Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಪಂಜಾಬ್ vs ಹೈದರಾಬಾದ್, ಪ್ಲೇಯಿಂಗ್ ‍XI, ಅಪ್‌ಡೇಟ್ಸ್

IPL 2021:Punjab Kings vs Sunrisers Hyderabad, Match 14, Updates

ಐಪಿಎಲ್ ಅಂಗಳದಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಡಿದ ಮೂರು ಪಂದ್ಯಗಳಲ್ಲಿ ಮೊದಲ ಪಂದ್ಯವನ್ನು ಗೆದ್ದರೂ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಸೋಲು ಕಂಡಿರುವುದು ತಂಡವನ್ನು ಕುಗ್ಗುವಂತೆ ಮಾಡಿದೆ. ಡೆಲ್ಲಿ ಕ್ಯಾಪಿಟಲ್ಸ ವಿರುದ್ಧ ಬೃಹತ್ ರನ್‌ಗಳಿಸಿಯೂ ತಂಡದ ಗೆಲುವು ಸಾಧ್ಯವಾಗಿರಲಿಲ್ಲ. ಹೀಗಾಗಿ ನಾಯಕ ಕೆಎಲ್ ರಾಹುಲ್ ನಿರಾಶರಾಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಫ್ಯಾಬಿಯನ್ ಅಲೆನ್ ಹಾಗೂ ಮಾಯಿಸಿಸ್ ಹೆನ್ರಿಕ್ಸ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಸೋಲು ಕಂಡಿದೆ. ಹೀಗಾಗಿ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮೂರು ಬದಲಾವಣೆಗಳನ್ನು ಮಾಡಿಕೊಂಡಿದೆ. ಮನೀಶ್ ಪಾಂಡೆ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಕೇನ್ ವಿಲಿಯಮ್ಸನ್, ಕೇದಾರ್ ಜಾಧವ್ ಹಾಗೂ ಸಿದ್ಧಾರ್ಥ್ ಕೌಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಪಂಜಾಬ್ ಕಿಂಗ್ಸ್ ಆಡುವ ಬಳಗ:

ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಮೊಯಿಸಸ್ ಹೆನ್ರಿಕ್ಸ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಶಾರುಖ್ ಖಾನ್, ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್

ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ವಿರಾಟ್ ಸಿಂಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ಕೇದಾರ್ ಜಾಧವ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಿದ್ದಾರ್ಥ್ ಕೌಲ್

Story first published: Wednesday, April 21, 2021, 15:39 [IST]
Other articles published on Apr 21, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+