ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಪಂಜಾಬ್ ಕಿಂಗ್ಸ್ ತಂಡಕ್ಕೆ ಆಸಿಸ್‌ನ ಹೊಸ ಬೌಲಿಂಗ್ ಅಸ್ತ್ರ ಸೇರ್ಪಡೆ

Ipl 2021: Punjab Kings sign Australia cricketer Nathan Ellis for the season

ಐಪಿಎಲ್ 14ನೇ ಆವೃತ್ತಿಯ ಎರಡನೇ ಚರಣದ ಪಂದ್ಯಗಳಿಗೆ ದಿನಗಣನೆ ಆರಂಭವಾಗಿದೆ. ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಸಹಿತ ಕೆಲ ತಂಡಗಳು ಈಗಾಗಲೇ ಯುಎಇ ತಲುಪಿದ್ದು ಟೂರ್ನಿಗೆ ಅಭ್ಯಾಸವನ್ನು ಆರಂಭಿಸಿದೆ. ಈ ಸಂದರ್ಭದಲ್ಲಿ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಹೊಸ ಆಟಗಾನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆಸ್ಟ್ರೇಲಿಯಾದ ವೇಗದ ಬೌಲರ್ ಆಗಿ ಮಿಂಚಿತ್ತಿರುವ ನಥನ್ ಎಲ್ಲಿಸ್ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ಸೆಪ್ಟೆಂಬರ್ 19ರಿಮದ ಆರಂಬವಾಗಲಿರುವ ಐಪಿಎಲ್ 14ನೇ ಆವೃತ್ತಿಯ ಉಳಿದ ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಈ ವೇಗಿ ಭಾಗಿಯಾಗಲಿದ್ದಾರೆ.

ನಥನ್ ಎಲ್ಲಿಸ್ ಕಳೆದ ಒಂದು ದಿನಗಳ ಅಂತರದಲ್ಲಿ ಎರಡು ಪ್ರಮುಖ ಸಿಹಿ ಸುದ್ದಿಯನ್ನು ಈ ಮೂಲಕ ಪಡೆದುಕೊಂಡಿದ್ದಾರೆ. ಹಿಂದಿನ ಹಿಂದೆಯಷ್ಟೇ ಆಸ್ಟ್ರೇಲಿಯಾದ ಈ ಪ್ರತಿಭಾವಂತ ಯುವ ವೇಗದ ಬೌಲರ್ ಈ ಬಾರಿಯ ಟಿ20 ವಿಶ್ವಕಪ್‌ನ ತಂಡದೊಂದಿಗೆ ಮೀಸಲು ಆಟಗಾರನಾಗಿ ತೆರಳಲು ಅವಕಾಶವನ್ನು ಪಡೆದುಕೊಂಡಿದ್ದರು. ಈಗ ವಿಶ್ವದ ಪ್ರಖ್ಯಾತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿಯೂ ಭಾಗವಹಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

"ಭಾರತ ಟೆಸ್ಟ್ ತಂಡದ ಬಗ್ಗೆ ವಿರಾಟ್ ಕೊಹ್ಲಿ 2015ರಲ್ಲಿ ನುಡಿದಿದ್ದ ಭವಿಷ್ಯ ನಿಜವಾಗಿದೆ"

ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂಲಕ ಪದಾರ್ಪಣೆ: ನಥನ್ ಎಲ್ಲಿಸ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಕಳೆದ ಬಾಂಗ್ಲಾದೇಶ ವಿರುದ್ಧದ ಸರಣಿ ಮೂಲಕ ಪದಾರ್ಪಣೆ ಮಾಡಿದ್ದಾರೆ. ಈ ಸರಣಿಯನ್ನು ಆಸ್ಟ್ರೇಲಿಯಾ 1-4 ಅಂತರದಿಮದ ಹೀನಾಯವಾಗಿ ಸೋಲು ಕಂಡಿತ್ತು. ಈ ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದರು ನಥನ್ ಎಲ್ಲಿಸ್. ತಮ್ಮ ಚೊಚ್ಚಲ ಪಂದ್ಯದಲ್ಲಿಯೇ ಎಲ್ಲಿಸ್ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಬೆರಗುಗೊಳಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ತಮ್ಮ ಆಗಮನವನ್ನು ಭರ್ಜರಿಯಾಗಿ ಸಾರಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಆಯೋಜಿಸುವ ಬಿಗ್‌ಬ್ಯಾಷ್ ಕ್ರಿಕೆಟ್ ಲೀಗ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದಾರೆ.

ಪಂಜಾಬ್ ಕಿಂಗ್ಸ್ ತಮಡದ ಇಬ್ಬರು ಆಟಗಾರರು ಅಲಭ್ಯ: ಈ ಬಾರಿಯ ಐಪಿಎಲ್‌ನ ಉಳಿದ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ ಪಂಜಾಬ್ ಕಿಂಗ್ಸ್ ತಮಡದ ಇಬ್ಬರು ಆಟಗಾರರು ಈ ಬಾರಿಯ ಟೂರ್ನಿಯ ಉಳಿದ ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆ. ಜೇ ರಿಚರ್ಡ್ಸನ್ ಹಾಗೂ ರಿಲೆ ಮೆರಿಡಿತ್ ಐಪಿಎಲ್‌ನ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾದ ಈ ಇಬ್ಬರು ಕೂಡ ಗಾಯದಿಂದ ಅಸಮರ್ಥರಾಗಿದ್ದಾರೆ. ಈ ವಿಚಾರವಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿಯನ್ನು ನೀಡಿತ್ತು. ಆ ಬಳಿಕವೇ ಪಂಜಾಬ್ ಕಿಂಗ್ಸ್‌ಗೆ ಈ ವಿಚಾರ ಅರಿವಿಗೆ ಬಂದಿದೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಒಬ್ಬ ಆಟಗಾರನ ಬದಲಿಗೆ ನಥನ್ ಎಲ್ಲಿಸ್ ಅವರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

"ನಮಗೆ ನಿನ್ನೆ ಕ್ರಿಕೆಟ್ ಆಸ್ಟ್ರೇಲಿಯಾದ ಪ್ರೆಸ್‌ ಕಾನ್ಫರೆನ್ಸ್‌ವರೆಗೂ ಜೇ ಹಾಗೂ ರಿಲೇ ಅವರ ಫಿಟ್‌ನೆಸ್ ಬಗ್ಗೆ ಮಾಹಿತಿಯಿರಲಿಲ್ಲ. ಈ ಮಾಧ್ಯಮಗೋಷ್ಠಿಯ ಬಳಿಕವೇ ನಮಗೆ ಈ ಇಬ್ಬರು ಆಟಗಾರರು ಟೂರ್ನಿಗೆ ಲಭ್ಯವಿರುವುದಿಲ್ಲ ಎಂಬುದು ತಿಳಿದುಬಂತು. ಹೀಗಾಗಿ ನಾವು ಈಗ ನಥನ್ ಎಲ್ಲಿಸ್ ಅವರೊಂದಿಗೆ ಬದಲಿ ಆಟಗಾರನಾಗಿ ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಇನ್ನೋರ್ವ ಬದಲಿ ಆಟಗಾರನನ್ನು ನಾವು ಸೇರ್ಪಡೆಗೊಳಿಸಬೇಕಿದ್ದು ಒಂದೆರಡು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಈಗಾಗಲೇ ಕೆಲ ಆಟಗಾರರೊಂದಿಗೆ ನಾವು ಮಾತುಕತೆಯನ್ನು ನಡೆಸುತ್ತಿದ್ದು ಕೋಚ್ ಅನಿಲ್ ಕುಂಬ್ಳೆ ಶೀಘ್ರದಲ್ಲಿಯೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ" ಎಂದು ಪಂಜಾಬ್ ಕಿಂಗ್ಸ್ ತಂಡದ ಸಿಇಒ ಸತೀಶ್ ಮೆನನ್ ತಿಳಿಸಿದ್ದಾರೆ.

ಸಂಕಷ್ಟದಲ್ಲಿ ಪಂಜಾಬ್ ಕಿಂಗ್ಸ್ ತಂಡ: ಇನ್ನು ಈ ಬಾರಿಯ ಐಪಿಎಲ್‌ನಲ್ಲಿಯೂ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ನೀರಸ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಟೂರ್ನಿ ಕೊರೊನಾವೈರಸ್‌ನ ಕಾರಣದಿಂದಾಗಿ ಮುಂದೂಡಿಕೆತಯಾಗುವ ಮುನ್ನ ಪಂಜಾಬ್ ಕಿಂಗ್ಸ್ ತಂಡ ನೀಡಿದ ಪ್ರದರ್ಶನ ಕಳವಳಕಾರಿಯಾಗಿದೆ. ಪಂಜಾಬ್ ಕಿಂಗ್ಸ್ ಮೊದಲ ಚರಣದಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 3 ಪಂದ್ಯಗಳನ್ನು ಮಾತ್ರವೇ ಗೆದ್ದುಕೊಂಡಿದೆ. ಐದು ಪಂದ್ಯಗಳಲ್ಲಿ ಸೋಲಿನ ರುಚಿನ ಕಂಡಿದೆ.

ಈತನ ಎಂಟ್ರಿಯಿಂದ ಪವರ್ಫುಲ್ ಆಗಲಿದೆ ಟೀಮ್ ಇಂಡಿಯಾ ಬ್ಯಾಟಿಂಗ್ | Oneindia Kannada

ಇನ್ನು ನಾಯಕ ಕೆಎಲ್ ರಾಹುಲ್ ಈ ಬಾರಿಯ ಆವೃತ್ತಿಯಲ್ಲಿಯೂ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದು ಉಳಿದ ಆಟಗಾರರಿಂದ ಅಸ್ಥಿರ ಪ್ರದರ್ಶನ ಬರುತ್ತಿದೆ. ಎರಡನೇ ಚರಣದ ಆಟದಲ್ಲಿ ಪಂಜಾಬ್ ಕಿಂಗ್ಸ್ ಪರವಾಗಿ ಉತ್ತಮ ಪ್ರದರ್ಶನ ಹೊರಬರುವ ನಿರೀಕ್ಷೆಯಿದ್ದು ಉಳಿದ ಆರು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪ್ಲೇಆಫ್‌ಗೆ ಪ್ರವೇಶ ಪಡೆಯಲು ಪ್ರಯತ್ನ ಪಡಲಿದೆ.

Story first published: Sunday, August 22, 2021, 10:09 [IST]
Other articles published on Aug 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X