೇಯ 6 ರನ್ ಗಳಿಸುವುದರ ಮೂಲಕ ಪಂಜಾಬ್ ಕಿಂಗ್ಸ್ ತಂಡ 6 ವಿಕೆಟ್ ನಷ್ಟಕ್ಕೆ 20 ಓವರ್‌ಗಳಲ್ಲಿ 135 ರನ್‌ಗಳನ್ನು ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 136 ರನ್‌ಗಳ ಅಲ್ಪ ಮೊತ್ತದ ಗುರಿಯನ್ನು ನೀಡಿದೆ.

1
50864
Rishab Pant ಮಾಡಿದ ಈ ಕೆಲಸಕ್ಕೆ Dinesh Karthik ಅನುಭವಿಸಬೇಕಿತ್ತು | Oneindia Kannada

ಇನ್ನು ಮುಂಬೈ ಇಂಡಿಯನ್ಸ್ ತಂಡದ ಪರ ಕೀರನ್ ಪೊಲಾರ್ಡ್ ಮತ್ತು ಜಸ್ ಪ್ರೀತ್ ಬುಮ್ರಾ ತಲಾ 2 ವಿಕೆಟ್‍ಗಳನ್ನು ಪಡೆದರೆ, ರಾಹುಲ್ ಚಾಹರ್ ಮತ್ತು ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

Story first published: Tuesday, September 28, 2021, 21:45 [IST]
Other articles published on Sep 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X