ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಪಂಜಾಬ್ vs ರಾಜಸ್ಥಾನ್ ಪಂದ್ಯ, ಮೈಲಿಗಲ್ಲುಗಳು ಹಾಗೂ ದಾಖಲೆಗಳ ವಿವರ

IPL 2021, Punjab kings vs Rajastan Royals, match 32, Stats and Records Preview

ಈ ಬಾರಿಯ ಐಪಿಎಲ್‌ನ ಮೊದಲಾರ್ಧದಲ್ಲಿ ನೀರಸ ಪ್ರದರ್ಶನ ನೀಡಿದ್ದ ಎರಡು ತಂಡಗಳಾದ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್‌ನಲ್ಲಿ ಇಂದು ಮುಖಾಮುಖಿಯಾಗುತ್ತಿದೆ. ಈ ಪಂದ್ಯ ಎರಡು ತಂಡಗಳ ಪಾಲಿಗೂ ಬಹಳ ನಿರ್ಣಾಯಕವಾಗಿದೆ. ಅಂಕಪಟ್ಟಿಯಲ್ಲಿ ತಳಮಟ್ಟದಲ್ಲಿ ಪೈಪೋಟಿ ನಡೆಸುತ್ತಿರುವ ಈ ಎರಡು ತಂಡಗಳು ಈ ಪಂದ್ಯವನ್ನು ಗೆದ್ದು ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಳ್ಳುವ ಪ್ರಯತ್ನವನ್ನು ನಡೆಸಲಿದೆ.

ಐಪಿಎಲ್ ಇತಿಹಾಸದಲ್ಲಿ 7ನೇ ಬಾರಿಗೆ ಮೂರಂಕಿ ದಾಟಲು ವಿಫಲವಾದ ಆರ್‌ಸಿಬಿಐಪಿಎಲ್ ಇತಿಹಾಸದಲ್ಲಿ 7ನೇ ಬಾರಿಗೆ ಮೂರಂಕಿ ದಾಟಲು ವಿಫಲವಾದ ಆರ್‌ಸಿಬಿ

ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಆಟಗಾರರು ತೀವ್ರ ಪೈಪೋಟಿಯನ್ನು ನಡೆಸುವ ನಿರೀಕ್ಷೆಯಿದೆ. ಎರಡು ತಂಡಗಳಲ್ಲಿಯೂ ಸಾಕಷ್ಟು ಪ್ರತಿಭಾನ್ವಿತ ಆಟಗಾರರಿದ್ದು ಎದುರಾಳಿ ಮೇಲೆ ಸವಾರಿ ಮಾಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಕೆಲ ಆಟಗಾರರು ಕೆಲ ಮಹತ್ವದ ಮೈಲುಗಲ್ಲು ಹಾಗೂ ದಾಖಲೆಗಳನ್ನು ಬರೆಯಲು ಸಜ್ಜಾಗಿದ್ದಾರೆ. ಅಂಥಾ ದಾಖಲೆಗಳು ಹಾಗೂ ಮೈಲಿಗಲ್ಲಿಗಳ ವಿವರ ಇಲ್ಲಿದೆ.

ಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿ

* ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಐಪಿಎಲ್‌ನಲ್ಲಿ 3000 ರನ್‌ಗಳ ಮೈಲಿಗಲ್ಲು ತಲುಪಲು 22 ರನ್‌ಗಳ ಅಗತ್ಯವಿದೆ.
* ಇನ್ನು ಐಪಿಎಲ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು ಕೆಎಲ್ ರಾಹುಲ್ 4 ಸಿಕ್ಸರ್‌ಗಳನ್ನು ಸಿಡಿಸಬೇಕಿದೆ.
* ಟಿ20 ಕ್ರಿಕೆಟ್‌ನ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಕೂಡ ಐಪಿಎಲ್‌ನಲ್ಲಿ ಮಹತ್ವದ ಮೈಲಿಗಲ್ಲೊಂದರ ಸನಿಹದಲ್ಲಿದ್ದಾರೆ. ಐಪಿಎಲ್‌ನಲ್ಲಿ 5000 ರನ್ ಪೂರೈಸಲು ಕ್ರಿಸ್ ಗೇಲ್ ಕೇವಲ 10 ರನ್‌ಗಳಿಂದ ದೂರವಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ 5000 ರನ್ ಪೂರೈಸಿದ ಏಳನೇ ಆಟಗಾರನಾಗಲಿದ್ದಾರೆ ಪಂಜಾಬ್ ಕಿಂಗ್ಸ್‌ನ ಈ ಅನುಭವಿ.
*ಇನ್ನು ಪಂಜಾಬ್ ಕಿಂಗ್ಸ್ ತಂಡದ ಮತ್ತೋರ್ವ ಪ್ರಮುಖ ಆಟಗಾರ ಮಯಾಂಕ್ ಅಗರ್ವಾಲ್ ಕೂಡ ಈ ಪಂದ್ಯದಲ್ಲಿ ಮೈಲಿಗಲ್ಲೊಂದನ್ನು ದಾಟುವ ಅವಕಾಶ ಹೊಂದಿದ್ದಾರೆ. ಐಪಿಎಲ್‌ನಲ್ಲಿ 2000 ರನ್ ಪೂರೈಸಲು ಮಯಾಂಕ್ ಅಗರ್‌ವಾಲ್‌ಗೆ 46 ರನ್ ಅಗತ್ಯವಿದೆ.
* ಶ್ರೇಯಸ್ ಗೋಪಾಲ್ ಐಪಿಎಲ್ ನಲ್ಲಿ 50 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಎರಡು ವಿಕೆಟ್ ಅಗತ್ಯವಿದೆ.
* ಈ ಬಾರಿಯ ಐಪಿಎಲ್‌ನಲ್ಲಿ ವೆಸ್ಟ್ ಇಂಡೀಸ್‌ನ ಯುವ ಆಟಗಾರ ನಿಕೋಲಸ್ ಪೂರನ್ ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಆಘಾತ ಮೂಡಿಸಿದ್ದಾರೆ. ನಿರಂತರವಾಗಿ ಅವಕಾಶವನ್ನು ಪಡೆಯುತ್ತಿದ್ದರೂ ಪೂರನ್ ಹೀನಾಯ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್‌ಗೆ ಇಳಿದ 7 ಇನ್ನಿಂಗ್ಸ್‌ಗಳಲ್ಲಿ ಬರೊಬ್ಬರಿ 5 ಬಾರಿ ಶೂನ್ಯ ಸುತ್ತಿದ್ದಾರೆ. ನಿಕೋಲಸ್ ಪೂರನ್ ಈ ಬಾರಿಯ ಆವೃತ್ತಿಯ ಏಳು ಪಂದ್ಯಗಳಲ್ಲಿ ರನ್‌ಗಳನ್ನು ಗಳಿಸಿದ ವಿವರ ಹೀಗಿದೆ: 0, 0, 9, 0, 0, 19, 0

'ಧೋನಿ ಟಿಪ್ಸ್ ಕೊಟ್ಟಿದ್ದಾರೆ, ಒಳ್ಳೆಯ ಆರಂಭ ಸಿಕ್ಕಿದೆ, ಈ ಸಲ ಕಪ್ ನಮ್ದೇ' ಎಂದ ಆರ್‌ಸಿಬಿ ಆಟಗಾರ!'ಧೋನಿ ಟಿಪ್ಸ್ ಕೊಟ್ಟಿದ್ದಾರೆ, ಒಳ್ಳೆಯ ಆರಂಭ ಸಿಕ್ಕಿದೆ, ಈ ಸಲ ಕಪ್ ನಮ್ದೇ' ಎಂದ ಆರ್‌ಸಿಬಿ ಆಟಗಾರ!

ಎರಡು ತಂಡಗಳ ಸಂಪೂರ್ಣ ಆಟಗಾರರ ವಿವರ
ಪಂಜಾಬ್ ಕಿಂಗ್ಸ್ (ಪಿಬಿಕೆಎಸ್): ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಶಾರುಖ್ ಖಾನ್, ರವಿ ಬಿಶ್ನೋಯ್, ಆದಿಲ್ ರಶೀದ್, ಮೊಹಮ್ಮದ್ ಶಮಿ, ಹರಪ್ರೀತ್ ಬ್ರಾರ್, ಐಡೆನ್ ಮಾರ್ಕ್ರಮ್, ಇಶಾನ್ ಪೊರೆಲ್, ನಾಥನ್ ಎಲ್ಲಿಸ್, ಕ್ರಿಸ್ ಜೋರ್ಡಾನ್, ಜಲಜ್ ಸಕ್ಸೇನಾ, ಮೊಯಿಸ್ ಹೆನ್ರಿಕ್ಸ್, ಪ್ರಭಸಿಮ್ರಾನ್ ಸಿಂಗ್, ಮಂದೀಪ್ ಸಿಂಗ್, ಮುರುಗನ್ ಅಶ್ವಿನ್, ಫ್ಯಾಬಿಯನ್ ಅಲೆನ್, ಸೌರಭ್ ಕುಮಾರ್, ಸರ್ಫರಾಜ್ ಖಾನ್, ಉತ್ಕರ್ಶ್ ಸಿಂಗ್, ದರ್ಶನ್ ನಲ್ಕಂಡೆ, ಅರ್ಷದೀಪ್ ಸಿಂಗ್

ರಾಜಸ್ಥಾನ ರಾಯಲ್ಸ್ (ಆರ್ಆರ್): ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ / ನಾಯಕ), ಲಿಯಾಮ್ ಲಿವಿಂಗ್ಸ್ಟನ್, ರಿಯಾನ್ ಪರಾಗ್, ಶಿವಂ ದುಬೆ, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ತಬ್ರೈಜ್ ಶಮ್ಸಿ, ಶ್ರೇಯಸ್ ಗೋವಿಲ್, ಮುಸ್ತಫಿಜುರ್ ರಹಮಾನ್, ಜಯ್‌ದೇವ್ ಉನಾದ್ಕಟ್, ಡೇವಿಡ್ ಮಿಲ್ಲರ್, ಮನನ್ ವೊಹ್ರಾ, ಕೆಸಿ ಕರಿಯಪ್ಪ, ಗ್ಲೆನ್ ಫಿಲಿಪ್ಸ್, ಮಹಿಪಾಲ್ ಲೊಮರ್, ಓಶಾನೆ ಥಾಮಸ್, ಮಯಾಂಕ್ ಮಾರ್ಕಂಡೆ, ಅನುಜ್ ರಾವತ್, ಜೆರಾಲ್ಡ್ ಕೊಯೆಟ್ಜಿ, ಕುಲ್ದಿಪ್ ಯಾದವ್, ಆಕಾಶ್ ಸಿಂಗ್

Story first published: Tuesday, September 21, 2021, 17:00 [IST]
Other articles published on Sep 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X